IND vs ENG: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಹೀಗಿರಲಿದೆ
India vs England ODI: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಗುರುವಾರದಿಂದ ಶುರುವಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಫೆಬ್ರವರಿ 9 ರಂದು ಕಟಕ್ನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಫೆ.6) ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಏಕೆಂದರೆ ಈ ಸರಣಿಯ ಬಳಿಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ತೆರಳಲಿದ್ದು, ಅದಕ್ಕೂ ಮುನ್ನ ಸಮತೋಲಿತ ಆಡುವ ಬಳಗವನ್ನು ರೂಪಿಸಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.
ಅದರಂತೆ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಲಿದ್ದಾರೆ.
ಇನ್ನು ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ವೇಗಿಗಳಾಗಿ ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಕಣಕ್ಕಿಳಿಯಲಿದ್ದು, ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಅಥವಾ ಕುಲ್ದೀಪ್ ಯಾದವ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ…
- ರೋಹಿತ್ ಶರ್ಮಾ (ನಾಯಕ)
- ಶುಭ್ಮನ್ ಗಿಲ್
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಕೆಎಲ್ ರಾಹುಲ್ (ವಿಕೆಟ್ ಕೀಪರ್)
- ಹಾರ್ದಿಕ್ ಪಾಂಡ್ಯ
- ರವೀಂದ್ರ ಜಡೇಜಾ
- ಮೊಹಮ್ಮದ್ ಶಮಿ,
- ಅರ್ಷದೀಪ್ ಸಿಂಗ್
- ಹರ್ಷಿತ್ ರಾಣಾ
- ವರುಣ್ ಚಕ್ರವರ್ತಿ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಇದನ್ನೂ ಓದಿ: ಬ್ರಾವೊ ವಿಶ್ವ ದಾಖಲೆ ಬೌಲ್ಡ್: ಹೊಸ ಇತಿಹಾಸ ನಿರ್ಮಿಸಿದ ರಶೀದ್ ಖಾನ್
ಜಸ್ಪ್ರೀತ್ ಬುಮ್ರಾ ಅಲಭ್ಯ:
ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಅವರನ್ನು ಮೊದಲೆರಡು ಪಂದ್ಯಗಳಿಂದ ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ಹರ್ಷಿತ್ ರಾಣಾಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ಫೆಬ್ರವರಿ 12 ರೊಳಗೆ ಟ್ನೆಸ್ ಸಾಧಿಸಿದರೆ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದು.