IND vs ENG: ಇಂಗ್ಲೆಂಡ್ ತಂಡದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡ ದಿನೇಶ್ ಕಾರ್ತಿಕ್..! ಆದರೆ..?

IND vs ENG, Dinesh Karthik: ಜನವರಿ 18ರವರೆಗೆ ದಿನೇಶ್ ಕಾರ್ತಿಕ್ ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಇಯಾನ್ ಬೆಲ್ ಬದಲಿಗೆ ಕಾರ್ತಿಕ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

IND vs ENG: ಇಂಗ್ಲೆಂಡ್ ತಂಡದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡ ದಿನೇಶ್ ಕಾರ್ತಿಕ್..! ಆದರೆ..?
ದಿನೇಶ್ ಕಾರ್ತಿಕ್
Follow us
ಪೃಥ್ವಿಶಂಕರ
|

Updated on:Jan 10, 2024 | 8:56 PM

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್​ಗೆ (Dinesh Karthik) ಭಾರತ ತಂಡದಲ್ಲಿ ಅವಕಾಶ ಸಿಕ್ಕಿ ವರ್ಷಗಳೇ ಕಳೆದಿವೆ. 2022 ರಲ್ಲಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭಾರತ ತಂಡದ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಾರ್ತಿಕ್ ಇಡೀ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹಾಗಾಗಿ ಆ ಬಳಿಕ ಅವರನ್ನು ಟೀಂ ಇಂಡಿಯಾದಿಂದ (Team India) ಕೈಬಿಡಲಾಗಿದೆ. ಮುಂದಿನ ದಿನಗಳಲ್ಲೂ ಅವರಿಗೆ ಭಾರತ ತಂಡದಲ್ಲಿ ಅವಕಾಶ ಸಿಗುವುದು ಅಸಾಧ್ಯವೆಂತಲೇ ಹೇಳಬಹುದು. ಆದರೂ ಭಾರತ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸದ ಕಾರ್ತಿಕ್​ ಇದೀಗ ಇಂಗ್ಲೆಂಡ್​ ತಂಡದಲ್ಲಿ ಕೆಲ ದಿನಗಳವರೆಗೆ ಹೊಸ ಹುದ್ದೆಯೊಂದು ನಿರ್ವಹಿಸಲಿದ್ದಾರೆ.

ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ ನಡುವೆ ಎರಡು ಅಭ್ಯಾಸ ಪಂದ್ಯಗಳು ನಡೆಯಲಿವೆ. ಜನವರಿ 12 ಮತ್ತು 13 ರಂದು ಎರಡು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ಆ ಬಳಿಕ ಜನವರಿ 17ರಿಂದ 20ರವರೆಗೆ ನಾಲ್ಕು ದಿನಗಳ ಪಂದ್ಯ ನಡೆಯಲಿದೆ. ಇದಕ್ಕಾಗಿ ದಿನೇಶ್ ಕಾರ್ತಿಕ್ ಅವರನ್ನು ಇಂಗ್ಲೆಂಡ್ ಲಯನ್ಸ್ ತಂಡದ ಬ್ಯಾಟಿಂಗ್ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ತಾತ್ಕಾಲಿಕ ಜವಬ್ದಾರಿ

ಜನವರಿ 18ರವರೆಗೆ ದಿನೇಶ್ ಕಾರ್ತಿಕ್ ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಇಯಾನ್ ಬೆಲ್ ಬದಲಿಗೆ ಕಾರ್ತಿಕ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ವಾಸ್ತವವಾಗಿ, ಬೆಲ್ ಪ್ರಸ್ತುತ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್‌ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲಿಂದ ಮುಕ್ತರಾದ ಬಳಿಕ ನ.18ರಂದು ಬೆಲ್ ತಂಡ ಸೇರಿಕೊಳ್ಳಲಿದ್ದಾರೆ. ಅದಕ್ಕೂ ಮುನ್ನ ಕಾರ್ತಿಕ್ ಭಾರತದ ಪರಿಸ್ಥಿತಿಯಲ್ಲಿ ಬ್ಯಾಟಿಂಗ್ ಮಾಡಲು ತಂಡಕ್ಕೆ ನೆರವಾಗಲಿದ್ದಾರೆ.

ಕಾರ್ತಿಕ್ ನಿವೃತ್ತಿ ತೆಗೆದುಕೊಳ್ಳುತ್ತಾರಾ?

ಈ ಬಗ್ಗೆ ದೊಡ್ಡ ಪ್ರಶ್ನೆ ಉದ್ಭವಿಸಿದೆ. ಏಕೆಂದರೆ ಕಾರ್ತಿಕ್ ಇನ್ನೂ ನಿವೃತ್ತಿ ತೆಗೆದುಕೊಂಡಿಲ್ಲ. ಅವರು 2022 ರ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ತಂಡದ ಭಾಗವಾಗಿದ್ದರು. 2022ರ ಟಿ20 ವಿಶ್ವಕಪ್ ಬಳಿಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿಲ್ಲ. ಅವರು ಪ್ರಸ್ತುತ ತಂಡದ ಭಾಗವಾಗಿಲ್ಲ .ಆದರೆ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ಕಾರ್ತಿಕ್, ಕಾಮೆಂಟೇಟರ್ ಪಾತ್ರವನ್ನೂ ನಿರ್ವಹಿಸುತ್ತಿದ್ದಾರೆ.

ಈಗ ಈ ಹುದ್ದೆ ನಿಭಾಯಿಸಿದರೆ 8 ದಿನವಾದರೂ ನಿವೃತ್ತಿಯಾಗಬೇಕಾಗಬಹುದು. ಇಲ್ಲದಿದ್ದರೆ, ಅವರ ವಿರುದ್ಧ ಹಿತಾಸಕ್ತಿ ಸಂಘರ್ಷದ ಪ್ರಕರಣ ಉದ್ಭವಿಸಬಹುದು. ಹೀಗಿರುವಾಗ ಈ ವಿಚಾರದಲ್ಲಿ ಮುಂದಿನ ಬೆಳವಣಿಗೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಗ್ಗೆ ಕಾರ್ತಿಕ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈ ಮಾಹಿತಿ ಕ್ರಿಕ್‌ಇನ್ಫೋದಂತಹ ಹಲವು ಮಾಧ್ಯಮಗಳಲ್ಲಿ ಬೆಳಕಿಗೆ ಬಂದಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಈ ಮಾಹಿತಿಯನ್ನು ತನ್ನ X ಖಾತೆಯಲ್ಲಿ ಹಂಚಿಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Wed, 10 January 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ