AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಜೊತೆಯಾಗಿ ವಿಶೇಷ ಸಾಧನೆ ಮಾಡಲಿದ್ದಾರೆ ಅಶ್ವಿನ್-ಬೈರ್​ಸ್ಟೋವ್

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿದೆ. ಇದೀಗ ಐದನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದ್ದು, ಈ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ ಹಾಗೂ ಜಾನಿ ಬೈರ್​ಸ್ಟೋವ್ ವಿಶೇಷ ದಾಖಲೆ ಬರೆಯಲಿದ್ದಾರೆ.

IND vs ENG: ಜೊತೆಯಾಗಿ ವಿಶೇಷ ಸಾಧನೆ ಮಾಡಲಿದ್ದಾರೆ ಅಶ್ವಿನ್-ಬೈರ್​ಸ್ಟೋವ್
Ashwin-Bairstow
TV9 Web
| Edited By: |

Updated on: Mar 06, 2024 | 10:05 AM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯ ನಾಳೆಯಿಂದ (ಫೆ.7) ಶುರುವಾಗಲಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಹಾಗೂ ಇಂಗ್ಲೆಂಡ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ವಿಶೇಷ ಮೈಲುಗಲ್ಲು ದಾಟಲಿದ್ದಾರೆ. ಹೌದು, ಈ ಪಂದ್ಯವು ಬೈರ್​ಸ್ಟೋವ್ ಹಾಗೂ ಅಶ್ವಿನ್ ಅವರ 100ನೇ ಟೆಸ್ಟ್​ ಪಂದ್ಯ. ಅಂದರೆ ಒಂದೇ ಪಂದ್ಯದ ಮೂಲಕ ಉಭಯ ತಂಡಗಳ ಆಟಗಾರರು ನೂರು ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧನೆ ಮಾಡಲಿದ್ದಾರೆ.

ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಆಟಗಾರರು ಒಂದೇ ಪಂದ್ಯದ ಮೂಲಕ 100 ಮ್ಯಾಚ್​ಗಳ ಸಾಧನೆ ಮಾಡಿದ್ದು ಕೇವಲ 3 ಬಾರಿ ಮಾತ್ರ. ಇದೀಗ ಈ ಸಾಧನೆ ಮಾಡಲಿರುವ ನಾಲ್ಕನೇ ಜೋಡಿಯಾಗಿ ಅಶ್ವಿನ್-ಬೈರ್​ಸ್ಟೋವ್ ಗುರುತಿಸಿಕೊಂಡಿದ್ದಾರೆ.

  • 2000 ರಲ್ಲಿ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರಾದ ಮೈಕೆಲ್ ಅಥರ್ಟನ್ ಮತ್ತು ಅಲೆಕ್ ಸ್ಟೀವರ್ಟ್ ಜೊತೆಯಾಗಿ 100 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದರು.
  • 2006 ರಲ್ಲಿ ಸೌತ್ ಆಫ್ರಿಕಾದ ಜಾಕ್ವೆಸ್ ಕಾಲಿಸ್, ಶಾನ್ ಪೊಲಾಕ್ ಮತ್ತು ನ್ಯೂಝಿಲೆಂಡ್​ನ​ ಸ್ಟೀಫನ್ ಫ್ಲೆಮಿಂಗ್ ಜೊತೆಯಾಗಿ 100ನೇ ಟೆಸ್ಟ್ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು.
  • 2013 ರಲ್ಲಿ ಪರ್ತ್‌ನಲ್ಲಿ ನಡೆದ ಇಂಗ್ಲೆಂಡ್-ಆಸ್ಟ್ರೇಲಿಯಾ ಆ್ಯಶಸ್ ಸರಣಿಯಲ್ಲಿ ಅಲಸ್ಟೈರ್ ಕುಕ್ ಮತ್ತು ಮೈಕೆಲ್ ಕ್ಲಾರ್ಕ್ ಜೊತೆಯಾಗಿ 100 ಟೆಸ್ಟ್ ಪಂದ್ಯಗಳ ಮೈಲುಗಲ್ಲನ್ನು ದಾಟಿದ್ದರು.
  • ಗುರುವಾರ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯದ ಮೂಲಕ 100 ಪಂದ್ಯಗಳ ವಿಶೇಷ ದಾಖಲೆ ಬರೆಯಲು ರವಿಚಂದ್ರನ್ ಅಶ್ವಿನ್ ಹಾಗೂ ಜಾನಿ ಬೈರ್​ಸ್ಟೋವ್ ಸಜ್ಜಾಗಿದ್ದಾರೆ. ಈ ಮೂಲಕ ಜೊತೆಯಾಗಿ 100 ಪಂದ್ಯಗಳನ್ನಾಡಿದ ವಿಶ್ವದ 4ನೇ ಜೋಡಿ ಎನಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಭಾರತದ ಪಾಲಿಗೆ ಔಪಚಾರಿಕ ಪಂದ್ಯ:

ಧರ್ಮಶಾಲಾದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯ. ಏಕೆಂದರೆ ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿದೆ. ಇದೀಗ 3-1 ಅಂತರದಿಂದ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದ್ದು, ಹೀಗಾಗಿ ಕೊನೆಯ ಪಂದ್ಯವು ಸರಣಿಯ ಫಲಿತಾಂಶವನ್ನು ಬದಲಿಸುವುದಿಲ್ಲ. ಅಲ್ಲದೆ ಸೋತರೂ, ಗೆದ್ದರೂ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಈ ಮ್ಯಾಚ್ ಭಾರತದ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!