
ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದನೇ ಟೆಸ್ಟ್ ಪಂದ್ಯವು 4ನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿಒ 224 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 247 ರನ್ಗಳಿಸಿ ಆಲೌಟ್ ಆಗಿತ್ತು.
23 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (118) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ಆಕಾಶ್ ದೀಪ್ ಕಡೆಯಿಂದ 66 ರನ್ಗಳು ಮೂಡಿಬಂತು. ಇನ್ನು ಕೆಳ ಕ್ರಮಾಂಕದ ಬ್ಯಾಟರ್ಗಳೊಂದಿಗೆ ಇನಿಂಗ್ಸ್ ಕಟ್ಟಿದ ವಾಷಿಂಗ್ಟನ್ ಸುಂದರ್ ತಂಡದ ಮೊತ್ತವನ್ನು 350ರ ಗಡಿದಾಟಿಸುವಲ್ಲಿ ಯಶಸ್ವಿಯಾದರು.
23 ಎಸೆತಗಳಲ್ಲಿ 17 ರನ್ಗಳಿಸಿದ್ದ ವಾಷಿಂಗ್ಟನ್ ಸುಂದರ್ ಕೊನೆಯ ವಿಕೆಟ್ ವೇಳೆ ಅಬ್ಬರಿಸಲಾರಂಭಿಸಿದರು. ಅದರಲ್ಲೂ ಪರಿಣಾಮ ಜೋಶ್ ಟಂಗ್ ಎಸೆದ 86ನೇ ಓವರ್ನಲ್ಲಿ 2 ಭರ್ಜರಿ ಸಿಕ್ಸ್ಗಳೊಂದಿಗೆ ವಾಷಿಂಗ್ಟನ್ 15 ರನ್ ಚಚ್ಚಿದರು. ಅಲ್ಲದೆ 5ನೇ ಎಸೆತದಲ್ಲಿ ಸಿಂಗಲ್ ತೆಗೆದರು. ಅತ್ತ ಪ್ರಸಿದ್ಧ್ ಕೃಷ್ಣ ಕೊನೆಯ ಎಸೆತವನ್ನು ರಕ್ಷಣಾತ್ಮಕವಾಗಿ ಆಡುವಲ್ಲಿ ಯಶಸ್ವಿಯಾದರು.
ಅದರಂತೆ 87ನೇ ಓವರ್ನಲ್ಲಿ ಮತ್ತೆ ಸ್ಟ್ರೈಕ್ ಪಡೆದ ವಾಷಿಂಗ್ಟನ್ ಸುಂದರ್ 2 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 17 ರನ್ ಚಚ್ಚಿದರು. ಈ ಮೂಲಕ ಕೇವಲ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಅಂದರೆ ಕೊನೆಯ ವಿಕೆಟ್ ಜೊತೆಗೂಡಿ ವಾಷಿಂಗ್ಟನ್ ಸುಂದರ್ ಬರೋಬ್ಬರಿ 36 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡದ ಸ್ಕೋರ್ 396 ಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ 46 ಎಸೆತಗಳನ್ನು ಎದುರಿಸಿದ ಸುಂದರ್ 4 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 53 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
SUNDAR DHULAI! 🤯
We were served a six-hitting special 👌 #SonySportsNetwork #ENGvIND #NayaIndia #DhaakadIndia #TeamIndia #ExtraaaInnings | @Sundarwashi5 pic.twitter.com/mNSZpCeesi
— Sony Sports Network (@SonySportsNetwk) August 2, 2025
ಭಾರತ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 396 ರನ್ಗಳಿಸಿ ಆಲೌಟ್ ಆದ ಬೆನ್ನಲ್ಲೇ 2ನೇ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿದೆ. ಮೊದಲ ಇನಿಂಗ್ಸ್ನಲ್ಲಿನ 23 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 374 ರನ್ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿತ್ತು.
ಆದರೆ ಮೊದಲ ಸಿರಾಜ್ ಎಸೆದ 14ನೇ ಓವರ್ನ 5ನೇ ಎಸೆತವನ್ನು ಗುರುತಿಸುವಲ್ಲಿ ಎಡವಿದ ಝಾಕ್ ಕ್ರಾಲಿ (14) ಕ್ಲೀನ್ ಬೌಲ್ಡ್ ಆಗಿದ್ದಾರೆ. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡವು 1 ವಿಕೆಟ್ ಕಳೆದುಕೊಂಡು 50 ರನ್ ಕಲೆಹಾಕಿದೆ.
ಕೊನೆಯ ಎರಡು ದಿನದಾಟಗಳಲ್ಲಿ ಇಂಗ್ಲೆಂಡ್ ತಂಡ 324 ರನ್ಗಳಿಸಿದರೆ ಗೆಲುವು ದಾಖಲಿಸಬಹುದು. ಇತ್ತ ಭಾರತ ತಂಡಕ್ಕೆ ಗೆಲ್ಲಲು 9 ವಿಕೆಟ್ಗಳ ಅವಶ್ಯಕತೆಯಿದೆ. ಹೀಗಾಗಿ ನಾಲ್ಕನೇ ದಿನದಾಟವು ಪಂದ್ಯದ ಫಲಿತಾಂಶವನ್ನು ನಿರ್ಧರಿಸುವ ಸಾಧ್ಯತೆಯಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಜೇಮಿ ಸ್ಮಿತ್, ಗಸ್ ಅಟ್ಕಿನ್ಸನ್, ಜೇಮಿ ಓವರ್ಟನ್, ಜೋಶ್ ಟಂಗ್, ಕ್ರಿಸ್ ವೋಕ್ಸ್ (ಅಲಭ್ಯ).
ಇದನ್ನೂ ಓದಿ: ಮಾಜಿ ಆಟಗಾರನಿಗೆ ವಿಶೇಷ ಗೌರವ… ಹೆಡ್ಬ್ಯಾಂಡ್ ಧರಿಸಿ ಕಣಕ್ಕಿಳಿದ ಸಿರಾಜ್
ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್, ಕರುಣ್ ನಾಯರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ.
Published On - 8:24 am, Sun, 3 August 25