IND vs ENG: ಟಾಸ್ ಗೆದ್ದ ಭಾರತ; ಮೊದಲ ಪಂದ್ಯದಲ್ಲಿ ಶಮಿಗಿಲ್ಲ ಸ್ಥಾನ..!
IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಮೊಹಮ್ಮದ್ ಶಮಿ ಅವರನ್ನು ತಂಡದಿಂದ ಹೊರಗಿಡಲಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಸರಣಿ ಇಂದಿನಿಂದ ಪ್ರಾರಂಭವಾಗಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಕಳೆದ ವರ್ಷ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. ಹೀಗಾಗಿ ಅದೇ ಪ್ರದರ್ಶನವನ್ನು ಈ ವರ್ಷವೂ ಮುಂದುವರೆಸಲು ಯುವ ಪಡೆ ಎದುರು ನೋಡುತ್ತಿದೆ. ಇತ್ತ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಭಾರತಕ್ಕೆ ಬಂದಿರುವ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ಕೂಡ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ. ಇನ್ನು ಮೊದಲ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಮೊದಲ ಪಂದ್ಯದಿಂದ ಶಮಿ ಔಟ್
ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಕೋಲ್ಕತ್ತಾದಲ್ಲಿ ರಾತ್ರಿ 8 ಗಂಟೆಯ ನಂತರ ಇಬ್ಬನಿ ಬೀಳುವ ಕಾರಣದಿಂದ ಸೂರ್ಯ ಈ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ. ಇದರ ಜೊತೆಗೆ ತಂಡದ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಅಚ್ಚರಿಯ ಸಂಗತಿಯೆಂದರೆ ಬರೋಬ್ಬರಿ ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಭರವಸೆಯಲ್ಲಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಮೊದಲ ಪಂದ್ಯದಲ್ಲಿ ಅವಕಾಶ ನೀಡಲಾಗಿಲ್ಲ. ಶಮಿ ಫಿಟ್ ಆಗಿರುವಾಗ ಅವರನ್ನು ಏಕೆ ತಂಡದಿಂದ ಹೊರಗಿಡಲಾಗಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಶಮಿ ಹೊರತಾಗಿ ಜುರೆಲ್, ವಾಷಿಂಗ್ಟನ್ ಸುಂದರ್ ಮತ್ತು ಹರ್ಷಿತ್ ರಾಣಾ ಕೂಡ ಆಡುವ ಹನ್ನೊಂದರ ಬಳಗದಿಂದ ಹೊರಗುಳಿದಿದ್ದಾರೆ.
🚨 Toss News from the Eden Gardens 🚨#TeamIndia have elected to bowl against England in the T20I series opener.
Follow The Match ▶️ https://t.co/4jwTIC5zzs#INDvENG | @IDFCFIRSTBank pic.twitter.com/s8VPSM3xfT
— BCCI (@BCCI) January 22, 2025
ಉಭಯ ತಂಡಗಳ ಪ್ಲೇಯಿಂಗ್-11
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
1st T20I. India XI: S Samson (wk), A Sharma, T Varma, S Yadav(c), H Pandya, R Singh, NK Reddy, A Patel, A Singh, V Chakravarthy, R Bishnoi. https://t.co/4jwTIC5zzs #INDvENG @IDFCFIRSTBank
— BCCI (@BCCI) January 22, 2025
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:47 pm, Wed, 22 January 25