AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಧರ್ಮಶಾಲಾ ಟೆಸ್ಟ್ ಗೆದ್ದರೆ ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ..!

IND vs ENG: ಭಾರತ ಕ್ರಿಕೆಟ್ ತಂಡ ಇದುವರೆಗಿನ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಗೆದ್ದಿದ್ದಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಆದರೆ ಧರ್ಮಶಾಲಾದಲ್ಲಿ ಈ ಕಥೆ ಬದಲಾಗುವ ಅವಕಾಶವಿದೆ. ಭಾರತ ತಂಡವು ಧರ್ಮಶಾಲಾದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ಮೊದಲ ಬಾರಿಗೆ ಟೀಂ ಇಂಡಿಯಾ ಗೆದ್ದ ಮತ್ತು ಸೋತ ಪಂದ್ಯಗಳ ಸಂಖ್ಯೆ ಸಮಾನವಾಗಲಿದೆ.

IND vs ENG: ಧರ್ಮಶಾಲಾ ಟೆಸ್ಟ್ ಗೆದ್ದರೆ ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ..!
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Feb 29, 2024 | 9:12 PM

Share

ಭಾರತ ತಂಡ ಇಂಗ್ಲೆಂಡ್ ವಿರುದ್ಧದ (India vs England) ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೆ ತಯಾರಿ ಆರಂಭಿಸಲಿದೆ. ಇದಕ್ಕಾಗಿ ತಂಡವನ್ನು ಕೂಡ ಬಿಸಿಸಿಐ ಇಂದು ಪ್ರಕಟಿಸಿದೆ. ಅದರಲ್ಲಿ ಈಗಾಗಲೇ ನಿರೀಕ್ಷಿಸಲಾಗಿದ್ದ ಹೆಚ್ಚಿನ ಬದಲಾವಣೆಗಳಿಲ್ಲದಿದ್ದರೂ, ಜಸ್ಪ್ರೀತ್ ಬುಮ್ರಾ (Jasprit Bumrah) ಆಗಮನದಿಂದ ತಂಡ ಮತ್ತಷ್ಟು ಬಲಿಷ್ಠಗೊಂಡಿದೆ. ಏತನ್ಮಧ್ಯೆ, ಮಾರ್ಚ್ 7 ರಂದು ಧರ್ಮಶಾಲಾದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮುಖಾಮುಖಿಯಾಗಲಿದ್ದು, ಒಂದೆಡೆ ಸರಣಿ ಸೋತಿರುವ ಇಂಗ್ಲೆಂಡ್​ಗೆ ಈ ಪಂದ್ಯ ಬಹಳ ಮಹತ್ವದ್ದಾಗಿದೆ. ಇನ್ನೊಂದೆಡೆ ಧರ್ಮಶಾಲಾದಲ್ಲಿ (Dharamshala) ಇತಿಹಾಸ ಸೃಷ್ಟಿಸುವ ಸುವರ್ಣಾವಕಾಶ ಟೀಂ ಇಂಡಿಯಾಕಿದೆ.

ಟೀಂ ಇಂಡಿಯಾಕ್ಕಿದೆ ಸುವರ್ಣಾವಕಾಶ

ಭಾರತ ಕ್ರಿಕೆಟ್ ತಂಡ ಇದುವರೆಗಿನ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಗೆದ್ದಿದ್ದಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಆದರೆ ಧರ್ಮಶಾಲಾದಲ್ಲಿ ಈ ಕಥೆ ಬದಲಾಗುವ ಅವಕಾಶವಿದೆ. ಭಾರತ ತಂಡವು ಧರ್ಮಶಾಲಾದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ಮೊದಲ ಬಾರಿಗೆ ಟೀಂ ಇಂಡಿಯಾ ಗೆದ್ದ ಮತ್ತು ಸೋತ ಪಂದ್ಯಗಳ ಸಂಖ್ಯೆ ಸಮಾನವಾಗಲಿದೆ.

IND vs ENG: ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ಕನ್ನಡಿಗ ಕೆಎಲ್ ರಾಹುಲ್..!

ಟೆಸ್ಟ್​ನಲ್ಲಿ ಹೆಚ್ಚು ಗೆಲುವು, ಕಡಿಮೆ ಸೋಲು ಕಂಡ ತಂಡಗಳಿವು

ಹೆಚ್ಚು ಪಂದ್ಯಗಳನ್ನು ಗೆದ್ದ ಮತ್ತು ಕಡಿಮೆ ಪಂದ್ಯಗಳನ್ನು ಸೋತ ತಂಡಗಳನ್ನು ನಾವು ನೋಡುವುದಾದರೆ.. ಇಂಗ್ಲೆಂಡ್ ತಂಡ ಇದುವರೆಗೆ 392 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದು, 323ರಲ್ಲಿ ಸೋಲು ಕಂಡಿದೆ. ಆಸ್ಟ್ರೇಲಿಯಾ ಇದುವರೆಗೆ 412 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದು, 232 ಪಂದ್ಯಗಳಲ್ಲಿ ಮಾತ್ರ ಸೋತಿದೆ. ದಕ್ಷಿಣ ಆಫ್ರಿಕಾ ತಂಡ ಕೂಡ ಇಲ್ಲಿಯವರೆಗೆ 178 ಪಂದ್ಯಗಳನ್ನು ಗೆದ್ದು 161ರಲ್ಲಿ ಸೋತಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರೂ ಇದ್ದು, ಪಾಕಿಸ್ತಾನ ಕ್ರಿಕೆಟ್ ತಂಡ 148 ಪಂದ್ಯಗಳನ್ನು ಗೆದ್ದಿದ್ದು, 142ರಲ್ಲಿ ಸೋಲನ್ನು ಎದುರಿಸಿದೆ

ಭಾರತದ ಸಾಧನೆ ಹೀಗಿದೆ

1932 ರಲ್ಲಿ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದ ಟೀಂ ಇಂಡಿಯಾ ಅಂದಿನಿಂದ 578 ಪಂದ್ಯಗಳನ್ನು ಆಡಿದೆ. ಈ ಪೈಕಿ 177ರಲ್ಲಿ ಗೆದ್ದು 178ರಲ್ಲಿ ಸೋತಿದೆ. ಈ 92 ವರ್ಷಗಳಲ್ಲಿ ಭಾರತ ತಂಡ ಗೆದ್ದ ಪಂದ್ಯಗಳ ಸಂಖ್ಯೆ ಹೆಚ್ಚು ಮತ್ತು ಸೋತ ಸಂಖ್ಯೆ ಕಡಿಮೆ ಎಂಬುದೇನೂ ನಡೆದಿಲ್ಲ. ಆದರೆ ಧರ್ಮಶಾಲಾದಲ್ಲಿ ಭಾರತ ಗೆದ್ದರೆ, ಟೆಸ್ಟ್ ಇತಿಹಾಸದಲ್ಲಿ ಭಾರತ ಗೆದ್ದ ಹಾಗೂ ಸೋತ ಪಂದ್ಯಗಳ ಸಂಖ್ಯೆ ಸಮಾನವಾಗಲಿದೆ.

ಐದನೇ ಟೆಸ್ಟ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್ ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ