IND vs ENG: ಭಾರತದ ಈ ಐವರಿಗೆ ಇಂಗ್ಲೆಂಡ್ ವಿರುದ್ಧ ಇದು ಮೊದಲ ಟೆಸ್ಟ್ ಸರಣಿ
IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಕೆಎಸ್ ಭರತ್, ಧ್ರುವ್ ಜುರೆಲ್, ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಈ ಆಟಗಾರರು ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡುವ ಅವಕಾಶ ಪಡೆದಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ಇದೇ ಜವರಿ 25 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಎರಡು ಪಂದ್ಯಗಳಿಗೆ ಆಯ್ಕೆಗಾರರು ಈಗಾಗಲೇ ಟೀಂ ಇಂಡಿಯಾವನ್ನು (Team India) ಸಹ ಪ್ರಕಟಿಸಿದ್ದಾರೆ. ಹಾಗೆಯೇ ಇಂಗ್ಲೆಂಡ್ ಕೂಡ ಬಲಿಷ್ಠ ತಂಡವನೇ ಭಾರತದ ವಿರುದ್ಧ ಕಣಕ್ಕಿಳಿಸುತ್ತಿದೆ. ಇನ್ನು ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾಗೆ (Rohit Sharma) ಹಸ್ತಾಂತರಿಸಲಾಗಿದ್ದು, ಜಸ್ಪ್ರೀತ್ ಬುಮ್ರಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಈ ಸರಣಿಯಲ್ಲಿ ಹಲವು ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ. ಮತ್ತೊಂದೆಡೆ ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ ಮತ್ತು ಇಶಾನ್ ಕಿಶನ್ ಅವರಂತಹ ಆಟಗಾರರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಗಾರರು 16 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಇವರಲ್ಲಿ ಐವರು ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ಈ ಐವರಿಗೆ ಮೊದಲ ಟೆಸ್ಟ್ ಪಂದ್ಯ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಕೆಎಸ್ ಭರತ್, ಧ್ರುವ್ ಜುರೆಲ್, ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಈ ಆಟಗಾರರು ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡುವ ಅವಕಾಶ ಪಡೆದಿದ್ದಾರೆ. ಈ ಐವರು ಆಟಗಾರರು ಇನ್ನೂ ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿಲ್ಲ. ಆದರೆ ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ಆಟಗಾರರಿಗೆ ಭಾಗ್ಯದ ಬಾಗಿಲು ತೆರೆಯುವ ಅವಕಾಶ ಒದಗಿ ಬಂದಿದೆ.
Breaking: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ..!
ಈ ಇಬ್ಬರು ಆಟಗಾರರು ಪದಾರ್ಪಣೆ ಮಾಡಿಲ್ಲ
ಭಾರತ ಟೆಸ್ಟ್ ತಂಡಕ್ಕೆ ಮೊದಲ ಬಾರಿಗೆ ಧ್ರುವ್ ಜುರೆಲ್ ಹಾಗೂ ಆವೇಶ್ ಖಾನ್ ಆಯ್ಕೆಯಾಗಿದ್ದಾರೆ. ಈ ಇಬ್ಬರು ಆಟಗಾರರು ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ನೀಡಿದ ಉತ್ತಮ ಪ್ರದರ್ಶನದ ಆಧಾರದ ಮೇಲೆ ಆಯ್ಕೆ ಮಂಡಳಿ ಈ ಇಬ್ಬರಿಗೆ ಮಣೆ ಹಾಕಿದೆ. 2023ರ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಪದಾರ್ಪಣೆ ಮಾಡಿದ ಧ್ರುವ್, 22 ರ ಸರಾಸರಿ ಮತ್ತು 173 ರ ಸ್ಟ್ರೈಕ್ ರೇಟ್‌ನಲ್ಲಿ 152 ರನ್ ಕಲೆಹಾಕಿದ್ದರು. ಮತ್ತೊಂದೆಡೆ, ಅವೇಶ್ ಖಾನ್ ಕೂಡ ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ಉಳಿದಂತೆ ಆಯ್ಕೆಯಾಗಿರುವ ತಂಡದಲ್ಲಿ ಆರಂಭಿಕ ಯಶಸ್ವಿ ಜೈಸ್ವಾಲ್ ಇದುವರೆಗೆ ಟೀಂ ಇಂಡಿಯಾ ಪರ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದರಲ್ಲಿ ಒಂದು ಶತಕವೂ ಸೇರಿದಂತೆ 316 ರನ್ ಕಲೆಹಾಕಿದ್ದಾರೆ. ವಿಕೆಟ್‌ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿರುವ ಕೆಎಸ್ ಭರತ್ ಭಾರತದ ಪರ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಮತ್ತೊಂದೆಡೆ, ಮುಖೇಶ್ ಕುಮಾರ್ 2 ಟೆಸ್ಟ್ ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದಾರೆ. ಆದರೆ ಈ ಆಟಗಾರರು ಇನ್ನೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿಲ್ಲ.
ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ:
ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೆಲ್ (ವಿಕೇಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ