
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಮ್ಯಾಚ್ ಬುಧವಾರದಿಂದ (ಜು.2) ಶುರುವಾಗಲಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಈಗಾಗಲೇ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಇದಾಗ್ಯೂ ಭಾರತ ತಂಡ ತನ್ನ ಆಡುವ ಬಳಗವನ್ನು ಹೆಸರಿಸಿಲ್ಲ. ಅದರಲ್ಲೂ ಮೊದಲ ಪಂದ್ಯದಲ್ಲಿ ಸೋತಿರುವ ಕಾರಣ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಎಡ್ಜ್ಬಾಸ್ಟನ್ನಲ್ಲಿ ಭಾರತ ತಂಡವು 2 ಬದಲಾವಣೆಯೊಂದಿಗೆ ಕಣಕ್ಕಿಳಿಬಹುದು.
ಇಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸುವುದು ಖಚಿತ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಆಡಲಿದ್ದಾರೆ. ಆರನೇ ಕ್ರಮಾಂಕದಲ್ಲಿ ಕರುಣ್ ನಾಯರ್ ಆಡಿದರೆ, ಏಳನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಆದರೆ ಎಂಟನೇ ಕ್ರಮಾಂಕದಿಂದ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ. ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಆಡುವ ಬಳಗದಲ್ಲಿ ಚಾನ್ಸ್ ನೀಡಬಹುದು.
ಹಾಗೆಯೇ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದರೆ, ಅವರ ಬದಲಿಗೆ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಬಹುದು. ಅಲ್ಲದೆ ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…