AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 475 ದಿನಗಳ ಬರ ನೀಗಿಸಿಕೊಂಡ ಶತಕ ವೀರ ರೋಹಿತ್ ಶರ್ಮಾ

Rohit Sharma century: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಬಿರುಗಾಳಿಯ ಶತಕ ಸಿಡಿಸಿದ್ದಾರೆ. ಕೇವಲ 76 ಎಸೆತಗಳಲ್ಲಿ ಶತಕ ಪೂರೈಸಿದ ರೋಹಿತ್ ಅವರ ಇನ್ನಿಂಗ್ಸ್​ನಲ್ಲಿ 7 ಸಿಕ್ಸರ್‌ ಮತ್ತು 9 ಬೌಂಡರಿಗಳು ಸೇರಿವೆ. ಈ ಮೂಲಕ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 338 ದಿನಗಳ ನಂತರ ಮತ್ತು ಏಕದಿನ ಪಂದ್ಯದಲ್ಲಿ 475 ದಿನಗಳ ನಂತರ ಶತಕದ ಬರ ನೀಗಿಸಿಕೊಂಡಿದ್ದಾರೆ.

IND vs ENG: 475 ದಿನಗಳ ಬರ ನೀಗಿಸಿಕೊಂಡ ಶತಕ ವೀರ ರೋಹಿತ್ ಶರ್ಮಾ
Rohit Sharma
Follow us
ಪೃಥ್ವಿಶಂಕರ
|

Updated on:Feb 09, 2025 | 9:02 PM

ಹಿಟ್​ಮ್ಯಾನ್ ಎಂದೇ ಖ್ಯಾತರಾಗಿರುವ ರೋಹಿತ್ ಶರ್ಮಾ ಅವರ ಬ್ಯಾಟ್ ಇತ್ತೀಚ್ಚಿನ ದಿನಗಳಲ್ಲಿ ಮೌನಕ್ಕೆ ಶರಣಾಗಿತ್ತು. ಹೀಗಾಗಿ ಭಾರತ ಕ್ರಿಕೆಟ್​ನಲ್ಲಿ ರೋಹಿತ್ ಯುಗಾಂತ್ಯವಾಯಿತೆಂದೇ ಹಲವರು ಅಭಿಪ್ರಾಯಟ್ಟಿದ್ದರು. ಆದರೆ ಇಂಗ್ಲೆಂಡ್‌ ವಿರುದ್ಧ ಕಟಕ್‌ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ಹಳೆಯ ಅವತಾರವನ್ನು ತೋರಿಸಿದ್ದಾರೆ. ಆಂಗ್ಲರ ವಿರುದ್ಧ ಉಗ್ರರೂಪ ತಾಳಿರುವ ರೋಹಿತ್ ಶರ್ಮಾ ಕೇವಲ 76 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಿಜೀವನದ 32 ನೇ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 338 ದಿನಗಳ ನಂತರ ಮತ್ತು ಏಕದಿನ ಪಂದ್ಯದಲ್ಲಿ 475 ದಿನಗಳ ನಂತರ ತಮ್ಮ ಶತಕದ ಬರವನ್ನು ನೀಗಿಸಿಕೊಂಡಿದ್ದಾರೆ.

ಮೇಲೆ ಹೇಳಿದಂತೆ ರೋಹಿತ್ ಶರ್ಮಾ ಅವರ ಕಳಪೆ ಬ್ಯಾಟಿಂಗ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿದ್ದವು.ಆದಾಗ್ಯೂ ರೋಹಿತ್​ಗೆ ಒಂದೇ ಒಂದು ಗಮನಾರ್ಹ ಇನ್ನಿಂಗ್ಸ್ ಆಡಲು ಸಾಧ್ಯವಾಗಿರಲಿಲ್ಲ. ಆದರೆ ಕಟಕ್‌ನಲ್ಲಿ ಬೇರೆಯದೇ ಶೈಲಿಯಲ್ಲಿ ಕಾಣಿಸಿಕೊಂಡ ರೋಹಿತ್ ಈ ಪಂದ್ಯದಲ್ಲಿ ಮೊದಲು 3 ಡಾಟ್ ಬಾಲ್‌ಗಳನ್ನು ಆಡಿದ ನಂತರ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿದರು. ಮುಂದಿನ ಎಸೆತದಲ್ಲೇ ಅವರು ಸಿಕ್ಸರ್ ಬಾರಿಸಿದರು. ಅದಾದ ನಂತರ ರೋಹಿತ್ ಶತಕ ಬಾರಿಸುವವರೆಗೂ ಹಿಂತಿರುಗಿ ನೋಡಲಿಲ್ಲ. ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರಿಸಿದ ರೋಹಿತ್ 75 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 9 ಬೌಂಡರಿಗಳ ಸಹಾಯದಿಂದ 96 ರನ್ ಗಳಿಸಿದರು. ಇದಾದ ನಂತರ, 26 ನೇ ಓವರ್‌ನಲ್ಲಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು.

ಮೂರನೇ ಸ್ಥಾನಕ್ಕೇರಿದ ರೋಹಿತ್

ಈ ಶತಕದ ಇನ್ನಿಂಗ್ಸ್​ನೊಂದಿಗೆ ರೋಹಿತ್ ತಮ್ಮ ಏಕದಿನ ವೃತ್ತಿಜೀವನದಲ್ಲಿ ಆಡಿರುವ 266 ಪಂದ್ಯಗಳಲ್ಲಿ 48 ಸರಾಸರಿಯಲ್ಲಿ 10868 ರನ್ ಪೂರ್ಣಗೊಳಿಸಿದ್ದಾರೆ. ಇದಲ್ಲದೆ ರೋಹಿತ್ ತಮ್ಮ ಶತಕದೊಂದಿಗೆ ಸ್ಟೀವ್ ಸ್ಮಿತ್‌ರನ್ನು ಹಿಂದಿಕ್ಕಿದ್ದು, ಇದೀಗ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಸಕ್ರಿಯ ಕ್ರಿಕೆಟಿಗರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ರೋಹಿತ್ 526 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಗಳಿಸಿದ್ದರೆ, ಸ್ಮಿತ್ 410 ಇನ್ನಿಂಗ್ಸ್‌ಗಳಲ್ಲಿ 48 ಶತಕಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 81 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಜೋ ರೂಟ್ 52 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Sun, 9 February 25

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ