AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Vs ENG: ಟೀಂ ಇಂಡಿಯಾಗೆ ಬ್ಯಾಡ್ ನ್ಯೂಸ್; ಜಡೇಜಾ ವಾಪಸಾತಿ ಕಷ್ಟ! ಕೊಹ್ಲಿ ಬಗ್ಗೆಯೂ ಸಸ್ಪೆನ್ಸ್

IND Vs ENG: ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳಲು ಬೆಂಗಳೂರಿನ ಎನ್​ಸಿಎ ಸೇರಿಕೊಂಡಿರುವ ಜಡೇಜಾ ಮೂರನೇ ಟೆಸ್ಟ್​ಗೂ ಗೈರಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಇವರೊಂದಿಗೆ ವಿರಾಟ್ ಕೊಹ್ಲಿ ಕೂಡ ಮೂರನೇ ಟೆಸ್ಟ್​ ಆಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

IND Vs ENG: ಟೀಂ ಇಂಡಿಯಾಗೆ ಬ್ಯಾಡ್ ನ್ಯೂಸ್; ಜಡೇಜಾ ವಾಪಸಾತಿ ಕಷ್ಟ! ಕೊಹ್ಲಿ ಬಗ್ಗೆಯೂ ಸಸ್ಪೆನ್ಸ್
ರವೀಂದ್ರ ಜಡೇಜಾ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Feb 01, 2024 | 6:11 PM

Share

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋತು ಸಂಕಷ್ಟಕ್ಕೆ ಸಿಲುಕಿರುವ ಟೀಂ ಇಂಡಿಯಾಕ್ಕೆ (India vs England) ಸ್ಟಾರ್ ಆಟಗಾರರ ಅಲಭ್ಯತೆ ಈಗ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸರಣಿ ಆರಂಭಕ್ಕೂ ಮುನ್ನ ಅನುಭವಿ ವೇಗಿ ಮೊಹಮ್ಮದ್ ಶಮಿ ಇಂಜುರಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇವರೊಂದಿಗೆ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಮೊದಲೆರಡು ಟೆಸ್ಟ್​ಗಳಿಂದ ಹಿಂದೆ ಸರಿದಿದ್ದರು. ಈ ಇಬ್ಬರ ಅಲಭ್ಯತೆ ಟೀಂ ಇಂಡಿಯಾಗೆ ಸೋಲಿನ ಭಾರವನ್ನೇ ಹೊರಿಸಿತ್ತು. ಇದು ಸಾಲದೆಂಬಂತೆ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಕೆಎಲ್ ರಾಹುಲ್ (KL Rahul) ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಎರಡನೇ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳಲು ಬೆಂಗಳೂರಿನ ಎನ್​ಸಿಎ ಸೇರಿಕೊಂಡಿರುವ ಜಡೇಜಾ ಮೂರನೇ ಟೆಸ್ಟ್​ಗೂ ಗೈರಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಇವರೊಂದಿಗೆ ವಿರಾಟ್ ಕೊಹ್ಲಿ (Virat Kohli) ಕೂಡ ಮೂರನೇ ಟೆಸ್ಟ್​ ಆಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

4 ರಿಂದ 8 ವಾರ ಬೇಕು

ಭಾರತ ಮತ್ತು ಇಂಗ್ಲೆಂಡ್​ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಹಾಗೂ ಮೂರನೇ ಟೆಸ್ಟ್ ನಡುವೆ ಸಾಕಷ್ಟು ಅಂತರವಿದೆ. ಹೀಗಾಗಿ ಮೂರನೇ ಟೆಸ್ಟ್ ವೇಳೆಗೆ ರಾಹುಲ್, ಜಡೇಜಾ, ಕೊಹ್ಲಿ ತಂಡ ಸೇರಿಕೊಳ್ಳುವ ನಿರೀಕ್ಷೆಯನ್ನು ಬಿಸಿಸಿಐ ಇಟ್ಟುಕೊಂಡಿದೆ. ಆದರೆ ಇದೀಗCricbuzz ವರದಿಯ ಪ್ರಕಾರ, ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಅವರ ಗಾಯ ಗುಣವಾಗಲು 4 ರಿಂದ 8 ವಾರಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ. ಇದರರ್ಥ, ಎರಡನೇ ಟೆಸ್ಟ್ ಜೊತೆಗೆ ಮೂರನೇ ಟೆಸ್ಟ್​ನಿಂದಲೂ ಜಡೇಜಾ ಹೊರಗುಳಿಯುವ ಸಾಧ್ಯತೆಗಳಿವೆ. ಇದರ ನಂತರ, ಫೆಬ್ರವರಿ 23 ರಿಂದ ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ವೇಳೆಗೆ ಜಡೇಜಾ ಫಿಟ್ ಆಗುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಸದ್ಯ, ಬಿಸಿಸಿಐ ನೀಡಿರುವ ಅಪ್‌ಡೇಟ್‌ನಲ್ಲಿ ರವೀಂದ್ರ ಜಡೇಜಾ ಎರಡನೇ ಟೆಸ್ಟ್‌ನಿಂದ ಮಾತ್ರ ಹೊರಗುಳಿದಿದ್ದಾರೆ ಎಂಬುದಷ್ಟೇ ಮಾಹಿತಿ. ಇದರ ಹೊರತಾಗಿ ವಿರಾಟ್ ಕೊಹ್ಲಿ ಬಗ್ಗೆ ಇನ್ನೂ ಯಾವುದೇ ಅಪ್‌ಡೇಟ್ ಬಂದಿಲ್ಲ.

ವಿರಾಟ್ ಕೊಹ್ಲಿ ಬಗ್ಗೆ ಸಸ್ಪೆನ್ಸ್

ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಅವರ ಅಲಭ್ಯತೆಯ ಬಗ್ಗೆ ಬಿಸಿಸಿಐ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಮೊದಲೆರಡು ಟೆಸ್ಟ್ ಆಡುತ್ತಿಲ್ಲ ಎಂಬುದನ್ನಷ್ಟೇ ಹೇಳಿದೆ. ಅಲ್ಲದೆ ಮೂರನೇ ಪಂದ್ಯದಲ್ಲಿ ವಿರಾಟ್ ಆಡುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಬಂದಿಲ್ಲ. ಈ ನಡುವೆ ವಿರಾಟ್ ಅವರ ತಾಯಿಗೆ ಆರೋಗ್ಯ ಸರಿ ಇಲ್ಲ ಎಂಬ ವದಂತಿಗಳು ಹರಿದಾಡಿದ್ದವು. ಆದರೆ ಈ ವದಂತಿಗಳನ್ನು ಕೊಹ್ಲಿ ಅವರ ಸಹೋದರ ವಿಕಾಸ್ ಕೊಹ್ಲಿ ಅಲ್ಲಗಳೆದಿದ್ದರು. ಸದ್ಯ ಕ್ರಿಕ್‌ಬಜ್ ಮಾಡಿರುವ ವರದಿ ಪ್ರಕಾರ ವಿರಾಟ್ ಪ್ರಸ್ತುತ ದೇಶದ ಹೊರಗಿದ್ದಾರೆ ಎಂದು ತಿಳಿದುಬಂದಿದೆ.

Virat Kohli Mother Health: ವಿರಾಟ್ ಕೊಹ್ಲಿ ತಾಯಿ ಸ್ಥಿತಿ ಗಂಭೀರ? ಸ್ಟಷ್ಟನೆ ನೀಡಿದ ವಿಕಾಸ್ ಕೊಹ್ಲಿ

ಸಂಕಷ್ಟದಲ್ಲಿ ಟೀಂ ಇಂಡಿಯಾ

ಒಟ್ಟಿನಲ್ಲಿ ಟೀಂ ಇಂಡಿಯಾ ಸದ್ಯ ಸಂಕಷ್ಟದಲ್ಲಿದೆ. ಕೆಎಲ್ ರಾಹುಲ್ ಕೂಡ ವಿಶಾಖಪಟ್ಟಣಂ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಹೀಗಿರುವಾಗ ಶುಕ್ರವಾರದಿಂದ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರರ ಬಲದ ಮೇಲೆ ಕಣಕ್ಕಿಳಿಯಲು ತಂಡ ಹೊರಟಿದೆ. ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ ಅವರಂತಹ ಯುವ ಆಟಗಾರರ ಮೇಲೆ ತಂಡದ ಜವಾಬ್ದಾರಿ ಇರುತ್ತದೆ. ಆದಾಗ್ಯೂ, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಅನುಭವವು ತಂಡಕ್ಕೆ ಉಪಯುಕ್ತವಾಗಿದೆ. ಆದರೆ ಹೈದರಾಬಾದ್ ಟೆಸ್ಟ್‌ನಲ್ಲಿ ಸೋಲಿನ ನಂತರ ತಂಡವು ವೈಜಾಗ್‌ ಟೆಸ್ಟ್​ನಲ್ಲಿ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಲೇಬೇಕಾದ ಒತ್ತಡದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Thu, 1 February 24

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ