AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ವಿರುದ್ಧದ ಟಿ20- ಏಕದಿನ ಸರಣಿಗೆ ಜಸ್ಪ್ರೀತ್ ಬುಮ್ರಾ ಅನುಮಾನ..!

Jasprit Bumrah injury: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಕೊನೆಯ ಪಂದ್ಯದಲ್ಲಿ ಬೆನ್ನು ನೋವಿಗೆ ತುತ್ತಾಗಿ ಪಂದ್ಯಕ್ಕೆ ಅಲಭ್ಯರಾಗಿದ್ದ ಜಸ್ಪ್ರೀತ್ ಬುಮ್ರಾ ಮತ್ತೆ ಅಖಾಡಕ್ಕಿಳಿಯುವುದು ಯಾವಾಗ ಎಂಬುದರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವರದಿ ಪ್ರಕಾರ ಜನವರಿ 22 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರ ಭಾಗವಹಿಸುವಿಕೆ ಅನುಮಾನದಲ್ಲಿದೆ. ಟಿ20 ಮತ್ತು ಏಕದಿನ ಸರಣಿಗಳಲ್ಲಿ ಬುಮ್ರಾ ಆಡುವುದೇ ಅನುಮಾನ ಎಂದು ಹೇಳಲಾಗುತ್ತಿದೆ.

IND vs ENG: ಇಂಗ್ಲೆಂಡ್‌ ವಿರುದ್ಧದ ಟಿ20- ಏಕದಿನ ಸರಣಿಗೆ ಜಸ್ಪ್ರೀತ್ ಬುಮ್ರಾ ಅನುಮಾನ..!
ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Jan 06, 2025 | 3:49 PM

Share

ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಸೋತಿರುವ ಟೀಂ ಇಂಡಿಯಾಕ್ಕೆ ಮತ್ತೊಂದು ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದೆ. ಸಿಡ್ನಿ ಟೆಸ್ಟ್​ನ ಎರಡನೇ ದಿನದಾಟದ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸ್ಕ್ಯಾನಿಂಗ್​ಗಾಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆ ಬಳಿಕ ತಂಡವನ್ನು ಕೂಡಿಕೊಂಡಿದ್ದ ಬುಮ್ರಾ ಮೂರನೇ ದಿನದಾಟದಲ್ಲಿ ತಂಡದ ಪರ ಕಣಕ್ಕಿಳಿದಿರಲಿಲ್ಲ. ಇತ್ತ ಬೌಲಿಂಗ್ ಸಹ ಮಾಡಿರಲಿಲ್ಲ. ಇದರರ್ಥ ಬುಮ್ರಾ ಅವರ ಇಂಜುರಿ ಕೊಂಚ ಗಂಭೀರವಾಗಿರುವ ಸಾಧ್ಯತೆಗಳಿವೆ. ಈ ನಡುವೆ ಮತ್ತೊಂದು ಆಘಾತಕ್ಕಾರಿ ಸುದ್ದಿ ಹರಿದಾಡುತ್ತಿದ್ದು, ಇದೇ ಜನವರಿ 22 ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ಧದ ತವರು ಸರಣಿಯಲ್ಲಿ ಬುಮ್ರಾ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಇಂಗ್ಲೆಂಡ್‌ ವಿರುದ್ಧ ಟಿ20- ಏಕದಿನ ಸರಣಿ

ಮೇಲೆ ಹೇಳಿದಂತೆ ಬಾರ್ಡರ್ ಗವಾಸ್ಕರ್ ಟ್ರೋಫಿ ನಂತರ ಇದೀಗ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿಗಳನ್ನು ಆಡಬೇಕಿದೆ. ಈ ಎರಡು ಸರಣಿಗಳಿಗೆ ಟೀಂ ಇಂಡಿಯಾ ಇನ್ನೂ ಪ್ರಕಟವಾಗಿಲ್ಲ. ಆದರೆ ಅದಕ್ಕೂ ಮೊದಲು ಬುಮ್ರಾ ಅವರ ಫಿಟ್ನೆಸ್ ತಂಡಕ್ಕೆ ದೊಡ್ಡ ತಲೆನೋವಾಗಿದೆ. ಹೀಗಾಗಿ ಸರಣಿ ವೇಳೆಗೆ ಬುಮ್ರಾ ಗುಣಮುಖರಾಗಿ ತಂಡದ ಪರ ಕಣಕ್ಕಿಳಿಯುತ್ತಾರಾ ಎಂಬುದು ಅಭಿಮಾನಿಗಳಲ್ಲಿ ಮೂಡಿರುವ ಪ್ರಶ್ನೆಯಾಗಿದೆ.

ಒಂದು ವೇಳೆ ಸರಣಿ ಆರಂಭಕ್ಕೂ ಮುನ್ನ ಬುಮ್ರಾ ಸಂಪೂರ್ಣವಾಗಿ ಚೇತರಿಸಿಕೊಂಡರೆ ಟೀಂ ಇಂಡಿಯಾ ಕೊಂಚ ನಿರಾಳವಾಗಲಿದೆ. ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಮೊದಲು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಿದೆ. ಆ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಒಂದು ವೇಳೆ ಬುಮ್ರಾ ಟಿ20 ಸರಣಿ ಆಡದಿದ್ದರೂ ಆಡಳಿತ ಮಂಡಳಿಗೆ ಯಾವುದೇ ಸಮಸ್ಯೆ ಇಲ್ಲ.

ಏಕದಿನ ಸರಣಿಗೆ ಬುಮ್ರಾ ಅನಿವಾರ್ಯ

ಆದರೆ ಏಕದಿನ ಸರಣಿ ವೇಳೆಗೆ ಬುಮ್ರಾ ಗುಣಮುಖರಾಗಲೇಬೇಕು. ಏಕೆಂದರೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ಬಳಿಕ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯುವುದರಿಂದ, ಈ ಟೂರ್ನಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿ ಟೀಂ ಇಂಡಿಯಾದ ತಯಾರಿಗೆ ಸಹಕಾರಿಯಾಗಲಿದೆ. ಹೀಗಾಗಿ ಈ ಸರಣಿಯಲ್ಲಿ ಬುಮ್ರಾ ಆಡುವುದು ಅನಿವಾರ್ಯವಾಗಿದೆ. ಹೀಗಾಗಿ ಏಕದಿನ ಸರಣಿ ವೇಳೆಗೆ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗಿ ಮೈದಾನಕ್ಕೆ ಮರಳಬೇಕೆಂಬುದು ಅಭಿಮಾನಿಗಳ ಪ್ರಾರ್ಥನೆಯಾಗಿದೆ.

ಆಸ್ಟ್ರೇಲಿಯಾದಲ್ಲಿ ಬುಮ್ರಾ ಅದ್ಭುತ ಪ್ರದರ್ಶನ

ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದರು. ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿರುವ ಬುಮ್ರಾ, ಸರಣಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಅತ್ಯಧಿಕ 32 ವಿಕೆಟ್​ಗಳನ್ನು ಪಡೆದರು. ಇದಕ್ಕಾಗಿ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಈ ಸರಣಿಯಲ್ಲಿ ಬುಮ್ರಾ ಮೂರು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರ ಜೊತೆಗೆ 76 ರನ್‌ಗಳಿಗೆ 6 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದಲ್ಲದೇ ಬುಮ್ರಾ 2 ಪಂದ್ಯಗಳಲ್ಲಿ ಟೀಂ ಇಂಡಿಯಾ ನಾಯಕತ್ವವನ್ನೂ ವಹಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Mon, 6 January 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ