AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೆಸ್ಟ್‌ನಲ್ಲಿ ಕೊಹ್ಲಿ ಸ್ಥಾನವನ್ನು ತುಂಬುವವರು ಯಾರು? ಉತ್ತರಿಸಿದ ರಿಷಬ್ ಪಂತ್

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಶುಭ್ಮನ್ ಗಿಲ್ ನಾಯಕತ್ವ ವಹಿಸಿದ್ದಾರೆ. ಅವರು 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ರಿಷಭ್ ಪಂತ್ ಹೇಳಿದ್ದು, ತಾನು 5ನೇ ಕ್ರಮಾಂಕದಲ್ಲಿ ಆಡುವುದಾಗಿ ಖಚಿತಪಡಿಸಿದ್ದಾರೆ. 3ನೇ ಕ್ರಮಾಂಕಕ್ಕೆ ಸಾಯಿ ಸುದರ್ಶನ್ ಅಥವಾ ಕರುಣ್ ನಾಯರ್ ಆಯ್ಕೆಯಾಗುವ ಸಾಧ್ಯತೆ ಇದೆ. ಈ ಬದಲಾವಣೆಗಳು ಭಾರತದ ಟೆಸ್ಟ್ ತಂಡದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಕುತೂಹಲಕಾರಿ.

IND vs ENG: ಟೆಸ್ಟ್‌ನಲ್ಲಿ ಕೊಹ್ಲಿ ಸ್ಥಾನವನ್ನು ತುಂಬುವವರು ಯಾರು? ಉತ್ತರಿಸಿದ ರಿಷಬ್ ಪಂತ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 18, 2025 | 7:46 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೊದಲ ಟೆಸ್ಟ್ ಪಂದ್ಯ ಲೀಡ್ಸ್‌ನಲ್ಲಿ ಆರಂಭವಾಗಲು ಕೆಲವೇ ಗಂಟೆಗಳು ಉಳಿದಿವೆ. 5 ಟೆಸ್ಟ್ ಪಂದ್ಯಗಳ ಸರಣಿಯು ಜೂನ್ 20, ಶುಕ್ರವಾರದಂದು ಹೆಡಿಂಗ್ಲೆ ಮೈದಾನದಲ್ಲಿ ಆರಂಭವಾಗಲಿದೆ. ಈ ಬಾರಿ ಟೀಂ ಇಂಡಿಯಾ ಹೊಸ ನಾಯಕ ಶುಭ್​ಮನ್ ಗಿಲ್ (Shubman Gill) ನೇತೃತ್ವದಲ್ಲಿ ಆಡುತ್ತಿರುವುದರಿಂದ ಹೆಚ್ಚಿನವರ ಕಣ್ಣುಗಳು ಈ ಸರಣಿಯ ಮೇಲೆ ಇವೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಹೇಗೆ ಪ್ರದರ್ಶನ ನೀಡುತ್ತದೆ? ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ನಾಲ್ಕನೇ ಕ್ರಮಾಂಕದಲ್ಲಿ ಯಾರು ಬ್ಯಾಟಿಂಗ್ ಮಾಡಲು ಬರುತ್ತಾರೆ ಎಂಬ ಪ್ರಶ್ನೆಯನ್ನೂ ಎಲ್ಲರೂ ಕೇಳುತ್ತಿದ್ದಾರೆ?. ಇದೀಗ ಈ ಪ್ರಶ್ನೆಗೆ ತಂಡದ ಉಪ ನಾಯಕ ರಿಷಬ್ ಪಂತ್ (Rishabh Pant) ಉತ್ತರಿಸಿದ್ದು, ನಾಯಕ ಶುಭ್​ಮನ್ ಗಿಲ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ಶುಕ್ರವಾರ ಹೆಡಿಂಗ್ಲಿಯಲ್ಲಿ ಪ್ರಾರಂಭವಾಗುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಕೇವಲ ಎರಡು ದಿನಗಳ ಮೊದಲು ಟೀಂ ಇಂಡಿಯಾ ಈ ಮೈದಾನದಲ್ಲಿ ಅಭ್ಯಾಸ ಆರಂಭಿಸಿದೆ. ಅಭ್ಯಾಸದ ನಂತರ, ತಂಡದ ಉಪನಾಯಕ ರಿಷಭ್ ಪಂತ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳಲಾಯಿತು. ಅದರಲ್ಲಿ ಒಂದು, ವಿರಾಟ್ ಕೊಹ್ಲಿ ಅವರ ಸ್ಥಾನದಲ್ಲಿ ಅಂದರೆ 4 ನೇ ಕ್ರಮಾಂಕದಲ್ಲಿ ಯಾರು ಬ್ಯಾಟಿಂಗ್‌ ಮಾಡಲಿದ್ದಾರೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು?.

ಕೊಹ್ಲಿ ಸ್ಥಾನದಲ್ಲಿ ಗಿಲ್ ಕಣಕ್ಕೆ

ಪತ್ರಕರ್ತರು ಕೇಳಿದ ಪ್ರಶ್ನೆಗೆ ಮುಕ್ತವಾಗಿ ಉತ್ತರಿಸಿದ ರಿಷಬ್ ಪಂತ್, ಶುಭ್​ಮನ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಮತ್ತು ನಾನು ಐದನೇ ಕ್ರಮಾಂಕದಲ್ಲಿ ಬರುತ್ತೇನೆ ಎಂದಿದ್ದಾರೆ. ಟೀಂ ಇಂಡಿಯಾ ಪರ ಆರಂಭಿಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಗಿಲ್, ಕಳೆದ ಎರಡು ವರ್ಷಗಳಿಂದ 3 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಇದೀಗ ನಾಯಕತ್ವವಹಿಸಿಕೊಂಡ ತಕ್ಷಣ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಿಕೊಂಡಿದ್ದಾರೆ. ಇದು ಮಾತ್ರವಲ್ಲದೆ, ಪಂತ್ ಅವರ ಸ್ಥಾನವೂ ಬದಲಾಗಿದ್ದು, ಇದಕ್ಕೂ ಮೊದಲು ಪಂತ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು.

IND vs ENG: ನಾಚಿಕೆಗೇಡಿನ ಸಂಗತಿ; ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಬಗ್ಗೆ ಬೆನ್ ಸ್ಟೋಕ್ಸ್ ಮಾತು

ಮೂರನೇ ಕ್ರಮಾಂಕದಲ್ಲಿ ಯಾರು?

ಆದಾಗ್ಯೂ, ಗಿಲ್ ಬದಲಿಗೆ ಯಾರನ್ನು 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗುತ್ತದೆ ಎಂಬುದನ್ನು ಪಂತ್ ಬಹಿರಂಗಪಡಿಸಲಿಲ್ಲ. ಈ ಸ್ಥಾನದಲ್ಲಿ ಯಾರನ್ನು ಕಳುಹಿಸಲಾಗುತ್ತದೆ ಎಂಬುದರ ಕುರಿತು ತಂಡದಲ್ಲಿ ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಪಂತ್ ಹೇಳಿದರು. ಈ ಸ್ಥಾನಕ್ಕೆ ಇಬ್ಬರು ಆಟಗಾರರ ಹೆಸರುಗಳು ವಿಶೇಷವಾಗಿ ಕೇಳಿಬರುತ್ತಿವೆ – ಸಾಯಿ ಸುದರ್ಶನ್ ಮತ್ತು ಕರುಣ್ ನಾಯರ್. ಇದರಲ್ಲಿ, ಎಡಗೈ ಯುವ ಬ್ಯಾಟ್ಸ್‌ಮನ್ ಸುದರ್ಶನ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಏಕೆಂದರೆ ಸುದರ್ಶನ್ ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅನುಭವ ಹೊಂದಿದ್ದಾರೆ. ಕರುಣ್ ನಾಯರ್ ಆಡಿದರೆ, ಅವರನ್ನು ಆರನೇ ಕ್ರಮಾಂಕದಲ್ಲಿ ಕಳುಹಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ