
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದೆ. ರಾಂಚಿಯಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿದೆ. ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 353 ರನ್ ಗಳಿಸಿ ಆಲೌಟ್ ಆಗಿತ್ತು. ಬಳಿಕ ಭಾರತ 307 ರನ್ ಗಳಿಸಿತು. ಇಲ್ಲಿ 40ಕ್ಕೂ ಹೆಚ್ಚು ರನ್ಗಳ ಮುನ್ನಡೆ ಪಡೆದ ಆಂಗ್ಲ ತಂಡಕ್ಕೆ ನಾಲ್ಕನೇ ಇನಿಂಗ್ಸ್‌ನಲ್ಲಿ ಉತ್ತಮ ಗುರಿ ನೀಡುವ ಅವಕಾಶವಿತ್ತು. ಆದರೆ ಭಾರತದ ಸ್ಪಿನ್ನರ್‌ಗಳು ಇಂಗ್ಲೆಂಡ್‌ನ ಇನ್ನಿಂಗ್ಸ್ ಅನ್ನು ಕೇವಲ 145 ರನ್‌ಗಳಿಗೆ ತಗ್ಗಿಸಿದರು. 192 ರನ್ಗಳ ಟಾರ್ಗೆಟ್ ಅನ್ನು ರೋಹಿತ್ ಶರ್ಮಾ ಪಡೆ 5 ವಿಕೆಟ್ ಉಳಿಸಿಕೊಂಡು ಗೆದ್ದಿತು. ಇದೀಗ ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆ ಸರಣಿಯನ್ನು ವಶಪಪಡಿಸಿಕೊಂಡಿದೆ. ಹಾಗಾದರೆ, ಕೊನೆಯ ಐದನೇ ಟೆಸ್ಟ್ ಪಂದ್ಯ ಯಾವಾಗ?.
ಭಾರತ-ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯ ಯಾವಾಗ?
ಮಾರ್ಚ್ 07 ರಿಂದ ಮಾರ್ಚ್ 11ರ ವರೆಗೆ ಭಾರತ-ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯ ನಡೆಯಲಿದೆ.
ಭಾರತ-ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ-ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯ ಧರ್ಮಶಾಲಾದ ಹಿಮಾಚಲ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.
‘ಹಸಿದವರಿಗೆ ಅವಕಾಶ’; ಟೆಸ್ಟ್ ತೊರೆದು ಐಪಿಎಲ್‌ನತ್ತ ಗಮನಹರಿಸಿದವರಿಗೆ ರೋಹಿತ್ ಎಚ್ಚರಿಕೆ
ಭಾರತ-ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯ ಎಲ್ಲಿ ವೀಕ್ಷಿಸಬಹುದು?
ಭಾರತ- ಇಂಗ್ಲೆಂಡ್ ಟಿಸ್ಟ್ ಸರಣಿಯ ಐದನೇ ಪಂದ್ಯದ ಲೈವ್ ಸ್ಟ್ರೀಮ್ JioCinema ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ. ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿಯೂ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು.
ಭಾರತ- ಇಂಗ್ಲೆಂಡ್ ಐದನೇ ಟಿಸ್ಟ್ ಸರಣಿ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ಇಂಗ್ಲೆಂಡ್ ಟಿಸ್ಟ್ ಸರಣಿಯ ಐದನೇ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.
ಅತಿ ಹೆಚ್ಚು ಸರಣಿ ಗೆಲುವು; ಪಾಕ್, ವಿಂಡೀಸ್ ದಾಖಲೆ ಮುರಿದ ಟೀಂ ಇಂಡಿಯಾ
ಭಾರತ ಟೆಸ್ಟ್ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರಜತ್ ಪಾಟಿದಾರ್, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್.
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ