IND vs ENG: ಟೀಮ್ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್ ರಘುವನ್ನು ತಡೆದ ಪೊಲೀಸರು..!

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ಗುರುವಾರದಿಂದ (ಫೆ.6) ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತಿದ್ದು, ಮೊದಲ ಪಂದ್ಯಕ್ಕೆ ನಾಗ್ಪುರ ಆತಿಥ್ಯವಹಿಸಲಿದೆ. ಇನ್ನು ದ್ವಿತೀಯ ಪಂದ್ಯವು ಕಟಕ್​ನಲ್ಲಿ ನಡೆದರೆ, ಮೂರನೇ ಪಂದ್ಯ ಅಹಮದಾಬಾದ್​ನಲ್ಲಿ ಜರುಗಲಿದೆ.

IND vs ENG: ಟೀಮ್ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್ ರಘುವನ್ನು ತಡೆದ ಪೊಲೀಸರು..!
Raghu
Follow us
ಝಾಹಿರ್ ಯೂಸುಫ್
|

Updated on: Feb 05, 2025 | 8:35 AM

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಫೆಬ್ರವರಿ 6 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ನಾಗ್ಪುರಕ್ಕೆ ಬಂದಿಳಿದಿದೆ. ಹೀಗೆ ಬಂದಿಳಿದ ಭಾರತ ತಂಡದ ಜತೆ ಥ್ರೋಡೌನ್ ಸ್ಪೆಷಲಿಸ್ಟ್ ರಘು ಕೂಡ ಇದ್ದರು. ಆದರೆ ರಘುವನ್ನು ಟೀಮ್ ಇಂಡಿಯಾ ಜತೆ ಹೊಟೇಲ್​ಗೆ ತೆರಳಲು ನಾಗ್ಪುರ ಪೊಲೀಸರು ಅನುಮತಿಸಿರಲಿಲ್ಲ.

ಅಭಿಮಾನಿ ಯಾರೋ ಟೀಮ್ ಇಂಡಿಯಾ ಜೊತೆ ಹೋಗಲು ಯತ್ನಿಸುತ್ತಿದ್ದಾರೆ ಎಂದು ಭಾವಿಸಿ ಹೊಟೇಲ್​ ಬಳಿಯಿದ್ದ ಭದ್ರತಾ ಪೊಲೀಸ್ ಸಿಬ್ಬಂದಿಗಳು ಮೊದಲಿಗೆ ರಘು ಅವರನ್ನು ತಡೆದಿದ್ದಾರೆ. ಈ ವೇಳೆ ಅವರು ತಾನು ಕೂಡ ಟೀಮ್ ಇಂಡಿಯಾ ಸದಸ್ಯ ಎಂದು ಪೊಲೀಸರಿಗೆ ಮನವರಿಕೆ ಮಾಡಲು ಯತ್ನಿಸಿದರು.

ಇದೇ ವೇಳೆ ಅಲ್ಲಿದ್ದ ಕೆಲವರು ರಘು ಭಾರತ ತಂಡದ ಥ್ರೋಡೌನ್ ಸ್ಪೆಷಲಿಸ್ಟ್ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ ಅವರನ್ನು ಹೊಟೇಲ್​ ಒಳಗೆ ಬಿಟ್ಟಿದ್ದಾರೆ. ಇದೀಗ ಟೀಮ್ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್ ರಘು ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಮ್ಮೂರ ಹುಡುಗ ರಘು:

ಡಿ ರಾಘವೇಂದ್ರ ಅಲಿಯಾಸ್ ರಘು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮುಟದವರು. ಇದೀಗ ಟೀಮ್ ಇಂಡಿಯಾದ ಸೈಡ್ ಆರ್ಮ್ ಥ್ರೋಡೌನ್ ಸ್ಪೆಷಲಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂದರೆ ಬ್ಯಾಟಿಂಗ್​ ಅಭ್ಯಾಸದ ವೇಳೆ ಅತ್ಯಂತ ವೇಗವಾಗಿ ಚೆಂಡೆಸೆಯುವ ಕೆಲಸ.

2012 ರಿಂದ ಟೀಮ್ ಇಂಡಿಯಾ ಥ್ರೋ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಂಡಿರುವ ರಘು, ಕಳೆದ 13 ವರ್ಷಗಳಿಂದ ಭಾರತೀಯ ಬ್ಯಾಟರ್​ಗಳ ಪ್ರದರ್ಶನಕ್ಕಾಗಿ ತಮ್ಮ ರಕ್ತವನ್ನೇ ಬೆವರಾಗಿ ಪರಿವರ್ತಿಸಿದ್ದಾರೆ. ಅಲ್ಲದೆ ತಲೆಯ ಎತ್ತರಕ್ಕೆ ಪುಟಿದೆಳುವಂತೆ ಚೆಂಡುಗಳನ್ನು ಥ್ರೋ ಮಾಡಿ ಟೀಮ್ ಇಂಡಿಯಾ ಬ್ಯಾಟರ್​ಗಳು ಲೀಲಾಜಾಲವಾಗಿ ಬ್ಯಾಟ್ ಬೀಸಲು ನೆರವಾಗಿದ್ದಾರೆ.

ಈ ಮೂಲಕ ಭಾರತ ತಂಡದ ಗೆಲುವಿನಲ್ಲಿ ತೆರೆಮರೆಯ ಕೊಡುಗೆ ನೀಡಿದ್ದಾರೆ. ಹೀಗೆ ತೆರೆಮರೆಯಲ್ಲೇ ಕೊಡುಗೆ ನೀಡುತ್ತಾ ಸಾಗಿರುವ ರಾಘವೇಂದ್ರ ಅವರ ಪರಿಚಯ ಹೆಚ್ಚಿನ ಜನರಿಗಿಲ್ಲ. ಇದೇ ಕಾರಣದಿಂದ ನಾಗ್ಪುರ ಪೊಲೀಸರು ಕೂಡ ಪ್ರಮಾದ ಎಸೆಗಿದ್ದಾರೆ.

ಏನಿದು ಥ್ರೋಡೌನ್ ಸ್ಪೆಷಲಿಸ್ಟ್?

ಥ್ರೋಡೌನ್ ಸ್ಪೆಷಲಿಸ್ಟ್ ಎಂದರೆ ಬ್ಯಾಟಿಂಗ್ ಅಭ್ಯಾಸದ ವೇಳೆ ಚೆಂಡೆಸೆಯುವುದು. ಇದಕ್ಕಾಗಿ ಸೈಡ್ ಆರ್ಮ್ ಸಾಧನವನ್ನು ಬಳಸಲಾಗುತ್ತದೆ. ಸಾಮಾನ್ಯವಾಗಿ ಚೆಂಡನ್ನು ಥ್ರೋ ಮಾಡುವುದರಲ್ಲಿ ಕಷ್ಟ ಏನಿದೆ ಎಂದು ನಿಮಗೂ ಅನಿಸಬಹುದು. ಆದರೆ ಈ ಕೆಲಸ ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ಒಬ್ಬ ಕ್ರಿಕೆಟಿಗ ಹೇಗೆ ತಯಾರಾಗಬೇಕೊ, ಅದೇ ಮಾದರಿಯಲ್ಲಿ ಥ್ರೋಡೌನ್ ಸ್ಪೆಷಲಿಸ್ಟ್ ಕೂಡ ಫಿಟ್​ ಆಗಿರಬೇಕು.

ಪ್ರತಿ ಕ್ರೀಡಾಪಟುಗಳಂತೆ ಜಿಮ್​ನಲ್ಲಿ ಬೆವರಿಳಿಸಬೇಕಾಗುತ್ತದೆ. ತಮ್ಮ ಥ್ರೋನಲ್ಲಿ ವ್ಯತ್ಯಾಸಗಳಾದಂತೆ ಎಚ್ಚರವಹಿಸಬೇಕು. ಮುಖ್ಯವಾಗಿ ಒಂದೇ ಮಾದರಿಯಲ್ಲಿ ಥ್ರೋಗಳನ್ನು ಎಸೆಯುವ ಸಾಮರ್ಥ್ಯ ರೂಪಿಸಬೇಕು. ಉದಾಹರಣೆಗೆ ವಿರಾಟ್ ಕೊಹ್ಲಿಗೆ ಬೌನ್ಸರ್​ ಥ್ರೋಗಳನ್ನು ಎಸೆಯಬೇಕಾಗಿ ಬರಬಹುದು, ಮತ್ತೊಂದೆಡೆ ರೋಹಿತ್ ಶರ್ಮಾ ಯಾರ್ಕರ್​ ಥ್ರೋಗಳಿಗೆ ಡಿಮ್ಯಾಂಡ್ ಮಾಡಬಹುದು. ಇಲ್ಲಿ ಬ್ಯಾಟ್ಸ್​ಮನ್​ಗಳ ಆಗ್ರಹಕ್ಕೆ ಅನುಗುಣವಾಗಿ ಸತತವಾಗಿ ಚೆಂಡೆಸೆಯಬೇಕಾಗುತ್ತದೆ.

ಇದನ್ನೂ ಓದಿ: ಆ್ಯಂಡ್ರೆ ರಸೆಲ್ ಆರ್ಭಟಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಹಾಗೆಯೇ ಎದುರಾಳಿ ತಂಡಗಳ ಬೌಲರ್​​ಗಳ ತಂತ್ರಗಳ ಬಗ್ಗೆ ಜ್ಞಾನ ಹೊಂದಿರಬೇಕು. ಪ್ರತಿ ಪಂದ್ಯಕ್ಕೂ ಮುನ್ನ ಎದುರಾಳಿ ಬೌಲರ್​ಗಳನ್ನು ಸಾಮರ್ಥ್ಯವನ್ನು ವಿಶ್ಲೇಷಿಸಿ ಅದೇ ರೀತಿಯಲ್ಲಿ ಬ್ಯಾಟರ್​ಗಳಿಗೆ ಚೆಂಡೆಸೆಯಬೇಕಾಗುತ್ತದೆ. ಈ ಮೂಲಕ ಟೀಮ್ ಇಂಡಿಯಾ ಬ್ಯಾಟರ್​ಗಳನ್ನು ಸಜ್ಜಗೊಳಿಸುವ ಕೆಲಸ ಮಾಡುತ್ತಿದ್ದಾರೆ ಕನ್ನಡಿಗ ರಾಘವೇಂದ್ರ.

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ