IND vs ENG: ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಅನುಭವಿ ಬೌಲರ್​ಗೆ ತಂಡದಲ್ಲಿ ಸ್ಥಾನ

IND vs ENG: 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಮುಂದಿನ ತಿಂಗಳು ಸೀಮಿತ ಓವರ್‌ಗಳ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ.

IND vs ENG: ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಅನುಭವಿ ಬೌಲರ್​ಗೆ ತಂಡದಲ್ಲಿ ಸ್ಥಾನ
Follow us
TV9 Web
| Updated By: ಪೃಥ್ವಿಶಂಕರ

Updated on:Aug 19, 2022 | 9:16 PM

ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು (Indian women’s cricket team) ಪ್ರಕಟಿಸಲಾಗಿದೆ. 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ (Commonwealth Games 2022) ಬೆಳ್ಳಿ ಪದಕ ಗೆದ್ದಿರುವ ಹರ್ಮನ್‌ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಭಾರತ ತಂಡ ಮುಂದಿನ ತಿಂಗಳು ಸೀಮಿತ ಓವರ್‌ಗಳ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಗಾಗಿಯೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಆಗಸ್ಟ್ 19 ಶುಕ್ರವಾರದಂದು T20 ಮತ್ತು ODI ತಂಡಗಳನ್ನು ಪ್ರಕಟಿಸಿದೆ. ಈ ತಂಡದ ಆಯ್ಕೆಯ ಪ್ರಮುಖ ಅಂಶವೆಂದರೆ ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ತಂಡಕ್ಕೆ ಮರಳಿರುವುದು. ಅದೇ ಸಮಯದಲ್ಲಿ, ಕಾಮನ್​ವೆಲ್ತ್​ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ಯುವ ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ ಅವರನ್ನು T20 ತಂಡದಿಂ ಕೈಬಿಡಲಾಗಿದೆ.

ಮೂರು ಪಂದ್ಯಗಳ ಟಿ20ಐ ಸರಣಿಗೆ 17 ಸದಸ್ಯರ ತಂಡವನ್ನು ಹಿರಿಯ ಮಹಿಳಾ ಆಯ್ಕೆ ಸಮಿತಿ ಪ್ರಕಟಿಸಿದೆ. ಅದೇ ಸಮಯದಲ್ಲಿ, ಮೂರು ಪಂದ್ಯಗಳ ಏಕದಿನ ಸರಣಿಗೆ 18 ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ODI ಮತ್ತು T20 ತಂಡಗಳಲ್ಲಿ ಕೆಲವು ಆಟಗಾರರನ್ನು ಹೊರತುಪಡಿಸಿ, ಹೆಚ್ಚಿನ ಹೆಸರುಗಳು ನಿರೀಕ್ಷೆಯಂತೆಯೇ ಇವೆ. ಶ್ರೀಲಂಕಾ ಪ್ರವಾಸದ ನಂತರ ಸಿಡಬ್ಲ್ಯೂಜಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ರೇಣುಕಾ ಠಾಕೂರ್ ಮತ್ತು ಮೇಘನಾ ಸಿಂಗ್ ಅವರು ಎರಡೂ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಅದೇ ಸಮಯದಲ್ಲಿ, ದಿ ಹಂಡ್ರೆಡ್ ಟೂರ್ನಿ ಸಮಯದಲ್ಲಿ ಗಾಯಗೊಂಡಿದ್ದ ಬ್ಯಾಟ್ಸ್‌ಮನ್ ಜೆಮಿಮಾ ರೋಡ್ರಿಗಸ್ ಕೂಡ ಎರಡೂ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.

ಯಾಷ್ಟಿಕಾ ಔಟ್, ರಿಚಾ ಇನ್

ನಾವು T20 ತಂಡದ ಬಗ್ಗೆ ಮಾತನಾಡಿದರೆ, CWG ತಂಡಕ್ಕೂ ಈ ತಂಡಕ್ಕೂ ಸಣ್ಣ ಬದಲಾವಣೆಗಳಿವೆ. ಇದರಲ್ಲಿ ಪ್ರಮುಖವಾದದ್ದು ಯಾಸ್ತಿಕಾ ಭಾಟಿಯಾಗೆ ಬ್ರೇಕ್. ಯುವ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಸಿಡಬ್ಲ್ಯೂಜಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಅವಕಾಶ ಪಡೆದರು. ಎರಡೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಾವಳಿಯ ಮೊದಲ ಮತ್ತು ಅಂತಿಮ ಪಂದ್ಯಗಳಾಗಿವೆ. ಕೇವಲ ಎರಡು ಪಂದ್ಯಗಳಲ್ಲಿನ ಪ್ರದರ್ಶನದ ಆಧಾರದಲ್ಲಿ ಅವರನ್ನು ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಫೈನಲ್‌ನಲ್ಲಿ ಅವರನ್ನು ಕೊನೆಯ ಕ್ಷಣದಲ್ಲಿ ಕಳುಹಿಸಲಾಯಿತು. ಆದಾಗ್ಯೂ, ಅವರ ಬದಲಿಗೆ ಮತ್ತೊಬ್ಬ ಯುವ ವಿಕೆಟ್‌ಕೀಪರ್ ರಿಚಾ ಘೋಷ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರನ್ನು ಸಿಡಬ್ಲ್ಯೂಜಿಗೆ ಆಯ್ಕೆ ಮಾಡದೆ ಆಯ್ಕೆಗಾರರು ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದ್ದರು.

ಕಿರಣ್ ನವಗಿರೆಗೆ ಟಿ20 ತಂಡದಲ್ಲಿಯೇ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ. ಮಹಾರಾಷ್ಟ್ರದ ನವಗಿರೆ ನಾಗಾಲ್ಯಾಂಡ್‌ ಪರ ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಅದೇ ವರ್ಷ ಐಪಿಎಲ್ ವೇಳೆ ನಡೆದ ಮಹಿಳಾ ಟಿ20 ಚಾಲೆಂಜ್​ನಲ್ಲೂ ಅಬ್ಬರದ ಅರ್ಧಶತಕ ಬಾರಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದರು. ಇವರಲ್ಲದೆ ಆಲ್ ರೌಂಡರ್ ಡಿ ಹೇಮಲತಾ ಕೂಡ ಟಿ20 ತಂಡಕ್ಕೆ ಮರಳಿದ್ದಾರೆ.

ಜೂಲನ್ ಗೋಸ್ವಾಮಿ ವಾಪಸ್

ಅತ್ಯಂತ ಆಘಾತಕಾರಿ ಆಯ್ಕೆಯೆಂದರೆ ದೇಶದ ಅತ್ಯಂತ ಯಶಸ್ವಿ ಬೌಲರ್ ಜೂಲನ್ ಗೋಸ್ವಾಮಿ. ಈ ವರ್ಷದ ಏಕದಿನ ವಿಶ್ವಕಪ್ ನಂತರ ಅವರ ವೃತ್ತಿಜೀವನ ಮತ್ತು ಮಾಜಿ ನಾಯಕಿ ಮಿಥಾಲಿ ರಾಜ್ ಅವರ ವೃತ್ತಿಜೀವನ ಮುಗಿದಿದೆ ಎಂದು ಊಹಿಸಲಾಗಿತ್ತು. ಮಿಥಾಲಿ ಕೂಡ ನಿರೀಕ್ಷೆಯಾಂತೆ ನಿವೃತ್ತಿಯಾಗಿದ್ದರು. ಹೀಗಾಗಿ ಜೂಲನ್ ಕೂಡ ತಂಡಕ್ಕೆ ಆಯ್ಕೆಯಾಗುವುದಿಲ್ಲ ಎಂಬ ಮಾತು ಆರಂಭವಾಗಿತ್ತು. ಇದನ್ನು ಶ್ರೀಲಂಕಾ ಪ್ರವಾಸದಲ್ಲೂ ಸಾಭೀತುಪಡಿಸಲಾಗಿತ್ತು. ಆದಾಗ್ಯೂ, ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದ್ದು, ಭಾರತೀಯ ಅಭಿಮಾನಿಗಳು ಮತ್ತೊಮ್ಮೆ ತಮ್ಮ ಬೌಲಿಂಗ್‌ನಿಂದ ಬೆರಗುಗೊಳಿಸುವುದನ್ನು ನೋಡಲು ಸಾಧ್ಯವಾಗುತ್ತದೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ 6 ಪಂದ್ಯಗಳು ನಡೆಯಲಿವೆ. ಸೆಪ್ಟೆಂಬರ್ 10 ರಂದು ಟಿ20 ಸರಣಿಯೊಂದಿಗೆ ಸರಣಿ ಆರಂಭವಾಗಲಿದೆ. ಅದೇ ಸಮಯದಲ್ಲಿ, ಸೆಪ್ಟೆಂಬರ್ 24 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಮೂರನೇ ಏಕದಿನ ಪಂದ್ಯದೊಂದಿಗೆ ಪ್ರವಾಸವು ಕೊನೆಗೊಳ್ಳಲಿದೆ.

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ

T20I ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಜೆಮಿಮಾ ರೋಡ್ರಿಗಸ್, ಸ್ನೇಹ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ರಾಧಾ ಯಾದವ್, ಶಬಿನೇನಿ ಮೇಘನಾ, ತಾನಿಯಾ ಭಾಟಿಯಾ, ರಿಚಾ ಘೋಷ್, ರಾಜೇಶ್ವರಿ ಗಾಯಕ್ವಾಡ್, ಡಿ ಹೇಮಲತಾ, ಸಿಮ್ರಾನ್ ದಿಲ್ ಬಹದ್ದೂರ್, ಕಿರಣ್ ನವಗಿರೆ

ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಜೆಮಿಮಾ ರಾಡ್ರಿಗಸ್, ಸ್ನೇಹ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ಶಬ್ಬಿನೇನಿ ಮೇಘನಾ, ತಾನಿಯಾ ಭಾಟಿಯಾ, ಯಾಸ್ತಿಕಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಡಿ ಹೇಮಲತಾ, ಸಿಮ್ರಾನ್ ದಿಲ್ ಬಹದ್ದೂರ್, ಜೂಲನ್ ಗೋಸ್ವಾಮಿ, ಹರ್ಲೀನ್ ಡಿಯೋಲ್.

Published On - 8:45 pm, Fri, 19 August 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ