IND vs ENG: ಮೊಹಮ್ಮದ್ ಶಮಿ ಅನ್​ಫಿಟ್​: ಕಣಕ್ಕಿಳಿಯುವುದು ಡೌಟ್

Mohammed Shami: ಏಕದಿನ ವಿಶ್ವಕಪ್ 2023 ರ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿತ್ತು. ಅಲ್ಲದೆ ಆ ಬಳಿಕ ಅವರು ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವಾಡಿಲ್ಲ.

IND vs ENG: ಮೊಹಮ್ಮದ್ ಶಮಿ ಅನ್​ಫಿಟ್​: ಕಣಕ್ಕಿಳಿಯುವುದು ಡೌಟ್
Mohammed Shami
Follow us
ಝಾಹಿರ್ ಯೂಸುಫ್
|

Updated on: Jan 25, 2025 | 8:32 AM

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಒಂದು ವರ್ಷದ ಬಳಿಕ ಭಾರತ ತಂಡಕ್ಕೆ ಹಿಂತಿರುಗಿದ್ದಾರೆ. ಇದಾಗ್ಯೂ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಶಮಿ ಕಣಕ್ಕಿಳಿದಿರಲಿಲ್ಲ. ಇದಕ್ಕೇನು ಕಾರಣ ಎಂಬುದು ಇದೀಗ ಬಹಿರಂಗವಾಗಿದೆ. ಮೊಹಮ್ಮದ್ ಶಮಿ ಈಗಲೂ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯಕ್ಕಾಗಿ ಚೆನ್ನೈನಲ್ಲಿ ನಡೆದ ಅಭ್ಯಾಸದ ವೇಳೆ ಶಮಿ ಕಾಲಿಗೆ ಸ್ಟ್ರಾಪಿಂಗ್​ ಹಾಕಿಕೊಂಡು ಬೌಲಿಂಗ್ ಅಭ್ಯಾಸ ಮಾಡಿದ್ದಾರೆ.

ಅತ್ತ ಸ್ಟ್ರಾಂಪಿಂಗ್​ನೊಂದಿಗೆ ಬೌಲಿಂಗ್ ಮಾಡುತ್ತಿರುವುದರಿಂದ ಅವರ ರನ್ ಅಪ್ ಕೂಡ ಸರಿಯಾಗಿರಲಿಲ್ಲ. ಅಲ್ಲದೆ ಓಡಲು ಸಹ ತೊಂದರೆ ಅನುಭವಿಸುತ್ತಿರುವಂತೆ ಭಾಸವಾಗಿದೆ. ಹೀಗಾಗಿ ದ್ವಿತೀಯ ಟಿ20 ಪಂದ್ಯದಲ್ಲೂ ಮೊಹಮ್ಮದ್ ಶಮಿ ಕಣಕ್ಕಿಳಿಯುವುದು ಅನುಮಾನ.

ಮೊಹಮ್ಮದ್ ಶಮಿಗೆ ಏನಾಗಿತ್ತು?

ಏಕದಿನ ವಿಶ್ವಕಪ್ 2023 ರ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

ಇದೀಗ ಒಂದು ವರ್ಷದ ಬಳಿಕ ತಂಡಕ್ಕೆ ಮರಳಿದರೂ ಅವರು ಸಂಪೂರ್ಣ ಫಿಟ್​ ಆಗಿರುವುದು ಅನುಮಾನ. ಹೀಗಾಗಿ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ.

ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ತಪ್ಪಿಸಿಕೊಂಡರೂ, ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲೇಬೇಕು. ಏಕೆಂದರೆ ಈ ಸರಣಿಯ ಬಳಿಕ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಆಡಬೇಕಿದೆ. ಅದಕ್ಕೂ ಮುನ್ನ ಮೊಹಮ್ಮದ್ ಶಮಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಒಂದು ವೇಳೆ ಮೊಹಮ್ಮದ್ ಶಮಿ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯದಿದ್ದರೆ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈ ಬಿಡಬಹುದು. ಅವರ ಬದಲಿಗೆ ಹರ್ಷಿತ್ ರಾಣಾ ಅಥವಾ ಮೊಹಮ್ಮದ್ ಸಿರಾಜ್​ಗೆ ಸ್ಥಾನ ಕಲ್ಪಿಸಬಹುದು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯು ಮೊಹಮ್ಮದ್ ಶಮಿ ಪಾಲಿಗೆ ಅಗ್ನಿ ಪರೀಕ್ಷೆ ಎನ್ನಬಹುದು.