ಬರೋಬ್ಬರಿ 2928 ದಿನಗಳ ಬಳಿಕ ಇಂಗ್ಲೆಂಡ್ ತಂಡದಲ್ಲಿ ಸ್ಥಾನ..!
India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ನಾಳೆಯಿಂದ (ಜುಲೈ 23) ಶುರುವಾಗಲಿದೆ. ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

ಮ್ಯಾಚೆಂಸ್ಟರ್ನಲ್ಲಿ ನಡೆಯಲಿರುವ ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಆಡುವ ಬಳಗವನ್ನು ಪ್ರಕಟಿಸಿದೆ. ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಲಿಯಾಮ್ ಡಾಸನ್ ಕೂಡ ಸ್ಥಾನ ಪಡೆದಿದ್ದಾರೆ. ಅದು ಕೂಡ ಬರೋಬ್ಬರಿ 2928 ದಿನಗಳ ಬಳಿಕ ಎಂಬುದು ವಿಶೇಷ. ಅಂದರೆ ಲಿಯಾಮ್ ಡಾಸನ್ ಕೊನೆಯ ಬಾರಿ ಇಂಗ್ಲೆಂಡ್ ಪರ ಕಣಕ್ಕಿಳಿದದ್ದು 2017 ರಲ್ಲಿ.
8 ವರ್ಷಗಳ ಹಿಂದೆ ಇಂಗ್ಲೆಂಡ್ ಪರ ಇಂಗ್ಲೆಂಡ್ ಪರ 3 ಟೆಸ್ಟ್ ಪಂದ್ಯಗಳನ್ನಾಡಿದ್ದ ಲಿಯಾಮ್ ಡಾಸನ್, 5 ಇನಿಂಗ್ಸ್ಗಳಿಂದ 7 ವಿಕೆಟ್ ಕಬಳಿಸಿದ್ದರು. ಹಾಗೆಯೇ 84 ರನ್ ಕಲೆಹಾಕಿದ್ದರು. ಇದೀಗ ಬರೋಬ್ಬರಿ 2928 ದಿನಗಳ ಬಳಿಕ ಮತ್ತೊಮ್ಮೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಶೀರ್ ಔಟ್, ಡಾಸನ್ ಇನ್:
ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಲಿಯಾಮ್ ಡಾಸನ್ ಕಾಣಿಸಿಕೊಂಡಿರಲಿಲ್ಲ. ಆದರೆ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ತಂಡದ ಸ್ಪಿನ್ನರ್ ಶೊಯೆಬ್ ಬಶೀರ್ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಮುಂದಿನ ಎರಡು ಪಂದ್ಯಗಳಿಂದ ಹೊರಬಿದ್ದಿದ್ದು, ಅವರ ಬದಲಿಗೆ ಲಿಯಾಮ್ ಡಾಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಹೀಗೆ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಲಿಯಾಮ್ ಡಾಸನ್ಗೆ ಇದೀಗ ಪ್ಲೇಯಿಂಗ್ ಇಲೆವೆನ್ನಲ್ಲೂ ಚಾನ್ಸ್ ಲಭಿಸಿದೆ. ಈ ಮೂಲಕ 8 ವರ್ಷಗಳ ಬಳಿಕ ಕಂಬ್ಯಾಕ್ ಮಾಡಲು ಡಾಸನ್ ಸಜ್ಜಾಗಿದ್ದಾರೆ.
ಡಾಸನ್ ಅಂಕಿ ಅಂಶಗಳು:
35 ವರ್ಷದ ಲಿಯಾಮ್ ಡಾಸನ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಈವರೆಗೆ 212 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 341 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 10731 ರನ್ ಕಲೆಹಾಕಿದ್ದಾರೆ. ಇದರ ನಡುವೆ 18 ಶತಕ ಹಾಗೂ 56 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.
ಸ್ಪಿನ್ ಬೌಲಿಂಗ್ ಆಲ್ರೌಂಡರ್ ಆಗಿರುವ ಡಾಸನ್ 273 ಇನಿಂಗ್ಸ್ಗಳಲ್ಲಿ ಬೌಲಿಂಗ್ ಸಹ ಮಾಡಿದ್ದು, ಈ ವೇಳೆ 371 ವಿಕೆಟ್ಗಳನ್ನು ಪಡೆದಿದ್ದಾರೆ. ಇದರ ನಡುವೆ 15 ಬಾರಿ 5 ವಿಕೆಟ್ ಕಬಳಿಸಿ ಮಿಂಚಿದ್ದರು.
ಅಂದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಲಿಯಾಮ್ ಡಾಸನ್ ಬ್ಯಾಟಿಂಗ್ ಆಲ್ರೌಂಡರ್ ಎಂಬುದು. ಇದಾಗ್ಯೂ ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 371 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಲಿಯಾನ್ ಡಾಸನ್ ಕಡೆಯಿಂದ ಆಲ್ರೌಂಡರ್ ಪ್ರದರ್ಶನವನ್ನು ನಿರೀಕ್ಷಿಸಬಹುದು.
ಇದನ್ನೂ ಓದಿ: ಬರೋಬ್ಬರಿ 13 ಸಿಕ್ಸ್: ತೂಫಾನ್ ಸೆಂಚುರಿ ಸಿಡಿಸಿದ ಜೋಶ್
ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಜೇಮಿ ಸ್ಮಿತ್, ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್.
