VIDEO: ಮೊದಲ ಪಂದ್ಯಕ್ಕೂ ಮುನ್ನ ಪೋಸ್ ನೀಡಿದ ಟೀಮ್ ಇಂಡಿಯಾ ಆಟಗಾರರು
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಇಂದಿನಿಂದ (ಜ.25) ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಫೋಟೋಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ (Team India) ಆಟಗಾರರು ಫೋಟೋಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿ ಬಳಿಕ ಭಾರತೀಯ ಆಟಗಾರರು ಇದೀಗ ಮತ್ತೊಮ್ಮೆ ದೀರ್ಘಾವಧಿ ಕ್ರಿಕೆಟ್ಗೆ ಮರಳಿದ್ದಾರೆ. ಹೀಗಾಗಿ ಮತ್ತೊಮ್ಮೆ ವೈಟ್ ಜೆರ್ಸಿಯಲ್ಲಿ ಕಾಣಿಸಿಕೊಂಡಿರುವ ಭಾರತೀಯ ಆಟಗಾರರು ವಿಭಿನ್ನ ಸ್ಟೈಲ್ನಲ್ಲಿ ಪೋಟೋಗೆ ಪೋಸ್ ನೀಡಿದ್ದಾರೆ.
ಈ ಫೋಟೋಶೂಟ್ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕುಲ್ದೀಪ್ ಯಾದವ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಅವೇಶ್ ಖಾನ್ ಹಾಗೂ ಧ್ರುವ್ ಜುರೇಲ್ ಅವರನ್ನು ಕಾಣಬಹುದು.
White Threads 🤍
How good 👌 👌#TeamIndia | #INDvENG | @IDFCFIRSTBank pic.twitter.com/ARztbBKKKC
— BCCI (@BCCI) January 24, 2024
ವಿರಾಟ್ ಕೊಹ್ಲಿ ಇಲ್ಲ:
ಭಾರತ ತಂಡದ ರನ್ ಸರದಾರ ವಿರಾಟ್ ಕೊಹ್ಲಿ ಈ ಫೋಟೋಶೂಟ್ನಲ್ಲಿ ಕಾಣಿಸಿಕೊಂಡಿಲ್ಲ. ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಿಂದ ಕಿಂಗ್ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಎರಡು ಪಂದ್ಯಗಳಿಂದ ಹಿಂದೆ ಸರಿದಿದ್ದು, ಮೂರನೇ ಪಂದ್ಯದ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಬದಲಿ ಆಟಗಾರ ಆಯ್ಕೆ:
ವಿರಾಟ್ ಕೊಹ್ಲಿ ಅಲಭ್ಯತೆಯ ಕಾರಣ ಇದೀಗ ಬದಲಿ ಆಟಗಾರನನ್ನು ಹೆಸರಿಸಿದೆ. ಅದರಂತೆ ಕಿಂಗ್ ಕೊಹ್ಲಿ ಸ್ಥಾನದಲ್ಲಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಟ್ಟು 93 ಇನಿಂಗ್ಸ್ಗಳನ್ನು ಆಡಿರುವ ರಜತ್ 12 ಶತಕ ಹಾಗೂ 22 ಅರ್ಧಶತಕಗಳೊಂದಿಗೆ 4000 ರನ್ ಕಲೆಹಾಕಿದ್ದಾರೆ. ಅಲ್ಲದೆ ಭಾರತ ಎ ತಂಡದ ಪರ ಕೂಡ ಮಿಂಚಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: IPL 2024: ಬರೆದಿಟ್ಕೊಳ್ಳಿ, ಈ ಸಲ ಕಪ್ RCBಗೆ..!
ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
- ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
- ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
- ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
- ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)