IND vs ENG: ಚೊಚ್ಚಲ ಪಂದ್ಯದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸರ್ಫರಾಜ್ ಖಾನ್..!

Sarfaraz Khan: ರಾಜ್‌ಕೋಟ್‌ ಟೆಸ್ಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಪ್ರತಿಭಾವಂತ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಜ್ ಖಾನ್ 66 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 62 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು.

IND vs ENG: ಚೊಚ್ಚಲ ಪಂದ್ಯದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸರ್ಫರಾಜ್ ಖಾನ್..!
ಸರ್ಫರಾಜ್ ಖಾನ್
Follow us
ಪೃಥ್ವಿಶಂಕರ
|

Updated on:Feb 15, 2024 | 5:59 PM

ರಾಜ್​ಕೋಟ್​ನಲ್ಲಿ ಇಂಗ್ಲೆಂಡ್ ವಿರುದ್ಧ (India vs England) ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುತ್ತಿರುವ ಸರ್ಫರಾಜ್ ಖಾನ್ (Sarfaraz Khan) ತಮ್ಮ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. ಸರ್ಫರಾಜ್ ಖಾನ್ ಕೇವಲ 48 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ತಮ್ಮ ಅರ್ಧಶತಕ ಪೂರೈಸಿದರು. ಸರ್ಫರಾಜ್ ಅರ್ಧಶತಕ ಸಿಡಿಸುತ್ತಿದ್ದಂತೆ ಮಗನ ಆಟ ನೋಡಲು ಮೈದಾನದಲ್ಲಿ ಉಪಸ್ಥಿತರಿದ್ದ ಅವರ ತಂದೆ ಹಾಗೂ ಅಭಿಮಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಾಚರಣೆ ನಡೆಸಿದರು. ವಾಸ್ತವವಾಗಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸರ್ಫರಾಜ್ ಖಾನ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಕೊನೆಗೂ ಸತತ ಪ್ರಯತ್ನಗಳ ನಂತರ ಭಾರತ ತಂಡದಲ್ಲಿ ಸ್ಥಾನ ಪಡೆದ ಸರ್ಫರಾಜ್ ಖಾನ್ ಭಾರತಕ್ಕೆ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ 311ನೇ ಆಟಗಾರ ಎನಿಸಿಕೊಂಡಿದ್ದಾರೆ. ಸರ್ಫರಾಜ್ ಖಾನ್ ಈ ಅರ್ಧಶತಕದ ಹೊರತಾಗಿ, ಆರನೇ ವಿಕೆಟ್‌ಗೆ ಜಡೇಜಾ ಅವರೊಂದಿಗೆ 50 ಕ್ಕೂ ಹೆಚ್ಚು ರನ್‌ಗಳ ಪಾಲುದಾರಿಕೆಯನ್ನು ಸಹ ಮಾಡಿದರು. ಅಂತಿಮವಾಗಿ ರನೌಟ್​ಗೆ ಬಲಿಯಾದ ಸರ್ಫರಾಜ್ ಖಾನ್ 66 ಎಸೆತಗಳಲ್ಲಿ 62 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು.

ಬಿಸಿಸಿಐ ಟ್ವೀಟ್

ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ

ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಪಂದ್ಯವನ್ನು ಆಡುತ್ತಿರುವ ಸರ್ಫರಾಜ್ ಖಾನ್​ಗೆ ಕನ್ನಡಿಗ ಅನಿಲ್ ಕುಂಬ್ಳೆ ಟೆಸ್ಟ್ ಕ್ಯಾಪ್ ನೀಡಿದರು. ಆ ನಂತರ ಆ ಕ್ಯಾಪನ್ನು ತೆಗೆದುಕೊಂಡ ಸರ್ಫರಾಜ್ ತಮ್ಮ ತಂದೆಯ ಕಡೆಗೆ ಹೋದರು. ಇದನ್ನು ಕಂಡು ಅವರ ತಂದೆಯೂ ಭಾವುಕರಾದರು.ಆ ಬಳಿಕ ಚೊಚ್ಚಲ ಪಂದ್ಯದಲ್ಲೇ ಸರ್ಫರಾಜ್ ಅರ್ಧಶತಕ ಪೂರೈಸಿದರು. ಈ ವೇಳೆ ಮೈದಾನದಲ್ಲಿ ಕುಳಿತಿದ್ದ ಅವರ ತಂದೆ ಹಾಗೂ ತಾಯಿ ರೊಮಾನಾ ಕೂಡ ಭಾವುಕರಾದರು. ರೋಹಿತ್ ಶರ್ಮಾ ಔಟಾದ ಬಳಿಕ ಮೈದಾನಕ್ಕಿಳಿದ ಸರ್ಫರಾಜ್ ಖಾನ್ ಮೊದಲ ಎಸೆತದಿಂದಲೇ ಆಕ್ರಮಣಕಾರಿ ನಿಲುವು ಅನುಸರಿಸಿದರು

ಪದಾರ್ಪಣೆಯಲ್ಲೇ ವಿಶೇಷ ದಾಖಲೆ

ಇಂಗ್ಲೆಂಡ್ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಸರ್ಫರಾಜ್ ಖಾನ್ ಟೆಸ್ಟ್ ಪದಾರ್ಪಣೆಯಲ್ಲಿ ಅತಿವೇಗದ ಅರ್ಧಶತಕ ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಸರ್ಫರಾಜ್ ಖಾನ್​ಗೂ ಮೊದಲು, ಹಾರ್ದಿಕ್ ಪಾಂಡ್ಯ 2017 ರಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಪಂದ್ಯದಲ್ಲೇ 48 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಚೊಚ್ಚಲ ಟೆಸ್ಟ್‌ನಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ದಾಖಲೆ ಪಟಿಯಾಲದ ಯುವರಾಜ್ ಹೆಸರಿನಲ್ಲಿದೆ. 1934ರಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 42 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ದೇಶೀಯ ಕ್ರಿಕೆಟ್‌ನಲ್ಲಿ ಸರ್ಫರಾಜ್ ಸೂಪರ್ ಶೋ

ಭಾರತದ ಪರ ಟೆಸ್ಟ್‌ಗೆ ಪಾದಾರ್ಪಣೆ ಮಾಡುವ ಮೊದಲು, ಸರ್ಫರಾಜ್ ಖಾನ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಗಳಿಸಿದ್ದರು. ಸರ್ಫರಾಜ್ ಖಾನ್ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 69.85 ಸರಾಸರಿಯೊಂದಿಗೆ 3912 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 14 ಶತಕ ಮತ್ತು 11 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 1 ಟ್ರಿಪಲ್ ಶತಕ ಬಾರಿಸಿದ ಅದ್ಭುತ ದಾಖಲೆಯನ್ನು ಸರ್ಫರಾಜ್ ಖಾನ್ ಹೊಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Thu, 15 February 24

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್