AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಫಿಟ್ ಇದ್ದರೂ ಶ್ರೇಯಸ್ ಅಯ್ಯರ್ ತಂಡದಿಂದ ಕಿಕ್ ಔಟ್..!

Shreyas Iyer: ಮೊದಲ ಎರಡು ಟೆಸ್ಟ್‌ಗಳಲ್ಲಿ ಕಳಪೆ ಪ್ರದರ್ಶನದಿಂದಾಗಿ ಅಯ್ಯರ್ ಫಿಟ್ ಇದ್ದರೂ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದಕ್ಕೆ ಅಂಕಿ ಅಂಶಗಳೇ ಸಾಕ್ಷಿಯಾಗಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಎರಡು ಟೆಸ್ಟ್​ಗಳಲ್ಲಿ ಅಯ್ಯರ್ ಬ್ಯಾಟಿಂಗ್‌ನಲ್ಲಿ ನಿರಾಸೆ ಮೂಡಿಸಿದರು.

IND vs ENG: ಫಿಟ್ ಇದ್ದರೂ ಶ್ರೇಯಸ್ ಅಯ್ಯರ್ ತಂಡದಿಂದ ಕಿಕ್ ಔಟ್..!
ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on: Feb 10, 2024 | 5:51 PM

Share

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಟೀಂ ಇಂಡಿಯಾವನ್ನು (India vs England) ಶನಿವಾರ ಪ್ರಕಟಿಸಲಾಗಿದೆ. ಈ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಮೊದಲ ಎರಡು ಪಂದ್ಯಗಳನ್ನು ಆಡಿದ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ಹೊರಗಿಟ್ಟಿರುವುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ವಾಸ್ತವವಾಗಿ ಎರಡನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಅಯ್ಯರ್, ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಇಡೀ ಟೆಸ್ಟ್ ಸರಣಿಯಿಂದ ಹೊರಬೀಳುವ ಸಾಧ್ಯತೆಗಳಿವೆ ಎಂದು ವರದಿಯಾಗಿತ್ತು. ಅದರಂತೆ ಈಗ ಪ್ರಕಟವಾಗಿರುವ ತಂಡದಿಂದ ಅಯ್ಯರ್ ಅವರನ್ನು ಕೈಬಿಡಲಾಗಿದೆ. ಈ ನಡುವೆ ಇಎಸ್‌ಪಿಎನ್ ಕ್ರಿಕ್‌ಇನ್‌ಫೋ ವರದಿಯೊಂದನ್ನು ಪ್ರಕಟಿಸಿದ್ದು, ಅದರಲ್ಲಿ ಅಯ್ಯರ್ ಸಂಪೂರ್ಣ ಫಿಟ್ ಆಗಿದ್ದಾರೆ. ಆದರೆ ಇದರ ಹೊರತಾಗಿಯೂ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಅಯ್ಯರ್​ರನ್ನು ಹೊರಹಾಕಲು ಕಾರಣವೇನು?

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇಡೀ ಪ್ರವಾಸದಲ್ಲಿ ಅಯ್ಯರ್ ಪ್ರದರ್ಶನ ಸಪ್ಪೆಯಾಗಿತ್ತು. ಅದರಲ್ಲೂ ಅಯ್ಯರ್ ಅವರ ಶಾಟ್ ಸೆಲೆಕ್ಷನ್ ಟೀಮ್ ಮ್ಯಾನೇಜ್​ಮೆಂಟ್ ಅಸಮಾಧಾನಗೊಳ್ಳುವಂತೆ ಮಾಡಿದೆ ಎಂಬುದು ವರದಿ. ಹೀಗಾಗಿ ಆಫ್ರಿಕಾ ಪ್ರವಾಸದ ನಂತರ ಅಯ್ಯರ್​ ಅವರನ್ನು ತಂಡದಿಂದ ಹೊರಗಿಡಲಾಗಿತ್ತು. ಈ ನಡುವೆ ಅಯ್ಯರ್​ಗೆ ರಣಜಿ ಆಡುವಂತೆ ಸೂಚನೆ ಕೂಡ ನೀಡಲಾಗಿತ್ತು. ಅದರಂತೆ ಅಯ್ಯರ್ ರಣಜಿ ಆಡಿದರೂ ಅವರ ಶಾಟ್ ಆಯ್ಕೆಯಲ್ಲಿ ಸುಧಾರಣೆ ಕಂಡುಬಂದಿರಲಿಲ್ಲ.

IND vs ENG: ಕಳೆದ 11 ಇನ್ನಿಂಗ್ಸ್​ಗಳಲ್ಲಿ ಫ್ಲಾಪ್ ಶೋ; ಅಯ್ಯರ್ ಬದಲು ಸರ್ಫರಾಜ್​ಗೆ ಸಿಗುತ್ತಾ ಅವಕಾಶ?

ಆನಂತರ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಆಯ್ಕೆಯಾಗಿದ್ದ ಅಯ್ಯರ್, ಬೌನ್ಸರ್ ಎಸೆತಗಳನ್ನು ಎದುರಿಸುವಲ್ಲಿ ಸಮಸ್ಯೆ ಎದುರಿಸುತ್ತಿರುವುದು ಕಂಡು ಬಂತು. ಇದು ಮಾತ್ರವಲ್ಲದೆ, ಅವರು ಸ್ಪಿನ್ ದಾಳಿಯ ಎದುರು ರನ್ ಕಲೆಹಾಕಲು ಹರಸಾಹಸ ಪಡಬೇಕಾಯ್ತು. ಮೊದಲ ಎರಡು ಟೆಸ್ಟ್‌ಗಳಲ್ಲಿ ಕಳಪೆ ಪ್ರದರ್ಶನದಿಂದಾಗಿ ಅಯ್ಯರ್ ಫಿಟ್ ಇದ್ದರೂ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದಕ್ಕೆ ಅಂಕಿ ಅಂಶಗಳೇ ಸಾಕ್ಷಿಯಾಗಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಎರಡು ಟೆಸ್ಟ್​ಗಳಲ್ಲಿ ಅಯ್ಯರ್ ಬ್ಯಾಟಿಂಗ್‌ನಲ್ಲಿ ನಿರಾಸೆ ಮೂಡಿಸಿದರು. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಅವರು 35, 13, 27 ಮತ್ತು 29 ರನ್ ಗಳಿಸಿದರು. ಅಯ್ಯರ್ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 104 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಅಯ್ಯರ್ ಬದಲು ಯಾರಿಗೆ ಅವಕಾಶ?

ವಿರಾಟ್ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಮೊದಲ ಟೆಸ್ಟ್‌ಗೆ ತಂಡದಲ್ಲಿ ಅವಕಾಶ ಪಡೆದಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ ತಂಡಕ್ಕೆ ಪಾದಾರ್ಪಣೆ ಮಾಡಿದರು. ಆದರೆ ಎರಡನೇ ಟೆಸ್ಟ್‌ಗೆ ಮೊದಲು ಕೆಎಲ್ ರಾಹುಲ್ ಬದಲಿಗೆ ಸರ್ಫರಾಜ್ ಖಾನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದಾಗ್ಯೂ, ಅವರು ಇನ್ನೂ ತಮ್ಮ ಚೊಚ್ಚಲ ಪ್ರವೇಶಕ್ಕಾಗಿ ಕಾಯುತ್ತಿದ್ದಾರೆ. ಇದೀಗ ಈ ಇಬ್ಬರೂ ಆಟಗಾರರು ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೂ ತಂಡದ ಭಾಗವಾಗಲಿದ್ದಾರೆ. ಹೀಗಾಗಿ ಅಯ್ಯರ್ ಬದಲು ಸರ್ಫರಾಜ್​ ಖಾನ್​ಗೆ ಭಾರತ ಟೆಸ್ಟ್ ತಂಡದ ಕದ ತೆರೆಯುವ ಕಾಲ ಸನಿಹವಾಗಿದೆ.

ಕೊನೆಯ 3 ಟೆಸ್ಟ್‌ಗಳಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ