IND vs ENG: ಯಂಗ್ ಇಂಡಿಯಾ: 7 ಆಟಗಾರರು ಪಾದಾರ್ಪಣೆ

| Updated By: ಝಾಹಿರ್ ಯೂಸುಫ್

Updated on: Mar 07, 2024 | 12:22 PM

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿದೆ. ಇದೀಗ ಧರ್ಮಶಾಲಾದಲ್ಲಿ ಉಭಯ ತಂಡಗಳ ನಡುವಣ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ.

IND vs ENG: ಯಂಗ್ ಇಂಡಿಯಾ: 7 ಆಟಗಾರರು ಪಾದಾರ್ಪಣೆ
Team India
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಸರಣಿಯ ಐದನೇ ಪಂದ್ಯ ಶುರುವಾಗಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ (Team India) ಪರ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಈ ಸರಣಿ ಮೂಲಕ 7 ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದಂತಾಗಿದೆ. ಅಂದರೆ ಐದು ಪಂದ್ಯಗಳ ಸರಣಿ ಮೂಲಕ ಒಟ್ಟು ಏಳು ಆಟಗಾರರು ಟೆಸ್ಟ್ ಕೆರಿಯರ್ ಆರಂಭಿಸಿದ್ದಾರೆ. ಇವರಲ್ಲಿ ಐವರು ಭಾರತೀಯ ಆಟಗಾರರು ಎಂಬುದು ವಿಶೇಷ.

  • ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕಣಕ್ಕಿಳಿಯುವ ಮೂಲಕ ಟಾಮ್ ಹಾರ್ಟ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು.

 

  • ವಿಶಾಖಪಟ್ಟಣಂನಲ್ಲಿ ಆಡಿದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರಜತ್ ಪಾಟಿದಾರ್ ಪಾದಾರ್ಪಣೆ ಮಾಡಿದ್ದರು.

 

  • ಭಾರತದ ವಿರುದ್ಧ 2ನೇ ಟೆಸ್ಟ್ ಪಂದ್ಯದ ಮೂಲಕವೇ ಶೊಯೆಬ್ ಬಶೀರ್ ಇಂಗ್ಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡಿದ್ದರು.

 

  • ರಾಜ್​ಕೋಟ್​ನಲ್ಲಿ ಮೂರನೇ ಟೆಸ್ಟ್ ಪಂದ್ಯದ ಮೂಲಕ ಸರ್ಫರಾಝ್ ಹಾಗೂ ಧ್ರುವ್ ಜುರೇಲ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು.

 

  • ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆಕಾಶ್ ದೀಪ್ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದ್ದರು.

 

  • ಧರ್ಮಶಾಲಾದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್​ ಪಂದ್ಯದ ಮೂಲಕ ದೇದವತ್ ಪಡಿಕ್ಕಲ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ.

 

  • ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಒಟ್ಟು 7 ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

 

ಭಾರತದ ದಾಖಲೆ:

ಟೀಮ್ ಇಂಡಿಯಾ ಪರ ಒಂದೇ ಸರಣಿಯಲ್ಲಿ ಐವರು ಆಟಗಾರರು ಪಾದಾರ್ಪಣೆ ಮಾಡಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ 1996 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಪರಾಸ್ ಮಾಂಬ್ರೆ, ವಿಕ್ರಮ್ ರಾಥೋಡ್, ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು.

ಹಾಗೆಯೇ 2020-21ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ  ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್, ಟಿ.ನಟರಾಜನ್, ವಾಷಿಂಗ್ಟನ್ ಸುಂದರ್ ಹಾಗೂ ನವದೀಪ್ ಸೈನಿ ಪಾದಾರ್ಪಣೆ ಮಾಡಿದ್ದರು. ಇದೀಗ ಮೂರನೇ ಬಾರಿ ಭಾರತದ ಪರ ಒಂದೇ ಸರಣಿಯಲ್ಲಿ ಐವರು ಆಟಗಾರರು ಚೊಚ್ಚಲ ಪಂದ್ಯಗಳನ್ನಾಡಿದ್ದಾರೆ.

25 ಆಟಗಾರರ ವಿಶ್ವ ದಾಖಲೆ:

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಸರಣಿಯಲ್ಲಿ 25 ಆಟಗಾರರು ಪಾದಾರ್ಪಣೆ ಮಾಡಿದ ವಿಶೇಷ ವಿಶ್ವ ದಾಖಲೆ ಇದೆ. 1876/77 ರಲ್ಲಿ ನಡೆದ ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವಣ ಪಂದ್ಯದಲ್ಲಿ 25 ಆಟಗಾರರು ಚೊಚ್ಚಲ ಪಂದ್ಯವನ್ನಾಡಿದ್ದರು.

ವಿಶೇಷ ಎಂದರೆ ಇದೇ ಸರಣಿಯನ್ನೇ ಅಂತಾರಾಷ್ಟ್ರೀಯ ಕ್ರಿಕೆಟ್​ನ ಮೊದಲ ಸರಣಿ ಎಂದು ಕೂಡ ಪರಿಗಣಿಸಲಾಗುತ್ತದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾ ಪರ 14 ಆಟಗಾರರು ಪದಾರ್ಪಣೆ ಮಾಡಿದ್ದರೆ, ಇಂಗ್ಲೆಂಡ್ ಪರ 11 ಆಟಗಾರರು ಚೊಚ್ಚಲ ಪಂದ್ಯವನ್ನಾಡಿದ್ದರು.

ಇದಾದ ಬಳಿಕ 1895/96 ರಲ್ಲಿ ನಡೆದ ಸೌತ್ ಆಫ್ರಿಕಾ-ಇಂಗ್ಲೆಂಡ್ ನಡುವಣ ಸರಣಿಯಲ್ಲೂ 25 ಆಟಗಾರರು ಪಾದರ್ಪಣೆ ಮಾಡಿದ್ದರು. ಇದುವೇ ಈಗಲೂ ವಿಶ್ವ ದಾಖಲೆಯಾಗಿ ಉಳಿದಿದೆ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ಉತ್ತಮ ಆರಂಭ:

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಆರಂಭಿಕ ಆಟಗಾರ ಝಾಕ್ ಕ್ರಾಲಿ ಅವರ ಅರ್ಧಶತಕದ ನೆರವಿನಿಂದ ಈ ಪಂದ್ಯದಲ್ಲಿ ಇಂಗ್ಲೆಂಡ್ ಉತ್ತಮ ಆರಂಭ ಪಡೆದುಕೊಂಡಿದೆ. ಭೋಜನಾ ವಿರಾಮದ ವೇಳೆಗೆ  2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ.

 

Published On - 12:21 pm, Thu, 7 March 24