IND vs ENG: ಇಬ್ಬರು ಔಟ್, ಮೂವರು ಇನ್; ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

|

Updated on: Jan 29, 2024 | 5:57 PM

IND vs ENG: ಆಯ್ಕೆ ಮಂಡಳಿ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸರಣಿಯ ಎರಡನೇ ಪಂದ್ಯಕ್ಕಾಗಿ ಭಾರತ ತಂಡದಕ್ಕೆ ಆಯ್ಕೆ ಮಾಡಿದೆ. ಸರ್ಫರಾಜ್ ಖಾನ್ ಹಾಗೂ ವಾಷಿಂಗ್ಟನ್ ಸುಂದರ್ ಇಂಜುರಿಗೊಳಗಾಗಿರುವ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾರ ಬದಲಿಗಳಾಗಿದ್ದರೆ, ವೇಗಿ ಅವೇಶ್ ಖಾನ್ ಬದಲಿಗೆ ಸೌರಭ್ ಕುಮಾರ್ ತಂಡವನ್ನು ಸೇರಿಕೊಂಡಿದ್ದಾರೆ.

IND vs ENG: ಇಬ್ಬರು ಔಟ್, ಮೂವರು ಇನ್; ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ
ಸೌರಭ್ ಕುಮಾರ್, ಸರ್ಫರಾಜ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಎರಡನೇ ಟೆಸ್ಟ್ ಆರಂಭಕ್ಕೆ ಇನ್ನೂ 6 ದಿನಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ಪಾಳಯದಿಂದ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ತಂಡದ ಇಬ್ಬರು ನಂಬಿಕಸ್ಥ ಹಾಗೂ ಅನುಭವಿ ಆಟಗಾರರಾದ ಕೆಎಲ್ ರಾಹುಲ್ (KL Rahul) ಹಾಗೂ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಗಾಯದ ಸಮಸ್ಯೆಯಿಂದಾಗಿ ಎರಡನೇ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದಾರೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನು 28 ರನ್​ಗಳಿಂದ ಸೋತು ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ರೋಹಿತ್ ಪಡೆಗೆ ಈ ಸುದ್ದಿ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ನಡುವೆ ತಂಡದಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರ ಬದಲಿಗೆ ಬಿಸಿಸಿಐ (BCCI), ಮೂವರು ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದೆ.

ಮೂವರಿಗೆ ತೆರೆಯಿತು ಟೀಂ ಇಂಡಿಯಾ ಕದ

ಟೀಂ ಇಂಡಿಯಾದ ಆಯ್ಕೆಗಾರರು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸರಣಿಯ ಎರಡನೇ ಪಂದ್ಯಕ್ಕಾಗಿ ಭಾರತ ತಂಡದಕ್ಕೆ ಆಯ್ಕೆ ಮಾಡಿದ್ದಾರೆ. ಸರ್ಫರಾಜ್ ಖಾನ್ ಹಾಗೂ ವಾಷಿಂಗ್ಟನ್ ಸುಂದರ್ ಇಂಜುರಿಗೊಳಗಾಗಿರುವ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾರ ಬದಲಿಗಳಾಗಿದ್ದರೆ, ವೇಗಿ ಅವೇಶ್ ಖಾನ್ ಬದಲಿಗೆ ಸೌರಭ್ ಕುಮಾರ್ ತಂಡವನ್ನು ಸೇರಿಕೊಂಡಿದ್ದಾರೆ.

ತಂಡಕ್ಕೆ ಎಂಟ್ರಿ ಪಡೆದ ಸರ್ಫರಾಜ್

ದೇಶೀ ಕ್ರಿಕೆಟ್​ನಲ್ಲಿ ರನ್​ಗಳ ಶಿಖರ ಕಟ್ಟಿದ್ದ ಸರ್ಫರಾಜ್ ಖಾನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆ ಬಹಳ ದಿನಗಳಿಂದ ಇತ್ತು. ಸರ್ಫರಾಜ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಂದರ ನಂತರ ಒಂದರಂತೆ ಅನೇಕ ಅತ್ಯುತ್ತಮ ಇನ್ನಿಂಗ್ಸ್‌ಗಳನ್ನು ಆಡಿದರು. ಆದರೂ ಅವರನ್ನು ನಿರಂತರವಾಗಿ ನಿರ್ಲಕ್ಷಿಸಲಾಗುತ್ತಿತ್ತು. ಇದೀಗ ಅಂತಿಮವಾಗಿ ಸರ್ಫರಾಜ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಸರ್ಫರಾಜ್, ಇಲ್ಲಿಯವರೆಗೆ 45 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಸರ್ಫರಾಜ್ 66 ಇನ್ನಿಂಗ್ಸ್‌ಗಳಲ್ಲಿ 14 ಶತಕ ಮತ್ತು 11 ಅರ್ಧ ಶತಕ ಸಹಿತ 3912 ರನ್ ಗಳಿಸಿದ್ದಾರೆ. 79.65 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಸರ್ಫರಾಜ್ ಅವರ ಪ್ರಥಮ ದರ್ಜೆಯ ಗರಿಷ್ಠ ಸ್ಕೋರ್ 301 ರನ್ ಆಗಿದೆ.

Breaking: ಭಾರತಕ್ಕೆ ಬಿಗ್ ಶಾಕ್; 2ನೇ ಟೆಸ್ಟ್​ನಿಂದ ಹೊರಬಿದ್ದ ರವೀಂದ್ರ ಜಡೇಜಾ, ಕೆಎಲ್ ರಾಹುಲ್..

ಗಿಲ್ ಮತ್ತು ಶ್ರೇಯಸ್ ಸ್ಥಾನಕ್ಕೆ ಅಪಾಯ!

ಸರ್ಫರಾಜ್ ಖಾನ್ ತಂಡಕ್ಕೆ ಎಂಟ್ರಿ ಕೊಟ್ಟ ನಂತರ ಇದೀಗ ಶುಭ್​ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಅಪಾಯ ಎದುರಾಗಿದೆ. ಗಿಲ್ ಮತ್ತು ಅಯ್ಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಸತತವಾಗಿ ವಿಫಲರಾಗಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರನ್ನು ತಂಡದಿಂದ ಕೈಬಿಡುವಂತೆ ಒತ್ತಾಯ ಕೇಳಿಬಂದಿತ್ತು. ಇದೀಗ ಸರ್ಫರಾಜ್ ತಂಡಕ್ಕೆ ಎಂಟ್ರಿ ಕೊಟ್ಟ ಬಳಿಕ ಈ ಇಬ್ಬರು ಆಟಗಾರರ ಸ್ಥಾನಕ್ಕೆ ಕಂಟಕ ಎದುರಾಗಿದೆ.

ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ