AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರಿವರ್​​ಸೈಡ್​ನಲ್ಲಿ ರದ್ದಾಗುವಿಕೆಯ ಹ್ಯಾಟ್ರಿಕ್! 

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಪಂದ್ಯ ಮಳೆಯ ಕಾರಣ ರದ್ದಾಗಿದೆ. ಚೆಸ್ಟರ್-ಲೆ-ಸ್ಟ್ರೀಟ್​ನಲ್ಲಿ ಆರಂಭವಾಗಿದ್ದ ಈ ಮ್ಯಾಚ್ ಮೊದಲ ಇನಿಂಗ್ಸ್​ಗೆ ಸೀಮಿತವಾಯಿತು. ಆ ಬಳಿಕ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

IND vs ENG: ರಿವರ್​​ಸೈಡ್​ನಲ್ಲಿ ರದ್ದಾಗುವಿಕೆಯ ಹ್ಯಾಟ್ರಿಕ್! 
Team India Image Credit source: BCCI
ಝಾಹಿರ್ ಯೂಸುಫ್
|

Updated on: Jul 02, 2026 | 7:07 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯವು ಮಳೆಗೆ ಆಹುತಿಯಾಗಿದೆ. ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್​​ಸೈಡ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯವು ಮೊದಲ ಇನಿಂಗ್ಸ್​ಗೆ ಮಾತ್ರ ಸೀಮಿವಾಯಿತು. ಇದರೊಂದಿಗೆ ಈ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿಯಾದ ಎಲ್ಲಾ ಮೂರೂ ಸೀಮಿತ ಓವರ್‌ಗಳ ಪಂದ್ಯಗಳು ಮಳೆಗೆ ಆಹುತಿಯಾದ ಅಪರೂಪದ ಹ್ಯಾಟ್ರಿಕ್ ನಿರ್ಮಾಣವಾಗಿದೆ.

ಇತಿಹಾಸ ಮರುಕಳಿಸಿದ ಕ್ಷಣ:

ಭಾರತ ತಂಡವು ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಹಿಂದಿನ ಇತಿಹಾಸವನ್ನು ಗಮನಿಸಿದರೆ, ಈ ಮೈದಾನ ಸದಾ ನಿರಾಸೆಯನ್ನೇ ನೀಡಿದೆ. ಅಂದರೆ ಭಾರತ ತಂಡವು ಇಲ್ಲಿ ಆಡಿದಾಗ ಪ್ರತಿ ಮ್ಯಾಚ್​ ಕೂಡ ಮಳೆಯಿಂದ ರದ್ದಾಗಿದೆ.

  •  2002 (ಏಕದಿನ ಪಂದ್ಯ): ಸೌರವ್ ಗಂಗೂಲಿ ನಾಯಕತ್ವದ ಭಾರತ ತಂಡವು ಇಲ್ಲಿ ಏಕದಿನ ಪಂದ್ಯವಾಡಲು ಮುಂದಾಗಿದ್ದಾಗ ಮಳೆ ಅಡ್ಡಿಪಡಿಸಿತ್ತು. ಹೀಗಾಗಿ ಮ್ಯಾಚ್ ಕ್ಯಾನ್ಸಲ್ ಮಾಡಿದ್ದರು.
  • 2011 (ಏಕದಿನ ಪಂದ್ಯ): ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇಲ್ಲಿ ಮಳೆರಾಯ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು.
  •  2026 (ಟಿ20 ಪಂದ್ಯ): ಇದೀಗ ರಿವರ್​ಸೈಡ್​ ಮೈದಾನದಲ್ಲಿ ಮೂರನೇ ಬಾರಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಮ್ಯಾಚ್ ರದ್ದಾಗಿದೆ.

ಆಘಾತದಿಂದ ಆರ್ಭಟ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಲ್ಲೇ 6 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಆ ನಂತರ ಟೀಮ್ ಇಂಡಿಯಾ ಬ್ಯಾಟರ್​ಗಳು ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿ ಆರ್ಭಟ ಶುರು ಮಾಡಿದರು.

  • ಅಭಿಷೇಕ್ ಶರ್ಮಾ ಅಬ್ಬರ: ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳಲ್ಲಿ 59 ರನ್ ಚಚ್ಚಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದರು.
  • ನಾಯಕನ ಆಟ: ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 68 ರನ್ ಗಳಿಸಿ ಮಿಂಚಿದರು.
  • ಶಿವಂ ದುಬೆ ಫಿನಿಶಿಂಗ್: ಕೊನೆಯಲ್ಲಿ ಅಬ್ಬರಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿದರು.

ಈ ಮೂಲಕ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 189 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ವರುಣನ ಎಂಟ್ರಿ:

ಭಾರತದ ಇನ್ನಿಂಗ್ಸ್ ಮುಗಿಯುತ್ತಿದ್ದಂತೆ ಭಾರಿ ಮಳೆ ಆರಂಭವಾಯಿತು. ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಆರಂಭವಾಗಲು ಸಾಧ್ಯವೇ ಆಗದಷ್ಟು ಮಳೆ ಸುರಿದಿದ್ದರಿಂದ, ಸ್ಥಳೀಯ ಕಾಲಮಾನ ರಾತ್ರಿ 8:15 ಕ್ಕೆ ಅಂಪೈರ್‌ಗಳು ಪಂದ್ಯವನ್ನು ಅಧಿಕೃತವಾಗಿ ರದ್ದುಗೊಳಿಸಿದರು. ಇದರಿಂದಾಗಿ 5 ಪಂದ್ಯಗಳ ಟಿ20 ಸರಣಿಯು ಸದ್ಯಕ್ಕೆ 0-0 ಯಿಂದ ಸಮಬಲದಲ್ಲಿದೆ.

ಸರಣಿಯ ಎರಡನೇ ಟಿ20 ಪಂದ್ಯವು ಶನಿವಾರ (ಜು.4) ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದ್ದು, ಅಲ್ಲಿಯಾದರೂ ಮಳೆಯ ಅಡ್ಡಿಯಿಲ್ಲದೆ ಪೂರ್ಣ ಪಂದ್ಯ ವೀಕ್ಷಿಸಲು ಸಿಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಭಾರತ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಇದನ್ನೂ ಓದಿ: ‘ಕಾರ್ಟೂನ್’ ಕಟ್ಟಿದ ಫುಟ್​ಬಾಲ್ ತಂಡ: ಇದು ಜಪಾನಿನ ಕಾಲ್ಚೆಂಡು ಕಥೆ!

ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆದಿಲ್ ರಶೀದ್, ಲ್ಯೂಕ್ ವುಡ್, ಸಾಕಿಬ್ ಮಹಮೂದ್.

Follow Us
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು