AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ

India vs England ODI: ಭಾರತ-ಇಂಗ್ಲೆಂಡ್ ಏಕದಿನ ಸರಣಿ ಆರಂಭವಾಗಿದೆ. ಟಿ20 ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಿದ್ಧವಾಗಿದೆ. ಇಂಗ್ಲೆಂಡ್ ಆಡುವ ಹನ್ನೊಂದರ ಬಳಗ ಘೋಷಿಸಿದೆ. ಈ ಸರಣಿಯಲ್ಲಿ ಭಾರತದ 8 ಆಟಗಾರರು ಇಂಗ್ಲೆಂಡ್ ನೆಲದಲ್ಲಿ ತಮ್ಮ ಮೊದಲ ಏಕದಿನ ಪಂದ್ಯವನ್ನಾಡಲಿದ್ದಾರೆ. ರೋಹಿತ್, ಕೊಹ್ಲಿ, ಬುಮ್ರಾ, ರಾಹುಲ್, ಕುಲದೀಪ್‌ಗೆ ಅನುಭವವಿದ್ದರೆ, ಗಿಲ್, ಶ್ರೇಯಸ್, ಇಶಾನ್ ಕಿಶನ್ ಸೇರಿದಂತೆ ಹಲವರಿಗೆ ಇದು ಇಂಗ್ಲೆಂಡ್‌ನಲ್ಲಿ ಮೊದಲ ಏಕದಿನ ಸರಣಿ.

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ
Team India
ಪೃಥ್ವಿಶಂಕರ
|

Updated on: Jul 13, 2026 | 9:57 PM

Share

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ. ಆದಾಗ್ಯೂ ಮೊದಲ ಏಕದಿನಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಖಚಿತವಾಗಿದೆ. ಆ ಪ್ಲೇಯಿಂಗ್​ನಲ್ಲಿ ಸ್ಥಾನ ಪಡೆಯಲಿರುವ ಬರೋಬ್ಬರಿ 8 ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಇದು ಮೊದಲ ಏಕದಿನ ಪಂದ್ಯವಾಗಿದೆ.

ಇಂಗ್ಲೆಂಡ್‌ನಲ್ಲಿ ಆಡಿದವರಿವರು

ಈ ಏಕದಿನ ಸರಣಿಗೆ ಆಯ್ಕೆಯಾಗಿರುವ 15 ಸದಸ್ಯರ ಭಾರತ ತಂಡದಲ್ಲಿ ಕೆಲವೇ ಕೆಲವು ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಏಕದಿನ ಸರಣಿಯನ್ನಾಡಿದ ಅನುಭವವಿದೆ. ಆ ಅನುಭವಿಗಳಲ್ಲಿ ವಿರಾಟ್ ಕೊಹ್ಲಿ (16 ಏಕದಿನ ಪಂದ್ಯ), ರೋಹಿತ್ ಶರ್ಮಾ 10 ಏಕದಿನ ಪಂದ್ಯ), ಜಸ್ಪ್ರೀತ್ ಬುಮ್ರಾ (3 ಏಕದಿನ ಪಂದ್ಯ), ಕೆಎಲ್ ರಾಹುಲ್ (3 ಏಕದಿನ ಪಂದ್ಯ), ಕುಲ್ದೀಪ್ ಯಾದವ್ (4 ಏಕದಿನ ಪಂದ್ಯ), ಪ್ರಸಿದ್ಧ್ ಕೃಷ್ಣ (3 ಏಕದಿನ ಪಂದ್ಯ) ಸೇರಿದ್ದಾರೆ.

ಇವರಿಗೆ ಇಂಗ್ಲೆಂಡ್​ನಲ್ಲಿ ಮೊದಲ ಏಕದಿನ ಸರಣಿ

ಉಳಿದಂತೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ, ಪ್ರಿನ್ಸ್ ಯಾದವ್ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್‌ ನೆಲದಲ್ಲಿ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಇದರಲ್ಲಿ ಕೆಲವು ಆಟಗಾರರಿ ಇಂಗ್ಲೆಂಡ್‌ ವಿರುದ್ಧ ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಇಂಗ್ಲೆಂಡ್‌ ನೆಲದಲ್ಲಿ ಆಡಿಲ್ಲ. ಇನ್ನು ಕೆಲವರು ಇಂಗ್ಲೆಂಡ್‌ ನೆಲದಲ್ಲಿ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನಾಡಿದ್ದಾರೆ. ಆದರೆ ಏಕದಿನ ಸರಣಿಯನ್ನು ಆಡಿಲ್ಲ. ಹೀಗಾಗಿ ಈ ಎಲ್ಲಾ ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಮೊದಲ ಏಕದಿನ ಸರಣಿ ಇದಾಗಲಿದೆ.

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ