AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿರಾಟ್ ಕೊಹ್ಲಿ ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India Vs England 1st: ಆತಿಥೇಯ ಭಾರತದ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ.

IND vs ENG: ವಿರಾಟ್ ಕೊಹ್ಲಿ ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
TV9 Web
| Updated By: ಝಾಹಿರ್ ಯೂಸುಫ್|

Updated on: Jan 24, 2024 | 1:54 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ಜ.25) ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.

ವಿರಾಟ್ ಕೊಹ್ಲಿ ಅಲಭ್ಯತೆಯ ಹೊರತಾಗಿಯೂ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. ಏಕೆಂದರೆ ಭಾರತ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಉತ್ತಮ ಸಮತೋಲನದ ಆಡುವ ಬಳಗವನ್ನು ರೂಪಿಸುವ ಆಯ್ಕೆ ಟೀಮ್ ಇಂಡಿಯಾ ಮುಂದಿದೆ.

ಆರಂಭಿಕರು ಯಾರು?

ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್​ ಪಂದ್ಯದಲ್ಲಿ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ವಿರಾಟ್ ಕೊಹ್ಲಿ ಬದಲಿಗೆ ಯಾರು?

ವಿರಾಟ್ ಕೊಹ್ಲಿಯ ಸ್ಥಾನದಲ್ಲಿ 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಇನ್ನು ಐದನೇ ಕ್ರಮಾಂಕವು ಕೆಎಲ್ ರಾಹುಲ್​ಗೆ ಖಾಯಂ ಎನ್ನಬಹುದು.

ಯಾರು ವಿಕೆಟ್ ಕೀಪರ್​?

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡುವುದಿಲ್ಲ ಎಂದು ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. ಸದ್ಯ ತಂಡದಲ್ಲಿರುವ ಅನುಭವಿ ವಿಕೆಟ್ ಕೀಪರ್ ಎಂದರೆ ಕೆಎಸ್ ಭರತ್. ಹೀಗಾಗಿ ಮೊದಲ ಪಂದ್ಯದಲ್ಲಿ ಭರತ್ ಅವರೇ ವಿಕೆಟ್ ಕೀಪರ್-ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಮೂವರು ಸ್ಪಿನ್ನರ್​ಗಳು:

ಹೈದರಾಬಾದ್​ ಪಿಚ್ ಸ್ಪಿನ್ನರ್​ಗಳಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ. ಹೀಗಾಗಿ ಟೀಮ್ ಇಂಡಿಯಾ ಮೂವರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯಬಹುದು. ಅದರಂತೆ ಸ್ಪಿನ್ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್​​ ಅಶ್ವಿನ್​ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.

  1. ರೋಹಿತ್ ಶರ್ಮಾ (ನಾಯಕ)
  2. ಯಶಸ್ವಿ ಜೈಸ್ವಾಲ್
  3. ಶುಭ್​ಮನ್ ಗಿಲ್
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್
  6. ಕೆಎಸ್ ಭರತ್ (ವಿಕೆಟ್ ಕೀಪರ್)
  7. ರವೀಂದ್ರ ಜಡೇಜಾ
  8. ಅಕ್ಷರ್ ಪಟೇಲ್
  9. ರವಿಚಂದ್ರನ್ ಅಶ್ವಿನ್
  10. ಜಸ್​ಪ್ರೀತ್ ಬುಮ್ರಾ (ಉಪನಾಯಕ)
  11. ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Virat Kohli: ಮೈದಾನಕ್ಕಿಳಿಯದೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!