IND vs ENG: 253 ರನ್​ಗಳಿಗೆ ಇಂಗ್ಲೆಂಡ್ ಆಲೌಟ್; 6 ವಿಕೆಟ್ ಪಡೆದ ಬುಮ್ರಾ..!

IND vs ENG: ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

IND vs ENG: 253 ರನ್​ಗಳಿಗೆ ಇಂಗ್ಲೆಂಡ್ ಆಲೌಟ್; 6 ವಿಕೆಟ್ ಪಡೆದ ಬುಮ್ರಾ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Feb 03, 2024 | 5:25 PM

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ 143 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ. ಇಂಗ್ಲೆಂಡ್ ಪರ ಆರಂಭಿಕ ಝಾಕ್ ಕ್ರೌಲಿ (Zak Crawley) ಅತ್ಯಧಿಕ 76 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಬೆನ್ ಸ್ಟೋಕ್ಸ್​ 47 ರನ್​ಗಳ ಕೊಡುಗೆ ನೀಡಿದರು. ಬೌಲಿಂಗ್​ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ಜಸ್ಪ್ರೀತ್ ಬುಮ್ರಾ (Jasprit Bumrah) 6 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ (Kuldeep Yadav) 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

6 ವಿಕೆಟ್‌ ಪಡೆದ ಬುಮ್ರಾ

ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ಟೀಂ ಇಂಡಿಯಾ 396 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಇದಾದ ಬಳಿಕ ಎರಡನೇ ದಿನವೇ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಟೀಂ ಇಂಡಿಯಾ ಆಲೌಟ್ ಮಾಡಿದೆ. ಜಸ್ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ನಲುಗಿದ ಇಂಗ್ಲೆಂಡ್ ಇನ್ನಿಂಗ್ಸ್ 55.5 ಓವರ್‌ಗಳಲ್ಲಿ 253 ರನ್‌ಗಳಿಗೆ ಕೊನೆಗೊಂಡಿತು. ಈ ಮೂಲಕ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 143 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ಪರ ಝಾಕ್ ಕ್ರೌಲಿ 76 ಮತ್ತು ಬೆನ್ ಸ್ಟೋಕ್ಸ್ 47 ರನ್ ಗಳಿಸಿದರು. ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ಪರ ಅತಿ ಹೆಚ್ಚು 6 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

IND vs ENG: ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಜಸ್ಪ್ರೀತ್ ಬುಮ್ರಾ..!

ಇಂಗ್ಲೆಂಡ್ ಬ್ಯಾಟಿಂಗ್ ಹೀಗಿತ್ತು

ಟೀಂ ಇಂಡಿಯಾ ನೀಡಿದ 396 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ಮೊದಲ 2 ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿತು. ಆರಂಭಿಕ ಜೋಡಿ ಝಾಕ್ ಕ್ರೌಲಿ-ಬೆನ್ ಡಕೆಟ್ 59 ರನ್ ಜೊತೆಯಾಟವಾಡಿದರು. ಝಾಕ್ ಕ್ರೌಲಿ ಮತ್ತು ಒಲ್ಲಿ ಪೋಪ್ ಇಬ್ಬರೂ ಎರಡನೇ ವಿಕೆಟ್‌ಗೆ 55 ರನ್ ಸೇರಿಸಿದರು. ಆದರೆ ಆ ಬಳಿಕ ಟೀಂ ಇಂಡಿಯಾದ ಬೌಲರ್‌ಗಳು ನಿಗದಿತ ಅಂತರದಲ್ಲಿ ಇಂಗ್ಲೆಂಡ್ ತಂಡದ ವಿಕೆಟ್ ಪಡೆದು ತಂಡವನ್ನು ಬೇಗನೇ ಆಲೌಟ್ ಮಾಡಿದರು. ಝಾಕ್ ಕ್ರೌಲಿ ಮತ್ತು ಬೆನ್ ಸ್ಟೋಕ್ಸ್ ಹೊರತುಪಡಿಸಿ, ಇಂಗ್ಲೆಂಡ್‌ನಿಂದ ಯಾರಿಗೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ತಂಡದ ನಾಲ್ವರು ಎರಡಂಕಿ ತಲುಪುವ ಮುನ್ನವೇ ವಿಕೆಟ್ ಒಪ್ಪಿಸಿದರು. ಇದು ಇಂಗ್ಲೆಂಡ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ

ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದಿಂದ 6 ವಿಕೆಟ್ ಪಡೆದು ಟೆಸ್ಟ್ ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳ ಮೈಲಿಗಲ್ಲನ್ನು ದಾಟಿದ ಭಾರತದ 17ನೇ ಬೌಲರ್ ಎನಿಸಿಕೊಂಡರು. ಬುಮ್ರಾ ಹೊರತುಪಡಿಸಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು. ಇದೀಗ ಎರಡನೇ ದಿನವೇ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಕಲೆಹಾಕಿದೆ. ಆರಂಭಿಕರಾದ ಯಶಸ್ವಿ ಜೈಸ್ವಾಲ್ 15 ರನ್ ಹಾಗೂ ನಾಯಕ ರೋಹಿತ್ ಶರ್ಮಾ 13 ರನ್ ಸಿಡಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Sat, 3 February 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್