IND vs ENG: 100 ರನ್​ಗಳ ಹೀನಾಯ ಸೋಲಿಗೆ ಜೋಸ್ ಬಟ್ಲರ್ ದೂರಿದ್ದು ಯಾರನ್ನ?

IND vs ENG, ICC World Cup 2023: ಭಾರತದ ವಿರುದ್ಧ ಹೀನಾಯ ಸೋಲು ಅನುಭವಿಸುವುದರೊಂದಿಗೆ ವಿಶ್ವಕಪ್ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಗೊಂಡ ಹಾಲಿ ಚಾಂಪಿಯನ್ನರಿಗೆ ಸೆಮೀಸ್ ಬಾಗಿಲು ಬಹುತೇಕ ಮುಚ್ಚಿದೆ. ಇದೀಗ ತಂಡದ ಸೋಲಿನ ಬಗ್ಗೆ ಮಾತನಾಡಿದ ತಂಡದ ನಾಯಕ ಬಟ್ಲರ್, ‘ನಾವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದೇವು ಎಂದಿದ್ದಾರೆ.

IND vs ENG: 100 ರನ್​ಗಳ ಹೀನಾಯ ಸೋಲಿಗೆ ಜೋಸ್ ಬಟ್ಲರ್ ದೂರಿದ್ದು ಯಾರನ್ನ?
ಇಂಗ್ಲೆಂಡ್ ತಂಡ
Follow us
ಪೃಥ್ವಿಶಂಕರ
|

Updated on: Oct 29, 2023 | 10:39 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ವಿಶ್ವಕಪ್ ಪಂದ್ಯದಲ್ಲಿ ಭಾರತೀಯ ಟೈಗರ್ಸ್ 100 ರನ್‌ಗಳ ಜಯ ಸಾಧಿಸಿದೆ. ವಿಶ್ವಕಪ್‌ನಲ್ಲಿ (ICC ODI World Cup 2023) ಭಾರತಕ್ಕೆ ಇದು ಸತತ ಆರನೇ ಜಯವಾಗಿದ್ದು, ಭಾರತ ತಂಡ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಅಲ್ಲದೆ ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್​ನಲ್ಲಿ ಬರೋಬ್ಬರಿ 20 ವರ್ಷಗಳ ಬಳಿಕ ಗೆಲುವು ಸಾಧಿಸಿದೆ. ಇದಕ್ಕೂ ಮೊದಲು 2003 ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಸೌರವ್​ ಗಂಗೂಲಿ ನಾಯಕತ್ವದಲ್ಲಿ ಭಾರತ ಗೆಲುವು ಸಾಧಿಸಿತ್ತು. ಆದರೆ ಆ ಬಳಿಕ ಭಾರತಕ್ಕೆ ಗೆಲುವಿನ ಬರ ಎದುರಾಗಿತ್ತು. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 229 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಭಾರತದ ಬೌಲರ್​ಗಳಿಗೆ ಮಂಡಿಯೂರಿ ಕೇವಲ 129 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ನಾಲ್ಕು ಮತ್ತು ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಕಬಳಿಸಿದರು. ಬರೋಬ್ಬರಿ 100 ರನ್​ಗಳಿಂದ ಸೋತ ಬಳಿಕ ಮಾತನಾಡಿದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ (Jos Buttler), ತಂಡದ ಪ್ರದರ್ಶನದ ಬಗ್ಗೆ ಹೇಳಿದ್ದು ಹೀಗೆ.

ಜೋಸ್ ಬಟ್ಲರ್ ಹೇಳಿದ್ದೇನು?

ಭಾರತದ ವಿರುದ್ಧ ಹೀನಾಯ ಸೋಲು ಅನುಭವಿಸುವುದರೊಂದಿಗೆ ವಿಶ್ವಕಪ್ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಗೊಂಡ ಹಾಲಿ ಚಾಂಪಿಯನ್ನರಿಗೆ ಸೆಮೀಸ್ ಬಾಗಿಲು ಬಹುತೇಕ ಮುಚ್ಚಿದೆ. ಇದೀಗ ತಂಡದ ಸೋಲಿನ ಬಗ್ಗೆ ಮಾತನಾಡಿದ ತಂಡದ ನಾಯಕ ಬಟ್ಲರ್, ‘ನಾವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದೇವೆ ಮತ್ತು 230 ರನ್‌ಗಳನ್ನು ಬೆನ್ನಟ್ಟುವಾಗಲೂ ನಾವು ಮತ್ತೊಮ್ಮೆ ಅದೇ ಹಳೆಯ ತಪ್ಪುಗಳನ್ನು ಮಾಡಿದೆವು. ಇಬ್ಬನಿ ಬರುತ್ತದೋ ಇಲ್ಲವೋ ಎಂಬ ಕಲ್ಪನೆಯೂ ಇರಲಿಲ್ಲ’.

Breaking: 100 ರನ್​ಗಳಿಂದ ಗೆದ್ದ ಭಾರತ; ವಿಶ್ವಕಪ್​ನಿಂದ ಹೊರಬಿದ್ದ ಹಾಲಿ ಚಾಂಪಿಯನ್ ಆಂಗ್ಲರು..!

‘ನಮ್ಮ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ಆದರೆ ಬ್ಯಾಟಿಂಗ್​ಗೆ ಬಂದಾಗ ನಮ್ಮಲ್ಲಿ ಉತ್ತಮ ಜೊತೆಯಾಟ ಬರಲಿಲ್ಲ. ಹೀಗಾಗಿ ನಾವು ಒತ್ತಡಕ್ಕೆ ಸಿಲುಕಿದವು. ಆದರೆ ಸ್ಕೋರ್‌ಬೋರ್ಡ್‌ ನೋಡಿದರೆ ನಮ್ಮ ಮೇಲೆ ಯಾವುದೇ ಒತ್ತಡ ಇರಲಿಲ್ಲ, ಆದರೆ ನಾವು ಎಲ್ಲೋ ಎಡವುತ್ತಿದ್ದೇವೆ ಮತ್ತು ತಂಡದ ಅಗ್ರ ಆಟಗಾರರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ವಿಫಲರಾಗುತ್ತಿದ್ದಾರೆ’ ಎಂದು ಜೋಸ್ ಬಟ್ಲರ್ ಹೇಳಿದ್ದಾರೆ.

ಇಂಗ್ಲೆಂಡ್ ವಿಶ್ವಕಪ್ ಪ್ರಯಾಣ ಅಂತ್ಯ

ಇದೇ ವೇಳೆ ಇಂದಿನ ಗೆಲುವಿನೊಂದಿಗೆ ಭಾರತ ಸೆಮಿಫೈನಲ್ ಪ್ರವೇಶಿಸಿದ್ದರೆ ಪಾಯಿಂಟ್ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ. ಇನ್ನೊಂದೆಡೆ ಸತತ ಸೋಲುಗಳಿಂದ ತತ್ತರಿಸಿರುವ ಇಂಗ್ಲೆಂಡ್ ಐದನೇ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ತಲುಪಿದೆ. ಉಳಿದಿರುವ ಮೂರು ಪಂದ್ಯಗಳನ್ನು ಗೆದ್ದರೂ ಇಂಗ್ಲೆಂಡ್ ತಂಡ ಸೆಮಿ ಫೈನಲ್​ಗೆ ಹೋಗುವುದು ಕಷ್ಟ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ