AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಎರಡನೇ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ..!

Rohit Sharma, ICC World Cup 2023: ಆಂಗ್ಲರ ವಿರುದ್ಧ ನಾಯಕನ ಜವಬ್ದಾರಿಯುತ ಇನ್ನಿಂಗ್ಸ್ ಆಡಿದ ರೋಹಿತ್, 101 ಎಸೆತಗಳಲ್ಲಿ 10 ಅದ್ಭುತ ಬೌಂಡರಿ ಹಾಗೂ 3 ಗಗನಚುಂಬಿ ಸಿಕ್ಸರ್ ಸಹಿತ 87 ರನ್ ಸಿಡಿಸಿ 13 ರನ್​ಗಳಿಂದ ಶತಕ ವಂಚಿತರಾದರು. ಪಂದ್ಯದ ನಂತರ ಈ ಅದ್ಭುತ ಇನ್ನಿಂಗ್ಸ್‌ಗಾಗಿ ರೋಹಿತ್ ಶರ್ಮಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ನೀಡಲಾಯಿತು.

ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಎರಡನೇ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ..!
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Oct 30, 2023 | 6:05 AM

Share

ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವಿಶ್ವಕಪ್ (ICC ODI World Cup 2023) ಪಂದ್ಯದಲ್ಲಿ ಭಾರತ ತಂಡ, ಹಾಲಿ ಚಾಂಪಿಯನ್ ಇಂಗ್ಲೆಂಡ್ (India vs England) ತಂಡವನ್ನು 100 ರನ್‌ಗಳಿಂದ ಸೋಲಿಸಿತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಪ್ರಮುಖ ಪಾತ್ರ ವಹಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ನಾಯಕ ರೋಹಿತ್ ಶರ್ಮಾ ಭರ್ಜರಿ ಆರಂಭ ನೀಡಿದರು. ಆಂಗ್ಲರ ವಿರುದ್ಧ ನಾಯಕನ ಜವಬ್ದಾರಿಯುತ ಇನ್ನಿಂಗ್ಸ್ ಆಡಿದ ರೋಹಿತ್, 101 ಎಸೆತಗಳಲ್ಲಿ 10 ಅದ್ಭುತ ಬೌಂಡರಿ ಹಾಗೂ 3 ಗಗನಚುಂಬಿ ಸಿಕ್ಸರ್ ಸಹಿತ 87 ರನ್ ಸಿಡಿಸಿ 13 ರನ್​ಗಳಿಂದ ಶತಕ ವಂಚಿತರಾದರು. ಪಂದ್ಯದ ನಂತರ ಈ ಅದ್ಭುತ ಇನ್ನಿಂಗ್ಸ್‌ಗಾಗಿ ರೋಹಿತ್ ಶರ್ಮಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ನೀಡಲಾಯಿತು.

7 ಪಂದ್ಯ ಶ್ರೇಷ್ಠ ಪ್ರಶಸ್ತಿ

ರೋಹಿತ್ ಶರ್ಮಾ ಈಗ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ಪಂದ್ಯದ ಆಟಗಾರ ಪ್ರಶಸ್ತಿಗಳನ್ನು ಗೆದ್ದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಪ್ರಸ್ತುತ ರೋಹಿತ್ ಖಾತೆಗೆ ಒಟ್ಟು 7 ಪಂದ್ಯ ಶ್ರೇಷ್ಠ ಪ್ರಶಸ್ತಿ ಸೇರಿವೆ. ಈ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಕ್ರಿಕೆಟ್ ದೇವರು ಏಕದಿನ ವಿಶ್ವಕಪ್‌ನಲ್ಲಿ 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಮೆಕ್‌ಗ್ರಾತ್ ವಿಶ್ವಕಪ್‌ನಲ್ಲಿ 6 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇಂಗ್ಲೆಂಡ್ ತಂಡವನ್ನು ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ ಭಾರತ..!

ಐಸಿಸಿ ಟೂರ್ನಿಯಲ್ಲಿ ಕೊಹ್ಲಿ ಟಾಪರ್

ಮತ್ತೊಂದೆಡೆ, ಇಂಗ್ಲೆಂಡ್ ವಿರುದ್ಧದ ಪಂದ್ಯದ ಆಟಗಾರ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಐಸಿಸಿ ಪಂದ್ಯಾವಳಿಗಳಲ್ಲಿ ಹೆಚ್ಚು ಬಾರಿ ಈ ಸಾಧನೆ ಮಾಡಿದ ಮೂರನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ಸಚಿನ್ ತೆಂಡೂಲ್ಕರ್, ಮಹೇಲಾ ಜಯವರ್ಧನೆ ಮತ್ತು ಶೇನ್ ವ್ಯಾಟ್ಸನ್ ಈ ಪ್ರಶಸ್ತಿಯನ್ನು 10 ಬಾರಿ ಸ್ವೀಕರಿಸಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಲ್ ಐಸಿಸಿ ಟೂರ್ನಿಗಳಲ್ಲಿ ಗರಿಷ್ಠ 11 ಬಾರಿ ಈ ಪ್ರಶಸ್ತಿಯನ್ನು ಪಡೆದು, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಈ ಆವೃತ್ತಿಯಲ್ಲಿ ಈ ಪ್ರಶಸ್ತಿ ಗೆದ್ದ ಭಾರತೀಯರಿವರು

ಇನ್ನು 2023ರ ವಿಶ್ವಕಪ್ ಆವೃತ್ತಿಯಲ್ಲಿ ನಡೆದಿರುವ 6 ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ಯಾರ್ಯಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿದೆ ಎಂಬುದನ್ನು ನೋಡುವುದಾದರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 97 ರನ್ ಹಾಗೂ 1 ಕ್ಯಾಚ್ ಪಡೆದಿದ್ದ ಕೆಎಲ್ ರಾಹುಲ್ ಈ ಪ್ರಶಸ್ತಿ ಪಡೆದಿದ್ದರು. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ 84 ಎಸೆತಗಳಲ್ಲಿ 131 ರನ್ ಸಿಡಿಸಿದ್ದ ನಾಯಕ ರೋಹಿತ್​ಗೆ ಈ ಪಶಸ್ತಿ ಸಿಕ್ಕಿತ್ತು. ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 19 ರನ್​ಗಳಿಗೆ 2 ವಿಕೆಟ್ ಉರುಳಿಸಿದ್ದ ಬುಮ್ರಾ ಈ ಪ್ರಶಸ್ತಿ ಗೆದ್ದಿದ್ದರು. ಬಾಂಗ್ಲಾದೇಶ ವಿರುದ್ಧ 97 ಎಸೆತಗಳಲ್ಲಿ ಅಜೇಯ 103 ರನ್ ಸಿಡಿಸಿದ್ದ ಕೊಹ್ಲಿಗೆ ಈ ಪ್ರಶಸ್ತಿ ಲಭಿಸಿದ್ದರೆ, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 54 ರನ್ ನೀಡಿ 5 ವಿಕೆಟ್ ಉರುಳಿಸಿದ್ದ ಶಮಿ ಈ ಪ್ರಶಸ್ತಿಯನ್ನು ಎತ್ತಿ ಹಿಡಿದರು. ಇದೀಗ ಇಂಗ್ಲೆಂಡ್‌ ವಿರುದ್ಧ ಸ್ಮರಣೀಯ ಇನ್ನಿಂಗ್ಸ್ ಆಡಿದ ರೋಹಿತ್​ಗೆ ಈ ಆವೃತ್ತಿಯಲ್ಲಿ ಎರಡನೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ