AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 6 ಫೋರ್​ಗಳಿಂದ ಸೋತ ಟೀಮ್ ಇಂಡಿಯಾ

India vs England 3rd Test: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 193 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 170 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಂಗ್ಲರ ಪಡೆ 22 ರನ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

IND vs ENG: 6 ಫೋರ್​ಗಳಿಂದ ಸೋತ ಟೀಮ್ ಇಂಡಿಯಾ
Ind Vs Eng
ಝಾಹಿರ್ ಯೂಸುಫ್
|

Updated on: Jul 15, 2025 | 7:32 AM

Share

ಲಾರ್ಡ್ಸ್​ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಗೆಲ್ಲಬಹುದಾಗಿದ್ದ ಪಂದ್ಯವನ್ನು ಭಾರತ ತಂಡ ಕೇವಲ 22 ರನ್​ಗಳಿಂದ ಕೈ ಚೆಲ್ಲಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 387 ರನ್​ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೂಡ 387 ರನ್​ಗಳಿಸಿ ಆಲೌಟ್ ಆಗಿತ್ತು.

ಯಾವುದೇ ಮುನ್ನಡೆಯಿಲ್ಲದೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವನ್ನು 192 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಅದರಂತೆ 193 ರನ್​ಗಳ ಸುಲಭ ಗುರಿ ಪಡೆದಿದ್ದ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್​ ಕಲೆಹಾಕಿದ್ದರು. ಆದರೆ 5ನೇ ದಿನದಾಟದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ 170 ರನ್​​ಗಳಿಗೆ ಆಲೌಟ್ ಆಗಿದ್ದಾರೆ.

ಈ ಮೂಲಕ ಆತಿಥೇಯ ಇಂಗ್ಲೆಂಡ್ ತಂಡವು 22 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

6 ಫೋರ್​ಗಳಿಂದ ಸೋತ ಟೀಮ್ ಇಂಡಿಯಾ:

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಹಲವು ಕಾರಣಗಳಿವೆ. ಅವುಗಳಲ್ಲೊಂದು 6 ಫೋರ್​ಗಳು. ಈ ಆರು ಫೋರ್​ಗಳು ಮೂಡಿಬಂದಿರುವುದು ಬೈಸ್​ ಆಗಿ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಭಾರತೀಯ ಬೌಲರ್​ಗಳು ದ್ವಿತೀಯ ಇನಿಂಗ್ಸ್​ನಲ್ಲಿ ಅಗಲವಾದ ಎಸೆತಗಳ ಮೂಲಕ 6 ಬೈಸ್​ ಫೋರ್​ಗಳನ್ನು ನೀಡಿದ್ದರು.

ದ್ವಿತೀಯ ಇನಿಂಗ್ಸ್​ನ 2ನೇ ಓವರ್​ನ ಮೊದಲ ಎಸೆತದಲ್ಲಿ ಮೊಹಮ್ಮದ್ ಸಿರಾಜ್ ಮೊದಲ ಬೈಸ್ ಫೋರ್​ ನೀಡಿದ್ದರು. ಇನ್ನು 12ನೇ ಓವರ್​ನ 5ನೇ ಎಸೆತವನ್ನು ಹಿಡಿಯುವಲ್ಲಿ ವಿಕೆಟ್ ಕೀಪರ್ ಧ್ರುವ್ ಜುರೇಲ್ ವಿಫಲರಾದರು. ಇದರಿಂದ ಕೂಡ ಇಂಗ್ಲೆಂಡ್ ತಂಡಕ್ಕೆ 4 ರನ್​ಗಳು ಲಭಿಸಿತು.

ಹಾಗೆಯೇ ಆಕಾಶ್ ದೀಪ್ ಎಸೆದ 24ನೇ ಓವರ್​ನ ಕೊನೆಯ ಎಸೆತವು ಬೈಸ್ ಆಗಿ ಬೌಂಡರಿ ಲೈನ್ ದಾಟಿತು. ಜಸ್​ಪ್ರೀತ್ ಬುಮ್ರಾ ಎಸೆದ 25ನೇ ಓವರ್​ನ ಮೊದಲ ಎಸೆತ ಕೂಡ ವಿಕೆಟ್ ಕೀಪರ್​ನನ್ನು ವಂಚಿಸಿ ಫೋರ್ ಆಯಿತು.

ಮೊಹಮ್ಮದ್ ಸಿರಾಜ್ ಎಸೆದ 34ನೇ ಓವರ್​ನ 5ನೇ ಎಸೆತ ಕೂಡ ಬೈಸ್ ಆಗಿ ಫೋರ್​ ಆಯಿತು. 36ನೇ ಓವರ್​ನ ಮೊದಲ ಎಸೆತವನ್ನು ಹಿಡಿಯುವಲ್ಲಿ ವಿಕೆಟ್ ಕೀಪರ್ ಧ್ರುವ್ ಜುರೇಲ್ ಹಿಡಿಯುವಲ್ಲಿ ವಿಫಲರಾದರು. ಇದರಿಂದ ಮತ್ತೊಂದು ಬೈಸ್ ಫೋರ್ ಲಭಿಸಿತು.

ಹೀಗೆ 6 ಬೈಸ್ ಫೋರ್​ಗಳ ಮೂಲಕ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಹೆಚ್ಚುವರಿಯಾಗಿ ನೀಡಿದ್ದು ಬರೋಬ್ಬರಿ 32 ರನ್​ಗಳು. ಇದರಲ್ಲಿ ಬೈಸ್ ಫೋರ್​ಗಳಿಂದಲೇ 24 ರನ್​ಗಳು ಮೂಡಿಬಂದಿದ್ದವು. ಇತ್ತ ಭಾರತ ತಂಡ ಸೋತಿರುವುದು 22 ರನ್​ಗಳಿಂದ. ಅಂದರೆ ಟೀಮ್ ಇಂಡಿಯಾ ಪಾಲಿಗೆ ಬೈಸ್ ಫೋರ್​ಗಳೇ ಮುಳುವಾಗಿರುವುದು ಸ್ಪಷ್ಟ.

ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

ಒಂದು ವೇಳೆ ಟೀಮ್ ಇಂಡಿಯಾ ಈ 6 ಬೈಸ್ ಫೋರ್​ಗಳನ್ನು ನೀಡದಿದ್ದರೆ, ಈ ಪಂದ್ಯದಲ್ಲಿ ಭಾರತ ತಂಡಕ್ಕೆ 169 ರನ್​ಗಳ ಗುರಿ ಲಭಿಸುತ್ತಿತ್ತು. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯವನ್ನು ಸುಲಭವಾಗಿ ಗೆಲ್ಲುತ್ತಿದ್ದರು. ಆದರೆ ಬೌಲರ್​ಗಳು ಹಾಗೂ ವಿಕೆಟ್ ಕೀಪರ್ ಮಾಡಿದ ತಪ್ಪುಗಳಿಂದಾಗಿ ಫೋರ್​ಗಳ ಮೂಲಕ ಇಂಗ್ಲೆಂಡ್ ತಂಡಕ್ಕೆ 24 ರನ್​ಗಳು ಲಭಿಸಿದ್ದವು. ಈ ಹೆಚ್ಚುವರಿ ರನ್​ಗಳೇ ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದು ಸುಳ್ಳಲ್ಲ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ