
ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ (Lords Test) ಪಂದ್ಯದಲ್ಲಿ ಇಂಜುರಿ ನಡುವೆಯೂ ರಿಷಭ್ ಪಂತ್ (Rishabh Pant) ಅದ್ಭುತ ಪ್ರದರ್ಶನ ನೀಡಿದರು. ಟೀಂ ಇಂಡಿಯಾ 107 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಸಮಯದಲ್ಲಿ ಬ್ಯಾಟಿಂಗ್ಗೆ ಬಂದ ಪಂತ್, ಕೆಎಲ್ ರಾಹುಲ್ ಅವರೊಂದಿಗೆ ಟೀಮ್ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿ 141 ರನ್‌ಗಳ ಜೊತೆಯಾಟ ನಿರ್ಮಿಸಿದರು. ಅಲ್ಲದೆ ತಾವು ಕೂಡ ವೈಯಕ್ತಿಕವಾಗಿ 17ನೇ ಟೆಸ್ಟ್ ಅರ್ಧಶತಕವನ್ನು ಪೂರ್ಣಗೊಳಿಸಿದರು. 112 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 74 ರನ್ ಬಾರಿಸಿದ ಪಂತ್, ತಮ್ಮ ಈ ಅದ್ಭುತ ಇನ್ನಿಂಗ್ಸ್‌ನ ಆಧಾರದ ಮೇಲೆ ವೆಸ್ಟ್ ಇಂಡೀಸ್ ಲೆಜೆಂಡ್ ವಿವ್ ರಿಚರ್ಡ್ಸ್ (Viv Richards) ಅವರ ದಾಖಲೆಯನ್ನು ಮುರಿದರು.
ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ರಿಷಭ್ ಪಂತ್ ನಾಲ್ಕನೇ ಬಾರಿಗೆ 50+ ಸ್ಕೋರ್ ದಾಖಲಿಸಿದರು. ಅಲ್ಲದೆ ತಮ್ಮ ಇನ್ನಿಂಗ್ಸ್‌ನಲ್ಲಿ 2 ಸಿಕ್ಸರ್‌ಗಳನ್ನು ಬಾರಿಸಿದ ಪಂತ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವಿಷಯದಲ್ಲಿ ಅವರು ವಿವ್ ರಿಚರ್ಡ್ಸ್‌ನಂತಹ ಶ್ರೇಷ್ಠ ಆಟಗಾರನನ್ನು ಹಿಂದಿಕ್ಕಿದ್ದಾರೆ. ಇಂಗ್ಲೆಂಡ್ ವಿರುದ್ಧ ಪಂತ್ 36 ಸಿಕ್ಸರ್‌ಗಳನ್ನು ಬಾರಿಸಿದ್ದು, ಇಂಗ್ಲೆಂಡ್ ವಿರುದ್ಧ ವಿವ್ ರಿಚರ್ಡ್ಸ್ 34 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈ ಪಟ್ಟಿಯಲ್ಲಿ ಟಿಮ್ ಸೌಥಿ ಮೂರನೇ ಸ್ಥಾನದಲ್ಲಿದ್ದರೆ, ಭಾರತದ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
ವಿವ್ ರಿಚರ್ಡ್ಸ್ ಜೊತೆಗೆ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ತವರಿನ ಹೊರಗೆ ಅತಿ ಹೆಚ್ಚು ಬಾರಿ 50+ ಸ್ಕೋರ್‌ಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಧೋನಿಯ ದಾಖಲೆಯನ್ನು ಪಂತ್ ಸರಿಗಟ್ಟಿದ್ದಾರೆ. ಪಂತ್ ಪ್ರಸ್ತುತ ವಿದೇಶಿ ಪ್ರವಾಸಗಳಲ್ಲಿ 8 ಬಾರಿ 50+ ಸ್ಕೋರ್ ಬಾರಿಸಿದ್ದರೆ, ಧೋನಿ ಕೂಡ 8 ಬಾರಿ ಈ ಸಾಧನೆ ಮಾಡಿದ್ದಾರೆ.
IND vs ENG: ಗಾಯದ ನಡುವೆಯೂ ಲಾರ್ಡ್ಸ್ ಅಂಗಳಿಕ್ಕಿಳಿದು ಧೋನಿ ದಾಖಲೆ ಮುರಿದ ಪಂತ್
ಇದರ ಹೊರತಾಗಿ, ಇಂಗ್ಲೆಂಡ್ ನೆಲದಲ್ಲಿ ಸರಣಿಯಲ್ಲಿ 400 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ಮೊದಲ ಪ್ರವಾಸಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರಿಗಿಂತ ಮೊದಲು ಯಾವುದೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಈ ಸರಣಿಯಲ್ಲಿ ರಿಷಭ್ ಪಂತ್ ಇದುವರೆಗೆ ಆಡಿರುವ 3 ಪಂದ್ಯಗಳ 5 ಇನ್ನಿಂಗ್ಸ್‌ಗಳಲ್ಲಿ 416 ರನ್ ಗಳಿಸಿದ್ದಾರೆ. ಅಲ್ಲದೆ ಈ ಸರಣಿಯಲ್ಲಿ ಇಲ್ಲಿಯವರೆಗೆ ಅವರು 44 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:13 pm, Sat, 12 July 25