IND vs ENG: ಟೀಮ್ ಇಂಡಿಯಾದಿಂದ ಇಬ್ಬರು ಔಟ್, ಮತ್ತಿಬ್ಬರು ಗಾಯಾಳು: ಓರ್ವನ ಎಂಟ್ರಿ

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ತೆಂಡೂಲ್ಕರ್-ಅ್ಯಂಡರ್ಸನ್ ಸರಣಿಯ ನಾಲ್ಕನೇ ಪಂದ್ಯವು ಬುಧವಾರದಿಂದ (ಜುಲೈ 23) ಶುರುವಾಗಲಿದೆ, ಈ ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ಅರ್ಷದೀಪ್ ಸಿಂಗ್ ಅಲಭ್ಯರಾಗಿದ್ದಾರೆ.

IND vs ENG: ಟೀಮ್ ಇಂಡಿಯಾದಿಂದ ಇಬ್ಬರು ಔಟ್, ಮತ್ತಿಬ್ಬರು ಗಾಯಾಳು: ಓರ್ವನ ಎಂಟ್ರಿ
Team India

Updated on: Jul 21, 2025 | 12:52 PM

ಮ್ಯಾಚೆಂಸ್ಟರ್ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ಯುವ ವೇಗಿ ಅರ್ಷದೀಪ್ ಸಿಂಗ್ ಹೊರಗುಳಿದಿದ್ದಾರೆ. ಎಡ ಮೊಣಕಾಲಿನ ಗಾಯದಿಂದಾಗಿ ನಿತೀಶ್ ಕುಮಾರ್ ರೆಡ್ಡಿ ಉಳಿದ ಎರಡು ಟೆಸ್ಟ್‌ಗಳಿಗೆ ಅಲಭ್ಯರಾಗಿದ್ದಾರೆ. ಅಲ್ಲದೆ ಶೀಘ್ರದಲ್ಲೇ ತವರು ತವರಿಗೆ ಮರಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇನ್ನು ಬೆಕೆನ್‌ಹ್ಯಾಮ್‌ನಲ್ಲಿ ನಡೆದ ತರಬೇತಿ ವೇಳೆ ನೆಟ್‌ನಲ್ಲಿ ಬೌಲಿಂಗ್ ಮಾಡುವಾಗ ಅರ್ಷದೀಪ್ ಸಿಂಗ್ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ಅವರು ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಇದರೊಂದಿಗೆ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಇಬ್ಬರು ಗಾಯಾಳು:

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಚೆಂಡು ಹಿಡಿಯುವ ಯತ್ನದಲ್ಲಿ ಪಂತ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಅಂದರೆ ಮ್ಯಾಚೆಂಸ್ಟರ್​​ನಲ್ಲಿ ಟೀಮ್ ಇಂಡಿಯಾ ಪರ ಧ್ರುವ್ ಜುರೇಲ್ ಅಥವಾ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುವ ಸಾಧ್ಯತೆಯಿದೆ.

ಹಾಗೆಯೇ ಲಾರ್ಡ್ಸ್ ಟೆಸ್ಟ್ ಪಂದ್ಯದ 4ನೇ ದಿನದಾಟದ ವೇಳೆ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ ತೊಡೆಸಂದು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೂ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

ಯುವ ವೇಗಿ ಎಂಟ್ರಿ:

ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್ ಗಾಯಗೊಳ್ಳುತ್ತಿದ್ದಂತೆ ಟೀಮ್ ಇಂಡಿಯಾ ಯುವ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಇಂಗ್ಲೆಂಡ್​ಗೆ ಕರೆಸಿಕೊಂಡಿದೆ. ಈ ಹಿಂದೆ ಭಾರತ ಎ ತಂಡವನ್ನು ಪ್ರತಿನಿಧಿಸಿದ್ದ ಕಂಬೋಜ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ  41 ಇನಿಂಗ್ಸ್​ಗಳಿಂದ ಒಟ್ಟು 79 ವಿಕೆಟ್ ಕಬಳಿಸಿದ್ದಾರೆ. ಇದರ ನಡುವೆ 2 ಬಾರಿ 5 ವಿಕೆಟ್ ಸಹ ಪಡೆದಿದ್ದಾರೆ. ಹೀಗಾಗಿ 24 ವರ್ಷದ ಅನ್ಶುಲ್ ಕಂಬೋಜ್​ಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಬರೋಬ್ಬರಿ 13 ಸಿಕ್ಸ್​: ಟಿ10 ಪಂದ್ಯದಲ್ಲಿ ತೂಫಾನ್ ಸೆಂಚುರಿ ಸಿಡಿಸಿದ ಜೋಶ್

 

ಭಾರತ ಟೆಸ್ಟ್ ತಂಡ:

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.