ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 28 ರನ್ಗಳಿಂದ ಗೆಲುವು ಸಾಧಿಸಿದ ಇಂಗ್ಲೆಂಡ್ ತಂಡ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 2 ರಂದು ವಿಶಾಖಪಟ್ಟಣದಲ್ಲಿ (Visakhapatnam) ನಡೆಯಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯುವ ಇರಾದೆಯೊಂದಿಗೆ ಟೀಂ ಇಂಡಿಯಾ (Team India) ಹೈದರಾಬಾದ್‌ನಿಂದ ವಿಶಾಖಪಟ್ಟಣಕ್ಕೆ ಬಂದಿಳಿದಿದೆ.
ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟೀಂ ಇಂಡಿಯಾ ಆಟಗಾರರು ವಿಶಾಖಪಟ್ಟಣಕ್ಕೆ ಪ್ರಯಾಣ ಬೆಳೆಸಿರುವ ವಿಡಿಯೋವನ್ನು ಹಂಚಿಕೊಂಡಿದೆ. ರೋಹಿತ್ ಶರ್ಮಾ, ರವಿ ಅಶ್ವಿನ್, ಕುಲ್ದೀಪ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಇತರ ಆಟಗಾರರು ಈ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಹೈದರಾಬಾದ್‌ನಿಂದ ವಿಶಾಖಪಟ್ಟಣಕ್ಕೆ ಟೀಂ ಇಂಡಿಯಾದ ಪ್ರಯಾಣವನ್ನು ವಿಡಿಯೋದಲ್ಲಿ ತೋರಿಸಲಾಗಿದೆ.
Presenting Sounds 🎧 of #TeamIndia‘s travel day!
Hyderabad ✈️ Vizag #INDvENG | @IDFCFIRSTBank pic.twitter.com/bTcXWMhMbM
— BCCI (@BCCI) January 30, 2024
ವಿಶಾಖಪಟ್ಟಣದ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾದ ದಾಖಲೆ ಉತ್ತಮವಾಗಿದೆ. ಭಾರತ ತಂಡ ಇಲ್ಲಿಯವರೆಗೆ ಈ ಮೈದಾನದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದ್ದಾರೆ. 2016ರಲ್ಲಿ ಭಾರತ ಈ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 246 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದಾದ ಬಳಿಕ ಇದೇ ಮೈದಾನದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರಿ ಅಂತರದಿಂದ ಸೋಲಿಸಿತ್ತು.
ವಾಸ್ತವವಾಗಿ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ನ ನಾಲ್ಕನೇ ದಿನದಾಟದಂದು ರವೀಂದ್ರ ಜಡೇಜಾ ಇಂಜುರಿಗೆ ಒಳಗಾಗಿದ್ದರು. ಭಾರತದ ಎರಡನೇ ಇನ್ನಿಂಗ್ಸ್ ವೇಳೆ ರನ್ಗಾಗಿ ಓಡುತ್ತಿದ್ದ ಜಡೇಜಾ, ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಎಸೆದ ಅದ್ಭುತ ಥ್ರೋನಿಂದಾಗಿ ರನೌಟ್ಗೆ ಬಲಿಯಾಗಿದ್ದರು. ಅಲ್ಲದೆ ಆ ವೇಳೆ ಜಡೇಜಾ ಮಂಡಿರಜ್ಜು ಸಮಸ್ಯೆಗೂ ಒಳಗಾಗಿದ್ದರು. ಇವರೊಂದಿಗೆ ಕೆಎಲ್ ರಾಹುಲ್ ಕೂಡ ತಮ್ಮ ಬಲತೊಡೆಯಲ್ಲಿನ ನೋವಿನಿಂದ ಬಳಲುತ್ತಿದ್ದು, ಈ ಇಬ್ಬರು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರಿಬ್ಬರ ಸ್ಥಾನಕ್ಕೆ ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ:ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.
ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ:ಬೆನ್ ಸ್ಟೋಕ್ಸ್ (ನಾಯಕ), ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ರೆಹಾನ್ ಅಹ್ಮದ್, ಡೇನ್ ಲಾರೆನ್ಸ್, ಜಾನಿ ಬೈರ್‌ಸ್ಟೋವ್ (ವಿಕೆಟ್‌ಕೀಪರ್), ಶೋಯೆಬ್ ಬಶೀರ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಜೇಮ್ಸ್ ಆಂಡರ್ಸನ್, ಗಸ್ ಅಟ್ಕಿನ್ಸನ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲಿ ಪೋಪ್, ಜೋ ರೂಟ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ