IND vs ENG: ತಂಡಕ್ಕೆ ಮೂವರ ಸೇರ್ಪಡೆ; 2ನೇ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ

IND vs ENG: ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಎರಡನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಈಗಾಗಲೇ ಇತ್ತು. ಇದೀಗ ಬಿಸಿಸಿಐ ಹೇಳಿಕೆ ಬಳಿಕ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ಈ ಇಬ್ಬರೂ ಆಟಗಾರರು ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇಂತಹ ಪರಿಸ್ಥಿತಿಯಲ್ಲಿ ಎರಡನೇ ಟೆಸ್ಟ್​ ಪಂದ್ಯಕ್ಕೆ ಇವರ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

IND vs ENG: ತಂಡಕ್ಕೆ ಮೂವರ ಸೇರ್ಪಡೆ; 2ನೇ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jan 29, 2024 | 10:38 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ವಿಶಾಖಪಟ್ಟಣದಲ್ಲ ನಡೆಯಲ್ಲಿದೆ. ಈ ಪಂದ್ಯಕ್ಕೆ ಇನ್ನೂ 6 ದಿನಗಳು ಇರುವಾಗಲೇ ಟೀಂ ಇಂಡಿಯಾದಿಂದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ ಎಂಬ ಶಾಕಿಂಗ್ ಸುದ್ದಿ ಕೇಳಿಬಂದಿದೆ. ವಾಸ್ತವವಾಗಿ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ರವೀಂದ್ರ ಜಡೇಜಾ (Ravindra Jadeja) ಮತ್ತು ಕೆಎಲ್ ರಾಹುಲ್ (KL Rahul) ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಜಾಗಕ್ಕೆ ಮೂವರು ಆಟಗಾರರು ಆಯ್ಕೆಯಾಗಿದ್ದು, ಇವರಲ್ಲಿ ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್ ಮತ್ತು ಸೌರಭ್ ಕುಮಾರ್ ಸೇರಿದ್ದಾರೆ. ತಂಡಕ್ಕೆ ಹೊಸದಾಗಿ ಮೂವರ ಆಗಮನವಾಗಿರುವುದರಿಂದ ಮುಂದಿನ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್ ಕೂಡ ಬದಲಾವಣೆಯಾಗುವುದು ಖಚಿತವಾಗಿದೆ.

ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಎರಡನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಈಗಾಗಲೇ ಇತ್ತು. ಇದೀಗ ಬಿಸಿಸಿಐ ಹೇಳಿಕೆ ಬಳಿಕ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ಈ ಇಬ್ಬರೂ ಆಟಗಾರರು ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇಂತಹ ಪರಿಸ್ಥಿತಿಯಲ್ಲಿ ಎರಡನೇ ಟೆಸ್ಟ್​ ಪಂದ್ಯಕ್ಕೆ ಇವರ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

IND vs ENG: ಎರಡನೇ ಟೆಸ್ಟ್ ನಡೆಯಲ್ಲಿರುವ ವಿಶಾಖಪಟ್ಟಣದಲ್ಲಿ ಭಾರತದ ದಾಖಲೆ ಹೇಗಿದೆ?

ರೋಹಿತ್ ಯಾರಿಗೆ ಅವಕಾಶ ನೀಡಲಿದ್ದಾರೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುವುದು ನಿಶ್ಚಿತ. ಕೊನೆಯ ಅವಕಾಶದ ರೂಪದಲ್ಲಿ ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಎಂದಿನಂತೆ ಶ್ರೇಯಸ್ ಅಯ್ಯರ್ ಐದನೇ ಸ್ಥಾನದಲ್ಲಿ ಆಡುವುದನ್ನು ಕಾಣಬಹುದಾಗಿದೆ. ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ 80ಕ್ಕೂ ಹೆಚ್ಚು ರನ್‌ಗಳ ಇನ್ನಿಂಗ್ಸ್‌ ಕೂಡ ಆಡಿದ್ದರು. ಇದೀಗ ಅವರ ಅಲಭ್ಯತೆಯನ್ನು ತುಂಬಲು ಇಬ್ಬರು ಆಟಗಾರರು ರೇಸ್​ನಲ್ಲಿದ್ದಾರೆ. ಅವರಲ್ಲಿ ಒಬ್ಬರು ಈಗಾಗಲೇ ತಂಡಕ್ಕೆ ಸೇರ್ಪಡೆಗೊಂಡಿರುವ ರಜತ್ ಪಾಟಿದಾರ್, ಇನ್ನೊಬ್ಬರು ಸರ್ಫರಾಜ್ ಖಾನ್. ಇವರಿಬ್ಬರಲ್ಲಿ ನಾಯಕ ರೋಹಿತ್ ಶರ್ಮಾ ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಸರ್ಫರಾಜ್ ಖಾನ್​ಗೆ ಆಧ್ಯತೆ?

ಭಾರತದ ಟೆಸ್ಟ್ ತಂಡದಲ್ಲಿ ಸರ್ಫರಾಜ್ ಖಾನ್ ಮೊದಲ ಬಾರಿಗೆ ಸೇರ್ಪಡೆಗೊಂಡಿದ್ದಾರೆ. ಅವರ ಪ್ರಥಮ ದರ್ಜೆ ಅಂಕಿಅಂಶಗಳು ಉತ್ತಮವಾಗಿವೆ, ಆದ್ದರಿಂದ ಅವರಿಗೆ ಅವಕಾಶ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಉಳಿದಂತೆ ವಿಕೆಟ್‌ಕೀಪರ್ ಜವಾಬ್ದಾರಿ ಮತ್ತೊಮ್ಮೆ ಕೆ.ಎಸ್.ಭರತ್ ಅವರ ಹೆಗಲಿಗೆ ಬರಲಿದೆ. ವಿಕೆಟ್‌ಕೀಪರ್ ರೂಪದಲ್ಲಿ ಧ್ರುವ್ ಜುರೈಲ್ ಎರಡನೇ ಆಯ್ಕೆಯಾಗಿದ್ದರೂ, ಎರಡನೇ ಟೆಸ್ಟ್​ನಲ್ಲಿ ಅವರಿಗೆ ಅವಕಾಶ ಸಿಗುವ ನಿರೀಕ್ಷೆ ಕಡಿಮೆಯಾಗಿದೆ.

ರವೀಂದ್ರ ಜಡೇಜಾ ಬದಲಿಗೆ ಸುಂದರ್?

ಇನ್ನು ರವೀಂದ್ರ ಜಡೇಜಾ ಬಗ್ಗೆ ಮಾತನಾಡುವುದಾದರೆ ಅವರ ಜಾಗದಲ್ಲಿ ವಾಷಿಂಗ್ಟನ್ ಸುಂದರ್ ಮತ್ತು ಸೌರಭ್ ಕುಮಾರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ವಾಷಿಂಗ್ಟನ್ ಸುಂದರ್‌ಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ಸೌರಭ್ ಕೂಡ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರ್ಪಡೆಗೊಳ್ಳಲು ಪ್ರಬಲ ಸ್ಪರ್ಧಿಯಾಗಲಿದ್ದಾರೆ. ಅಂದರೆ ಕಳೆದ ಪಂದ್ಯದ ಆಡುವ ಹನ್ನೊಂದರಿಂದ ಈ ಬಾರಿ ಒಟ್ಟು ಎರಡು ಬದಲಾವಣೆಗಳನ್ನು ಮಾಡಬಹುದಾಗಿದೆ. ಕೆಎಲ್ ರಾಹುಲ್ ಬದಲಿಗೆ ಸರ್ಫರಾಜ್ ಖಾನ್ ಮತ್ತು ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ಸಿಗಬಹುದು. ಉಳಿದ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದಿರಬಹುದು.

ಎರಡನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ​್ಮನ್ ಗಿಲ್, ಶ್ರೇಯಸ್ ಅಯ್ಯರ್, ಸರ್ಫರಾಜ್ ಖಾನ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!