IND vs ENG: ಹ್ಯಾರಿ ಬ್ರೂಕ್ ಬದಲು ಇಂಗ್ಲೆಂಡ್ ತಂಡಕ್ಕೆ ಸ್ಟಾರ್ ಆಲ್​ರೌಂಡರ್ ಎಂಟ್ರಿ

IND vs ENG: ಮೇಲೆ ಹೇಳಿದಂತೆ ಇಂಗ್ಲೆಂಡ್ ತಂಡದ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಭಾರತ ಟೆಸ್ಟ್ ಪ್ರವಾಸದಿಂದ ಹೊರಗುಳಿದಿದ್ದಾರೆ. ವೈಯಕ್ತಿಕ ಕಾರಣಗಳಿಂದ ಬ್ರೂಕ್ ಈ ಸರಣಿಯಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಹೀಗಾಗಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಬ್ರೂಕ್ ಬದಲು ಡ್ಯಾನ್ ಲಾರೆನ್ಸ್ ಅವರನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಿದೆ.

IND vs ENG: ಹ್ಯಾರಿ ಬ್ರೂಕ್ ಬದಲು ಇಂಗ್ಲೆಂಡ್ ತಂಡಕ್ಕೆ ಸ್ಟಾರ್ ಆಲ್​ರೌಂಡರ್ ಎಂಟ್ರಿ
ಡ್ಯಾನ್ ಲಾರೆನ್ಸ್, ಹ್ಯಾರಿ ಬ್ರೂಕ್
Follow us
ಪೃಥ್ವಿಶಂಕರ
|

Updated on: Jan 21, 2024 | 7:50 PM

ಜನವರಿ 25 ರಿಂದ ಆತಿಥೇಯ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಜನವರಿ 25 ರಿಂದ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸರಣಿಗಾಗಿ ಈಗಾಗಲೇ ಎರಡೂ ತಂಡಗಳನ್ನು ಪ್ರಕಟಿಸಲಾಗಿತ್ತು. ಅದರಂತೆ ಇಂಗ್ಲೆಂಡ್​ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯುವ ಬ್ಯಾಟರ್ ಹ್ಯಾರಿ ಬ್ರೂಕ್ (Harry Brook) ಯಶಸ್ವಿಯಾಗಿದ್ದರು. ಆದರೆ ಇಂದು ಬಂದ ವರದಿಯ ಪ್ರಕಾರ ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹ್ಯಾರಿ ಬ್ರೂಕ್ ಹೊರಗುಳಿದಿದ್ದಾರೆ. ಇದೀಗ ಬ್ರೂಕ್ ಬದಲಿ ಆಟಗಾರನಾಗಿ ಇಂಗ್ಲೆಂಡ್ ಮಂಡಳಿ ಡ್ಯಾನ್ ಲಾರೆನ್ಸ್​ರನ್ನು (Dan Lawrence) ಆಯ್ಕೆ ಮಾಡಿದೆ.

ಮಾಹಿತಿ ನೀಡಿದ ಮಂಡಳಿ

ಮೇಲೆ ಹೇಳಿದಂತೆ ಇಂಗ್ಲೆಂಡ್ ತಂಡದ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಭಾರತ ಟೆಸ್ಟ್ ಪ್ರವಾಸದಿಂದ ಹೊರಗುಳಿದಿದ್ದಾರೆ. ವೈಯಕ್ತಿಕ ಕಾರಣಗಳಿಂದ ಬ್ರೂಕ್ ಈ ಸರಣಿಯಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಹೀಗಾಗಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಬ್ರೂಕ್ ಬದಲು ಡ್ಯಾನ್ ಲಾರೆನ್ಸ್ ಅವರನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಂಡಳಿ, ಮುಂದಿನ 24 ಗಂಟೆಗಳಲ್ಲಿ ಇಂಗ್ಲೆಂಡ್ ಪುರುಷರ ಟೆಸ್ಟ್ ತಂಡಕ್ಕೆ ಸರ್ರೆಯ ಡ್ಯಾನ್ ಲಾರೆನ್ಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬರೆದುಕೊಂಡಿದೆ.

IND vs ENG: ಅಪರೂಪದ ದಾಖಲೆ ಬರೆಯಲು ರವೀಂದ್ರ ಜಡೇಜಾಗೆ ಇನ್ನೇರಡೇ ವಿಕೆಟ್ ಬೇಕು..!

ಡ್ಯಾನ್ ಲಾರೆನ್ಸ್ ವೃತ್ತಿಜೀವನ

ಡ್ಯಾನ್ ಲಾರೆನ್ಸ್ ಇಂಗ್ಲೆಂಡ್ ಪರ ಇದುವರೆಗೆ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಈ ಪಂದ್ಯಗಳಲ್ಲಿ 29.00 ಸರಾಸರಿಯಲ್ಲಿ 551 ರನ್ ಗಳಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳೂ ಸೇರಿವೆ. ಮಾರ್ಚ್ 2022 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದ ಲಾರೆನ್ಸ್ ಇದೀಗ ಭಾರತದ ವಿರುದ್ಧ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.

ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ:

ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ರೆಹಾನ್ ಅಹ್ಮದ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಜೇಮ್ಸ್ ಆಂಡರ್ಸನ್, ಡ್ಯಾನ್ ಲಾರೆನ್ಸ್, ಗಸ್ ಅಟ್ಕಿನ್ಸನ್, ಟಾಮ್ ಹಾರ್ಟ್ಲಿ, ಜಾಕ್ ಲೀಚ್, ಆಲಿ ಪೋಪ್, ಆಲಿ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್.

ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​