AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15, 17… ಓವಲ್​ನಲ್ಲಿ ವಾಷಿಂಗ್ಟನ್ ಸುಂದರ್ ಸಿಡಿಲಬ್ಬರ

India vs England 5th Test: ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 224 ರನ್ ಕಲೆಹಾಕಿದರೆ, ಇಂಗ್ಲೆಂಡ್ 227 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 396 ರನ್​ಗಳಿಸಿ, ಆತಿಥೇಯರಿಗೆ 374 ರನ್​ಗಳ ಗುರಿ ನೀಡಿದೆ.

15, 17... ಓವಲ್​ನಲ್ಲಿ ವಾಷಿಂಗ್ಟನ್ ಸುಂದರ್ ಸಿಡಿಲಬ್ಬರ
Washington Sundar
ಝಾಹಿರ್ ಯೂಸುಫ್
|

Updated on:Aug 03, 2025 | 1:51 PM

Share

ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದನೇ ಟೆಸ್ಟ್ ಪಂದ್ಯವು 4ನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿಒ 224 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 247 ರನ್​ಗಳಿಸಿ ಆಲೌಟ್ ಆಗಿತ್ತು.

23 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (118) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ಆಕಾಶ್ ದೀಪ್ ಕಡೆಯಿಂದ 66 ರನ್​ಗಳು ಮೂಡಿಬಂತು. ಇನ್ನು ಕೆಳ ಕ್ರಮಾಂಕದ ಬ್ಯಾಟರ್​ಗಳೊಂದಿಗೆ ಇನಿಂಗ್ಸ್ ಕಟ್ಟಿದ ವಾಷಿಂಗ್ಟನ್ ಸುಂದರ್ ತಂಡದ ಮೊತ್ತವನ್ನು 350ರ ಗಡಿದಾಟಿಸುವಲ್ಲಿ ಯಶಸ್ವಿಯಾದರು.

ಸುಂದರ್ ಸಿಡಿಲಬ್ಬರ:

23 ಎಸೆತಗಳಲ್ಲಿ 17 ರನ್​ಗಳಿಸಿದ್ದ ವಾಷಿಂಗ್ಟನ್ ಸುಂದರ್ ಕೊನೆಯ ವಿಕೆಟ್​ ವೇಳೆ ಅಬ್ಬರಿಸಲಾರಂಭಿಸಿದರು. ಅದರಲ್ಲೂ ಪರಿಣಾಮ ಜೋಶ್ ಟಂಗ್ ಎಸೆದ 86ನೇ ಓವರ್​ನಲ್ಲಿ 2 ಭರ್ಜರಿ ಸಿಕ್ಸ್​ಗಳೊಂದಿಗೆ ವಾಷಿಂಗ್ಟನ್ 15 ರನ್ ಚಚ್ಚಿದರು. ಅಲ್ಲದೆ 5ನೇ ಎಸೆತದಲ್ಲಿ ಸಿಂಗಲ್ ತೆಗೆದರು. ಅತ್ತ ಪ್ರಸಿದ್ಧ್ ಕೃಷ್ಣ ಕೊನೆಯ ಎಸೆತವನ್ನು ರಕ್ಷಣಾತ್ಮಕವಾಗಿ ಆಡುವಲ್ಲಿ ಯಶಸ್ವಿಯಾದರು.

ಅದರಂತೆ 87ನೇ ಓವರ್​ನಲ್ಲಿ ಮತ್ತೆ ಸ್ಟ್ರೈಕ್ ಪಡೆದ ವಾಷಿಂಗ್ಟನ್ ಸುಂದರ್ 2 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 17 ರನ್​ ಚಚ್ಚಿದರು. ಈ ಮೂಲಕ ಕೇವಲ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅಂದರೆ ಕೊನೆಯ ವಿಕೆಟ್​ ಜೊತೆಗೂಡಿ ವಾಷಿಂಗ್ಟನ್ ಸುಂದರ್ ಬರೋಬ್ಬರಿ 36 ರನ್​ ಕಲೆಹಾಕಿದರು. ಈ ಮೂಲಕ ಭಾರತ ತಂಡದ ಸ್ಕೋರ್​ 396 ಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ 46 ಎಸೆತಗಳನ್ನು ಎದುರಿಸಿದ ಸುಂದರ್ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಸುಂದರ್​ ಸುಂದರ ಬ್ಯಾಟಿಂಗ್:

ಇಂಗ್ಲೆಂಡ್ ಮೊದಲ ವಿಕೆಟ್ ಪತನ:

ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 396 ರನ್​ಗಳಿಸಿ ಆಲೌಟ್ ಆದ ಬೆನ್ನಲ್ಲೇ 2ನೇ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿದೆ. ಮೊದಲ ಇನಿಂಗ್ಸ್​ನಲ್ಲಿನ 23 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 374 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿತ್ತು.

ಆದರೆ ಮೊದಲ ಸಿರಾಜ್ ಎಸೆದ 14ನೇ ಓವರ್​ನ 5ನೇ ಎಸೆತವನ್ನು ಗುರುತಿಸುವಲ್ಲಿ ಎಡವಿದ ಝಾಕ್ ಕ್ರಾಲಿ (14) ಕ್ಲೀನ್ ಬೌಲ್ಡ್ ಆಗಿದ್ದಾರೆ. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡವು 1 ವಿಕೆಟ್ ಕಳೆದುಕೊಂಡು 50 ರನ್​ ಕಲೆಹಾಕಿದೆ.

ಕೊನೆಯ ಎರಡು ದಿನದಾಟಗಳಲ್ಲಿ ಇಂಗ್ಲೆಂಡ್ ತಂಡ 324 ರನ್​ಗಳಿಸಿದರೆ ಗೆಲುವು ದಾಖಲಿಸಬಹುದು. ಇತ್ತ ಭಾರತ ತಂಡಕ್ಕೆ ಗೆಲ್ಲಲು 9 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ನಾಲ್ಕನೇ ದಿನದಾಟವು ಪಂದ್ಯದ ಫಲಿತಾಂಶವನ್ನು ನಿರ್ಧರಿಸುವ ಸಾಧ್ಯತೆಯಿದೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್ಒಲೀ ಪೋಪ್ (ನಾಯಕ), ಜೋ ರೂಟ್ಹ್ಯಾರಿ ಬ್ರೂಕ್ಜೇಕಬ್ ಬೆಥೆಲ್ಜೇಮಿ ಸ್ಮಿತ್ಗಸ್ ಅಟ್ಕಿನ್ಸನ್ಜೇಮಿ ಓವರ್ಟನ್ಜೋಶ್ ಟಂಗ್, ಕ್ರಿಸ್ ವೋಕ್ಸ್ (ಅಲಭ್ಯ).

ಇದನ್ನೂ ಓದಿ: ಮಾಜಿ ಆಟಗಾರನಿಗೆ ವಿಶೇಷ ಗೌರವ… ಹೆಡ್​ಬ್ಯಾಂಡ್ ಧರಿಸಿ ಕಣಕ್ಕಿಳಿದ ಸಿರಾಜ್

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್ಶುಭ್ಮನ್ ಗಿಲ್ಕರುಣ್ ನಾಯರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ಪ್ರಸಿದ್ಧ್ ಕೃಷ್ಣ.

Published On - 8:24 am, Sun, 3 August 25

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ