
ಲಂಡನ್‌ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಮೂರನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಒಲೀ ಪೋಪ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ ನಲ್ಲಿ 224 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ಭರ್ಜರಿ ಆರಂಭ ಪಡೆದಿತ್ತು.
ಆರಂಭಿಕ ದಾಂಡಿಗರಾದ ಬೆನ್ ಡಕೆಟ್ ಹಾಗೂ ಝಾಕ್ ಕ್ರಾಲಿ ಮೊದಲ ವಿಕೆಟ್ ಗೆ 92 ರನ್ ಕಲೆಹಾಕಿದ್ದರು. ಇತ್ತ ಇಂಗ್ಲೆಂಡ್ ಓಪನರ್ಗಳ ಅಬ್ಬರಕ್ಕೆ ಟೀಮ್ ಇಂಡಿಯಾ ವೇಗಿಗಳು ಲಯ ತಪ್ಪಿದ್ದರು. ಅದರಲ್ಲೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ನಿಖರ ದಾಳಿ ಸಂಘಟಿಸಲು ತಡಕಾಡುತ್ತಿದ್ದರು.
ಇದೇ ವೇಳೆ ಕನ್ನಡಿಗ ಕೆಎಲ್ ರಾಹುಲ್ ಪ್ರಸಿದ್ಧ್ ಕೃಷ್ಣಗೆ ಕನ್ನಡದಲ್ಲೇ ಸಲಹೆಗಳನ್ನು ನೀಡುತ್ತಿರುವುದು ಕಂಡು ಬಂದಿದೆ. ಈ ಸಲಹೆಗಳೊಂದಿಗೆ ಅತ್ಯುತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ 16 ಓವರ್‌ಗಳಲ್ಲಿ 62 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.
ಇನ್ನು ಪ್ರಸಿದ್ಧ್ ಕೃಷ್ಣಗೆ ಉತ್ತಮ ಸಾಥ್ ನೀಡಿದ ಮೊಹಮ್ಮದ್ ಸಿರಾಜ್ 16.2 ಓವರ್‌ಗಳಲ್ಲಿ 86 ರನ್ ನೀಡಿ 4 ವಿಕೆಟ್ ಪಡೆದರು. ಪರಿಣಾಮ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ ನಲ್ಲಿ 247 ರನ್ ಗಳಿಸಿ ಆಲೌಟ್ ಆಗಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮಿ ಓವರ್ಟನ್, ಜೋಶ್ ಟಂಗ್.
ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ
ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್, ಕರುಣ್ ನಾಯರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ.