AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿರುದ್ಧದ ಪಂದ್ಯದಲ್ಲಿ ನಿಯಮ ಮುರಿದ ಇಡೀ ಇಂಗ್ಲೆಂಡ್‌ ತಂಡಕ್ಕೆ ದಂಡ ವಿಧಿಸಿದ ಐಸಿಸಿ

India Women vs England Women: ಸ್ಮೃತಿ ಮಂಧಾನ ಅವರ ಅದ್ಭುತ ಶತಕದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 97 ರನ್‌ಗಳಿಂದ ಗೆಲುವು ಸಾಧಿಸಿತು. ಆದಾಗ್ಯೂ ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾದ್ದರಿಂದ ಐಸಿಸಿ ಪಂದ್ಯ ಶುಲ್ಕದ 10% ದಂಡ ವಿಧಿಸಿದೆ.

ಭಾರತ ವಿರುದ್ಧದ ಪಂದ್ಯದಲ್ಲಿ ನಿಯಮ ಮುರಿದ ಇಡೀ ಇಂಗ್ಲೆಂಡ್‌ ತಂಡಕ್ಕೆ ದಂಡ ವಿಧಿಸಿದ ಐಸಿಸಿ
Ind W Vs Eng W
ಪೃಥ್ವಿಶಂಕರ
|

Updated on: Jun 29, 2025 | 6:18 PM

Share

ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ (India Women vs England Women) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸ್ಮೃತಿ ಮಂಧಾನ (Smriti Mandhana) ನಾಯಕತ್ವದ ಭಾರತದ ಮಹಿಳಾ ತಂಡ, ಇಂಗ್ಲೆಂಡ್ ತಂಡವನ್ನು 97 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಇಂಗ್ಲೆಂಡ್‌ನ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಬೌಲಿಂಗ್‌ನಲ್ಲಿ ಯಾವ ಬೌಲರ್​ಗೂ ರನ್​​ಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ. ಇತ್ತ ಬ್ಯಾಟಿಂಗ್​ನಲ್ಲೂ ನಾಯಕಿಯನ್ನು ಹೊರತುಪಡಿಸಿ ಮತ್ತ್ಯಾರಲ್ಲೂ ಗೆಲುವಿಗಾಗಿ ಹೋರಾಡವೂ ಮನೋಭಾವ ಕಂಡುಬರಲಿಲ್ಲ. ಇದರಿಂದಾಗಿ ಆತಿಥೇಯ ತಂಡ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಏತನ್ಮಧ್ಯೆ, ಮೊದಲ ಟಿ20 ಪಂದ್ಯವನ್ನು ಸೋತಿರುವ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಇಂಗ್ಲೆಂಡ್ ತಂಡದ ಎಲ್ಲಾ ಆಟಗಾರ್ತಿಯರಿಗೆ ದಂಡ ವಿಧಿಸಿದೆ.

ಇಂಗ್ಲೆಂಡ್ ವಿರುದ್ಧ ಐಸಿಸಿ ಕ್ರಮ

ಈ ಪಂದ್ಯದಲ್ಲಿ, ಇಂಗ್ಲೆಂಡ್ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 210 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಅದ್ಭುತ ಶತಕ (112 ರನ್) ಬಾರಿಸುವ ಮೂಲಕ ತಮ್ಮ ಟಿ20 ವೃತ್ತಿಜೀವನದ ಮೊದಲ ಶತಕವನ್ನು ಪೂರೈಸಿದರು. ಆದರೆ ಇತ್ತ ಮೊದಲು ಬೌಲಿಂಗ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ ಸಮಯದಲ್ಲಿ 20 ಓವರ್‌ಗಳನ್ನು ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಐಸಿಸಿ, ನಿಧಾನಗತಿಯ ಓವರ್ ದರ ನಿಯಮವನ್ನು ಮುರಿದ ಇಂಗ್ಲೆಂಡ್‌ ತಂಡದ ವಿರುದ್ಧ ಕ್ರಮ ಕೈಗೊಂಡಿದೆ.

IND vs ENG: ಇಂಗ್ಲೆಂಡ್‌ ವಿರುದ್ಧದ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಸ್ಮೃತಿ ಮಂಧಾನ

ಪಂದ್ಯ ಶುಲ್ಕದ 10 ಪ್ರತಿಶತದಷ್ಟು ದಂಡ

ನಿಧಾನಗತಿಯ ಓವರ್ ದರಕ್ಕಾಗಿ ಇಂಗ್ಲೆಂಡ್ ತಂಡಕ್ಕೆ ಪಂದ್ಯ ಶುಲ್ಕದ 10% ದಂಡ ವಿಧಿಸಲಾಗಿದೆ. ನಿಗದಿತ ಸಮಯದಲ್ಲಿ ಎರಡು ಓವರ್ ಕಡಿಮೆ ಬೌಲ್ ಮಾಡಿದ್ದಕ್ಕಾಗಿ ಇಂಗ್ಲೆಂಡ್ ತಂಡಕ್ಕೆ ಈ ದಂಡ ವಿಧಿಸಲಾಗಿದೆ. ನಾಯಕಿ ನ್ಯಾಟ್ ಸಿವರ್-ಬ್ರಂಟ್ ಈ ಆರೋಪವನ್ನು ಒಪ್ಪಿಕೊಂಡಿದ್ದು, ಆಟಗಾರರು ಹಾಗೂ ಸಿಬ್ಬಂದಿಗೆ ದಂಡದ ರೂಪದಲ್ಲಿ ಶಿಕ್ಷೆ ವಿಧಿಸಲಾಗಿದೆ. ವಾಸ್ತವವಾಗಿ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಆಟಗಾರರು ನಿಗದಿತ ಸಮಯದಲ್ಲಿ ಓವರ್ ಪೂರ್ಣಗೊಳಿಸಲು ವಿಫಲವಾದರೆ ಪ್ರತಿ ಓವರ್‌ಗೆ ಅವರ ಪಂದ್ಯ ಶುಲ್ಕದ ಐದು ಪ್ರತಿಶತದಷ್ಟು ದಂಡ ವಿಧಿಸಲಾಗುತ್ತದೆ. ಆ ಪ್ರಕಾರ, 2 ಓವರ್​ ಕಡಿಮೆ ಬೌಲ್ ಮಾಡಿದ್ದ ಇಂಗ್ಲೆಂಡ್‌ ತಂಡಕ್ಕೆ ಪಂದ್ಯ ಶುಲ್ಕದ 10 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ