AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ಪ್ಲೇಯಿಂಗ್ 11 ಪ್ರಕಟ: ತಂಡದಲ್ಲಿ 2 ಬದಲಾವಣೆ

India vs England 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಫೆಬ್ರವರಿ 2 ರಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖ ಪಟ್ಟಣದಲ್ಲಿರುವ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

IND vs ENG: ಇಂಗ್ಲೆಂಡ್ ಪ್ಲೇಯಿಂಗ್ 11 ಪ್ರಕಟ: ತಂಡದಲ್ಲಿ 2 ಬದಲಾವಣೆ
England Team
TV9 Web
| Edited By: |

Updated on: Feb 01, 2024 | 2:17 PM

Share

India vs England 2nd Test: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್  ತಂಡ ಪ್ಲೇಯಿಂಗ್ ಇಲೆವೆನ್​ನನ್ನು ಪ್ರಕಟಿಸಿದೆ. ವಿಶಾಖಪಟ್ಟಣಂನಲ್ಲಿ ನಾಳೆಯಿಂದ (ಫೆ.2) ಶುರುವಾಗಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ 2 ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯಂತೆ ಭಾರತದ ವಿರುದ್ಧದ ಪಂದ್ಯದ ಮೂಲಕ ಯುವ ಸ್ಪಿನ್ನರ್ ಶೊಯೆಬ್ ಬಶೀರ್ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಲಿದ್ದಾರೆ.

ಇಂಗ್ಲೆಂಡ್ ತಂಡದ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ಗಾಯಗೊಂಡಿದ್ದು, ಹೀಗಾಗಿ ದ್ವಿತೀಯ ಟೆಸ್ಟ್​ನಲ್ಲಿ ಕಣಕ್ಕಿಳಿಯುತ್ತಿಲ್ಲ. ಲೀಚ್ ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ಆಡುವ ಬಳಗದಲ್ಲಿ 20 ವರ್ಷದ ಯುವ ಸ್ಪಿನ್ನರ್ ಶೊಯೆಬ್ ಬಶೀರ್​ಗೆ ಸ್ಥಾನ ನೀಡಲಾಗಿದೆ.

ಹಾಗೆಯೇ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವೇಗಿ ಮಾರ್ಕ್​ ವುಡ್ ಅವರನ್ನು ದ್ವಿತೀಯ ಪಂದ್ಯದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆ ಮಾಡಲಾಗಿದೆ.

ಮತ್ತೆ ಏಕೈಕ ವೇಗಿ:

ಮೊದಲ ಟೆಸ್ಟ್ ಪಂದ್ಯದಲ್ಲಿ ಏಕೈಕ ವೇಗಿಯೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್ ಈ ಬಾರಿ ಕೂಡ ಓರ್ವ ವೇಗದ ಬೌಲರ್​ನನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಅದರಂತೆ ವೇಗಿ ಜೇಮ್ಸ್ ಅ್ಯಂಡರ್ಸನ್ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ತಂಡದಲ್ಲಿ ನಾಲ್ವರು ಸ್ಪಿನ್ನರ್:

ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಇಂಗ್ಲೆಂಡ್ ನಾಲ್ವರು ಸ್ಪಿನ್ನರ್​ಗಳನ್ನು ಪ್ರಯೋಗಿಸಲಿದೆ. ಇಲ್ಲಿ ಸ್ಪಿನ್ನರ್​ಗಳಾಗಿ ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ ಹಾಗೂ ಶೊಯೆಬ್ ಬಶೀರ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ನಾಲ್ಕನೇ ಸ್ಪಿನ್ನರ್ ಆಗಿ ಜೋ ರೂಟ್ ಬೌಲಿಂಗ್ ಮಾಡಲಿದ್ದಾರೆ.

6ನೇ ಬೌಲರ್​ ಆಗಿ ಬೆನ್ ಸ್ಟೋಕ್ಸ್​?

ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಕೂಡ ಬೌಲಿಂಗ್ ಮಾಡುವ ಸಾಧ್ಯತೆಯಿದೆ. ಫಿಟ್​ನೆಸ್ ಸಮಸ್ಯೆಯ ಕಾರಣ ಸ್ಟೋಕ್ಸ್ ಬೌಲಿಂಗ್ ನಿಲ್ಲಿಸಿದ್ದರು. ಆದರೆ ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ತಂಡ ಅಭ್ಯಾಸ ಮಾಡುತ್ತಿದ್ದ ವೇಳೆ ಸ್ಟೋಕ್ಸ್ ಬೌಲಿಂಗ್ ಪ್ರಾಕ್ಟೀಸ್ ನಡೆಸಿದ್ದರು. ಹೀಗಾಗಿ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಸ್ಟೋಕ್ಸ್ 6ನೇ ಬೌಲರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ದ್ವಿತೀಯ ಟೆಸ್ಟ್​ಗೆ ಇಂಗ್ಲೆಂಡ್ ಪ್ಲೇಯಿಂಗ್ 11:

  • ಝಾಕ್ ಕ್ರಾಲಿ
  • ಬೆನ್ ಡಕೆಟ್
  • ಒಲ್ಲಿ ಪೋಪ್
  •  ಜೋ ರೂಟ್
  • ಜಾನಿ ಬೈರ್‌ಸ್ಟೋವ್
  • ಬೆನ್ ಸ್ಟೋಕ್ಸ್ (ನಾಯಕ)
  • ಬೆನ್ ಫೋಕ್ಸ್ (ವಿಕೆಟ್ ಕೀಪರ್)
  • ರೆಹಾನ್ ಅಹ್ಮದ್
  •  ಟಾಮ್ ಹಾರ್ಟ್ಲಿ
  • ಶೊಯೆಬ್ ಬಶೀರ್
  •  ಜೇಮ್ಸ್ ಅ್ಯಂಡರ್ಸನ್.

ಇದನ್ನೂ ಓದಿ: Jay Shah: ಬಿಸಿಸಿಐನಿಂದ ಜಯ್ ಶಾ ಪಡೆಯುವ ವೇತನ ಎಷ್ಟು?

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

Follow Us
TV9 Web
TV9 Web

TV9 Kannada

Read More
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್: ಮಹದೇವಪ್ಪ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
ದೇವರ ಹಳೆಯ ಫೋಟೋಗಳನ್ನು ಕಸಕ್ಕೆ ಎಸೆಯುವ ಮುನ್ನ ಈ ವಿಡಿಯೋ ನೋಡಿ
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
2 ಹಸು ವಿತರಣೆ ಭರವಸೆಯ ಹಿಂದಿನ ಅಸಲಿ ಗೇಮ್‌ಪ್ಲಾನ್ ಏನು ಗೊತ್ತಾ?
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಗರ್ಭಿಣಿ ಮಹಿಳೆಯರಂತೆಯೇ ಎರಡು ಹಸುಗಳಿಗೆ ಸೀಮಂತ ಸಂಭ್ರಮ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ಬೆಂಗಳೂರಲ್ಲಿ 191 ಮಸಾಜ್, ಸ್ಪಾಗಳ ಮೇಲೆ ಪೊಲೀಸರ ದಿಢೀರ್​ ದಾಳಿ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ