ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾವನ್ನು 26 ರನ್‌ಗಳಿಂದ ಸೋಲಿಸಿದ ಇಂಗ್ಲೆಂಡ್ ತಂಡ ಸರಣಿಯನ್ನು 1-2 ಅಂತರದಿಂದ ಜೀವಂತವಾಗಿರಿಸಿದೆ. ಬುಧವಾರ ರಾಜ್‌ಕೋಟ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳಿಗೆ 171 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡ ನಿಗದಿತ ಓವರ್‌ಗಳಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು 145 ರನ್ ಗಳಿಸಲಷ್ಟೇ ಶಕ್ತವಾಯಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ಗೆ ಮತ್ತೊಮ್ಮೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಪಿಲ್ ಸಾಲ್ಟ್ ಮತ್ತೊಮ್ಮೆ ಒಂದಂಕಿಗೆ ವಿಕೆಟ್ ಒಪ್ಪಿಸದರು. ಆದರೆ ಜವಬ್ದಾರಿಯುತ ಬ್ಯಾಟಿಂಗ್ ಮಾಡಿದ ಆರಂಭಿಕ ಆಟಗಾರ ಬೆನ್ ಡಕೆಟ್ 28 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 51 ರನ್ ಕಲೆಹಾಕಿದರು. ಲಿಯಾಮ್ ಲಿವಿಂಗ್‌ಸ್ಟನ್ ಕೂಡ 24 ಎಸೆತಗಳಲ್ಲಿ 43 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ವೇಳೆ ಲಿಯಾಮ್ ಲಿವಿಂಗ್‌ಸ್ಟನ್ 1 ಬೌಂಡರಿ ಹಾಗೂ 5 ಸಿಕ್ಸರ್ ಬಾರಿಸಿದರು. ಕೊನೆಯಲ್ಲಿ ಆದಿಲ್ ರಶೀದ್ ಮತ್ತು ಮಾರ್ಕ್ ವುಡ್ ತಲಾ 10 ರನ್‌ಗಳ ಮಹತ್ವದ ಕೊಡುಗೆ ನೀಡಿದರು.
ಮತ್ತೊಂದೆಡೆ, ಭಾರತದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ವರುಣ್ ಚಕ್ರವರ್ತಿ ತಮ್ಮ 4 ಓವರ್‌ಗಳ ಸ್ಪೆಲ್‌ನಲ್ಲಿ 6 ರನ್‌ಗಳ ಎಕಾನಮಿಯೊಂದಿಗೆ ಕೇವಲ 24 ರನ್‌ಗಳನ್ನು ನೀಡಿ 5 ವಿಕೆಟ್ ಉರುಳಿಸಿದರು. ಉಳಿದಂತೆ ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಉರುಳಿಸಿದರು.
172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದಿಂದ ಅತ್ಯಂತ ಕಳಪೆ ಬ್ಯಾಟಿಂಗ್ ಕಂಡುಬಂದಿತು. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ 6 ಎಸೆತಗಳಲ್ಲಿ 3 ರನ್ ಗಳಿಸಲಷ್ಟೇ ಶಕ್ತರಾದರು. ಅಭಿಷೇಕ್ ಶರ್ಮಾ ಕೂಡ 14 ಎಸೆತಗಳಲ್ಲಿ 24 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ನಾಯಕ ಸೂರ್ಯಕುಮಾರ್ ಯಾದವ್ ಈ ಬಾರಿಯೂ 14 ರನ್ ಗಳಿಸಲಷ್ಟೇ ಶಕ್ತರಾದರು. ಮತ್ತೊಂದೆಡೆ ತಿಲಕ್ ವರ್ಮಾ 14 ಎಸೆತಗಳಲ್ಲಿ 18 ರನ್ ಗಳಿಸಿದರೆ, 35 ಎಸೆತಗಳಲ್ಲಿ 40 ರನ್ ಗಳಿಸುವಷ್ಟರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ವಿಕೆಟ್ ಕಳೆದುಕೊಂಡರು. ವಾಷಿಂಗ್ಟನ್ ಸುಂದರ್ 6 ರನ್ ಮತ್ತು ಅಕ್ಷರ್ ಪಟೇಲ್ ಕೇವಲ 5 ರನ್‌ಗಳಿಸಲಷ್ಟೇ ಶಕ್ತರಾದರು. ಇದರಿಂದಾಗಿ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಗಿ 26 ರನ್‌ಗಳಿಂದ ಸೋಲನುಭವಿಸಬೇಕಾಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ