ಒಂದೇ ದಿನ 6 ತಂಡಗಳ ಏಕದಿನ ಪಂದ್ಯ..!

Champions Trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.

ಒಂದೇ ದಿನ 6 ತಂಡಗಳ ಏಕದಿನ ಪಂದ್ಯ..!
Babar - Rohit - Aiden

Updated on: Feb 11, 2025 | 1:30 PM

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ಎಲ್ಲಾ ತಂಡಗಳ ಏಕದಿನ ಸರಣಿಗಳತ್ತ ಮುಖ ಮಾಡಿವೆ. ಈಗಾಗಲೇ ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಮತ್ತೊಂದೆಡೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿ ಆಡಲು ಸಜ್ಜಾಗಿದೆ. ಅದರಂತೆ ನಾಳೆ (ಫೆ.12) ಒಟ್ಟು 6 ತಂಡಗಳು ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿಯಲಿವೆ.

ಭಾರತ vs ಇಂಗ್ಲೆಂಡ್:

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೂರನೇ ಪಂದ್ಯವು ಬುಧವಾರ (ಫೆ.12) ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಮಧಾಹ್ನ 1.30 ಕ್ಕೆ ಶುರುವಾಗಲಿದೆ.

ಶ್ರೀಲಂಕಾ vs ಆಸ್ಟ್ರೇಲಿಯಾ:

ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ 2 ಪಂದ್ಯಗಳ ಏಕದಿನ ಸರಣಿ ಕೂಡ ಫೆಬ್ರವರಿ 12 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬುಧವಾರ ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಈ ಪಂದ್ಯ ಶುರುವಾಗಲಿದೆ.

ಪಾಕಿಸ್ತಾನ್ vs ಸೌತ್ ಆಫ್ರಿಕಾ:

ಪಿಸಿಬಿ ಆಯೋಜಿಸಿರುವ ತ್ರಿಕೋನ ಸರಣಿಯ ಮೂರನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಬುಧವಾರ (ಫೆ.12) ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ.

ಭಾರತದ ಸರಣಿ ಮುಕ್ತಾಯ:

ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದೊಂದಿಗೆ ಟೀಮ್ ಇಂಡಿಯಾದ ಮೊದಲಾರ್ಧದ ಸರಣಿ ಮುಗಿಯಲಿದೆ. ಇದಾದ ಬಳಿಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ದುಬೈಗೆ ತೆರಳಲಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಮಾರ್ಚ್ 9 ರಂದು ಮುಗಿಯಲಿದೆ.

ಇದನ್ನೂ ಓದಿ: IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್..!

ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಸಜ್ಜಾಗಲಿದ್ದಾರೆ. ಈ ಬಾರಿಯ ಐಪಿಎಲ್ ಮಾರ್ಚ್ 21 ರಿಂದ ಶುರುವಾಗಲಿದ್ದು, ಮೇ 25 ರವರೆಗೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಟೀಮ್ ಇಂಡಿಯಾದ ಮುಂದಿನ ಸರಣಿಯನ್ನು ವೀಕ್ಷಿಸಲು ಜೂನ್ ತಿಂಗಳವರೆಗೆ ಕಾಯಲೇಬೇಕು.