IND vs ENG: ಧರ್ಮಶಾಲಾ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕೆ ಮಳೆಯ ಆತಂಕ..!
IND vs ENG: ಮುಂದಿನ ಕೆಲವು ದಿನಗಳಲ್ಲಿ ಧರ್ಮಶಾಲಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಮಳೆಯಿಂದಾಗಿ ಐದನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆಯಿಂದಾಗಿ ರದ್ದಾಗಬಹುದು. ಅಂತಿಮ ಟೆಸ್ಟ್ ಆರಂಭಕ್ಕೂ ಮುನ್ನವೇ ಧರ್ಮಶಾಲಾದಲ್ಲಿ ವಾತಾವರಣ ಆತಂಕ ಮೂಡಿಸಿದ್ದು, ಅಭಿಮಾನಿಗಳಿಗೂ ಆತಂಕ ತಂದಿದೆ.
ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಮಾರ್ಚ್ 7 ರಿಂದ ಗುರುವಾರ ನಡೆಯಲಿದೆ. ಧರ್ಮಶಾಲಾದಲ್ಲಿ ((Dharamsala) ನಡೆಯಲಿರುವ ಈ ಪಂದ್ಯದ ಮೇಲೆ ಅಭಿಮಾನಿಗಳು ಕೂಡ ಕಣ್ಣಿಟ್ಟಿದ್ದಾರೆ. ಭಾರತ ತಂಡ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯವನ್ನೂ ಗೆಲ್ಲಲು ಪ್ರಯತ್ನಿಸಲಿದೆ. ಹೈದರಾಬಾದ್‌ನಲ್ಲಿ ನಡೆದಿದ್ದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದ್ದನ್ನು ಬಿಟ್ಟರೆ ಉಳಿದ ಮೂರೂ ಪಂದ್ಯಗಳನ್ನು ಭಾರತ ಗೆದ್ದುಕೊಂಡು ಸರಣಿ ತನ್ನದಾಗಿಸಿಕೊಂಡಿದೆ.
ಪಿಚ್ ಯಾರಿಗೆ ಸಹಕಾರಿ?
ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದ ಪಿಚ್ ಬಗ್ಗೆ ಹೇಳುವುದಾದರೆ, ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಮೇಲುಗೈ ಸಾಧಿಸುವ ನಿರೀಕ್ಷೆಯಿದೆ. ಇದುವರೆಗೆ ಧರ್ಮಶಾಲಾದ ಈ ಮೈದಾನದಲ್ಲಿ ಕೇವಲ ಒಂದು ಟೆಸ್ಟ್ ಪಂದ್ಯ ಮಾತ್ರ ನಡೆದಿದೆ. ಈ ಟೆಸ್ಟ್ ಪಂದ್ಯದ ವೇಳೆ ವೇಗದ ಬೌಲರ್‌ಗಳು ಮತ್ತು ಸ್ಪಿನ್ನರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದರು. ಈ ಟೆಸ್ಟ್ ಪಂದ್ಯದಲ್ಲಿ ಒಟ್ಟು 30 ವಿಕೆಟ್‌ಗಳು ಬಿದಿದ್ದವು. ಇದರಲ್ಲಿ ವೇಗದ ಬೌಲರ್‌ಗಳು 12 ವಿಕೆಟ್ ಪಡೆದರೆ, ಸ್ಪಿನ್ನರ್‌ಗಳು 18 ವಿಕೆಟ್ ಪಡೆದಿದ್ದರು. ಇಂತಹ ಪರಿಸ್ಥಿತಿಯಲ್ಲಿ ಕುಲ್ದೀಪ್ ಯಾದವ್. ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಮುಂದೆ ಮತ್ತೊಮ್ಮೆ ಇಂಗ್ಲೆಂಡ್ ಬ್ಯಾಟರ್ಗಳು ರನ್ ಗಳಿಸಲು ಪರದಾಡಬಹುದು.
IND vs ENG: ಭಾರತ- ಇಂಗ್ಲೆಂಡ್ ಕೊನೆಯ ಟೆಸ್ಟ್ ಯಾವಾಗ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಹವಾಮಾನ ವರದಿ ಏನು?
ಮುಂದಿನ ಕೆಲವು ದಿನಗಳಲ್ಲಿ ಧರ್ಮಶಾಲಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಮಳೆಯಿಂದಾಗಿ ಐದನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆಯಿಂದಾಗಿ ರದ್ದಾಗಬಹುದು. ಅಂತಿಮ ಟೆಸ್ಟ್ ಆರಂಭಕ್ಕೂ ಮುನ್ನವೇ ಧರ್ಮಶಾಲಾದಲ್ಲಿ ವಾತಾವರಣ ಆತಂಕ ಮೂಡಿಸಿದ್ದು, ಅಭಿಮಾನಿಗಳಿಗೂ ಆತಂಕ ತಂದಿದೆ. ವರದಿ ಪ್ರಕಾರ ಟೆಸ್ಟ್ ಆರಂಭವಾದ ಮೊದಲ ಎರಡು ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆ ನಂತರದ ಎರಡು ದಿನಗಳಲ್ಲಿ ಬಿಸಿಲು ಹೆಚ್ಚಾಗಿದ್ದು, ಕೊನೆಯ ದಿನ ಅಂದರೆ ಮಾರ್ಚ್ 11ರವರೆಗೆ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ.
ಇಂಗ್ಲೆಂಡ್ ಪ್ಲೇಯಿಂಗ್-11: ಜಾಕ್ ಕ್ರೌಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.
ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಸರ್ಫರಾಜ್ ಖಾನ್, ರಜತ್ ಪಾಟಿದಾರ್ / ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ