AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

England vs India, 2nd Test: ಭಾರತ ಮತ್ತು ಇಂಗ್ಲೆಂಡ್ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ಈವರೆಗೆ 8 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ 7 ಮ್ಯಾಚ್​ಗಳಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳಲಷ್ಟೇ ಭಾರತ ತಂಡ ಯಶಸ್ವಿಯಾಗಿದೆ. ಹೀಗಾಗಿ ಈ ಬಾರಿ ಭಾರತ ತಂಡ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

IND vs ENG: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Team India
ಝಾಹಿರ್ ಯೂಸುಫ್
|

Updated on: Jul 01, 2025 | 3:25 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಮ್ಯಾಚ್ ಬುಧವಾರದಿಂದ (ಜು.2) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಈಗಾಗಲೇ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಇದಾಗ್ಯೂ ಭಾರತ ತಂಡ ತನ್ನ ಆಡುವ ಬಳಗವನ್ನು ಹೆಸರಿಸಿಲ್ಲ. ಅದರಲ್ಲೂ ಮೊದಲ ಪಂದ್ಯದಲ್ಲಿ ಸೋತಿರುವ ಕಾರಣ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಎಡ್ಜ್​ಬಾಸ್ಟನ್​ನಲ್ಲಿ ಭಾರತ ತಂಡವು 2 ಬದಲಾವಣೆಯೊಂದಿಗೆ ಕಣಕ್ಕಿಳಿಬಹುದು.

ಇಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸುವುದು ಖಚಿತ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಆಡಲಿದ್ದಾರೆ. ಆರನೇ ಕ್ರಮಾಂಕದಲ್ಲಿ ಕರುಣ್ ನಾಯರ್ ಆಡಿದರೆ, ಏಳನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಆದರೆ ಎಂಟನೇ ಕ್ರಮಾಂಕದಿಂದ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ. ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಆಡುವ ಬಳಗದಲ್ಲಿ ಚಾನ್ಸ್ ನೀಡಬಹುದು.

ಹಾಗೆಯೇ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದರೆ, ಅವರ ಬದಲಿಗೆ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಬಹುದು. ಅಲ್ಲದೆ ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ರಿಷಭ್ ಪಂತ್, ಕರುಣ್ ನಾಯರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: IPL 2026: ಚೆನ್ನೈ ಸೂಪರ್ ಕಿಂಗ್ಸ್​ಗೆ ಸಂಜು ಸ್ಯಾಮ್ಸನ್?

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?