IND vs ENG: ವಿರಾಟ್ ಕೊಹ್ಲಿ ಆಡುವ ಬಗ್ಗೆ ಹೊರಬಿತ್ತು ಬಿಗ್ ಅಪ್​ಡೇಟ್

Virat Kohli: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮುಂದಿನ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡುವ ಸಾಧ್ಯತೆಗಳಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

IND vs ENG: ವಿರಾಟ್ ಕೊಹ್ಲಿ ಆಡುವ ಬಗ್ಗೆ ಹೊರಬಿತ್ತು ಬಿಗ್ ಅಪ್​ಡೇಟ್
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on:Feb 08, 2024 | 6:00 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ. ಈ ಪಂದ್ಯದೊಂದಿಗೆ ತಂಡದ ಮೂವರು ಪ್ರಮುಖ ಆಟಗಾರರಾದ ಕೆಎಲ್ ರಾಹುಲ್ (KL Rahul), ರವೀಂದ್ರ ಜಡೇಜಾ (Ravindra Jadeja) ಹಾಗೂ ವಿರಾಟ್ ಕೊಹ್ಲಿ (Virat Kohli) ತಂಡಕ್ಕೆ ಮರಳುತ್ತಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಎಲ್ ರಾಹುಲ್, ರವೀಂದ್ರ ಜಡೇಜಾ ಆಡುವ ಬಗ್ಗೆ ಖಚಿತತೆ ಸಿಕ್ಕಿದೆಯಾದರೂ, ಕೊಹ್ಲಿ ಬಗ್ಗೆ ಮಾತ್ರ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಇದೀಗ ವಿರಾಟ್ ಕೊಹ್ಲಿ ಉಪಸ್ಥಿತಿಯ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ ಬಿಗ್ ಅಪ್​ಡೇಟ್ ನೀಡಿದ್ದು, ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಆಡುವ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ಬಿಸಿಸಿಐ ಅಧಿಕಾರಿ ಹೇಳಿರುವುದೇನು?

ಬುಧವಾರ, ಇಎಸ್‌ಪಿಎನ್ ಕ್ರಿಕ್‌ಇನ್ಫೋ ತನ್ನ ವರದಿಯಲ್ಲಿ ವಿರಾಟ್ ಕೊಹ್ಲಿ ಮೂರನೇ (ರಾಜ್‌ಕೋಟ್) ಮತ್ತು ನಾಲ್ಕನೇ (ರಾಂಚಿ) ಟೆಸ್ಟ್‌ಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿ ಮಾಡಿತ್ತು. ಇದೀಗ ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ಈ ಬಗ್ಗೆ ವರದಿ ಮಾಡಿದ್ದು, ಟೀಂ ಇಂಡಿಯಾದಲ್ಲಿ ಯಾವಾಗ ಪುನರಾಗಮನ ಮಾಡಬೇಕೆಂದು ವಿರಾಟ್ ಅವರೇ ನಿರ್ಧರಿಸುತ್ತಾರೆ. ಈ ಬಗ್ಗೆ ಅವರು ಇನ್ನೂ ಮಾಹಿತಿ ನೀಡಿಲ್ಲ. ಅವರು ಯಾವಾಗ ಆಡುತ್ತಾರೆ ಮತ್ತು ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದರ ಕುರಿತು ಅವರು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವರದಿ ಮಾಡಿದೆ.

IND vs ENG: ಮೂರನೇ ಟೆಸ್ಟ್​ಗೆ ರಾಹುಲ್- ಜಡೇಜಾ ಲಭ್ಯ; ಇಡೀ ಸರಣಿಗೆ ಕೊಹ್ಲಿ ಡೌಟ್! ವರದಿ

ವಿರಾಟ್ ಕೊಹ್ಲಿ ತಂಡದಿಂದ ಹೊರಗಿರಲು ಕಾರಣವೇನು?

ವಿರಾಟ್ ಏಕೆ ತಂಡದಿಂದ ಹೊರಗಿದ್ದಾರೆ ಎಂಬ ಬಗ್ಗೆ ವಿರಾಟ್ ಕೊಹ್ಲಿ ಅಥವಾ ಭಾರತೀಯ ಕ್ರಿಕೆಟ್ ಮಂಡಳಿಯಿಂದ ಯಾವುದೇ ಸ್ಪಷ್ಟನೇ ಹೊರಬಂದಿಲ್ಲ. ವೈಯಕ್ತಿಕ ಕಾರಣಗಳನ್ನು ಮಾತ್ರ ಉಲ್ಲೇಖಿಸಿ ಬಿಸಿಸಿಐ ಈ ಹಿಂದೆ ಕೊಹ್ಲಿ ಬಗ್ಗೆ ಮಾಹಿತಿ ನೀಡಿತ್ತು. ಇತ್ತೀಚೆಗೆ, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮತ್ತು ವಿರಾಟ್‌ ಕೊಹ್ಲಿಯ ಆತ್ಮೀಯ ಸ್ನೇಹಿತ ಎಬಿ ಡಿವಿಲಿಯರ್ಸ್, ವಿರಾಟ್ ಪ್ರಸ್ತುತ ತನ್ನ ಕುಟುಂಬದೊಂದಿಗೆ ಇದ್ದಾರೆ. ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿಕೊಂಡಿದ್ದರು. ಡಿವಿಲಿಯರ್ಸ್ ಅವರ ಈ ಹೇಳಿಕೆಯ ನಂತರ, ಅವರ ವೀಡಿಯೊ ವೈರಲ್ ಆಗಿದ್ದು, ಈ ಬಗ್ಗೆ ವಿರಾಟ್ ಅಥವಾ ಅವರ ಆಪ್ತರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬುಮ್ರಾಗೆ ವಿಶ್ರಾಂತಿ

ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಆಡುವುದಿಲ್ಲ ಎಂದು ಕ್ರಿಕ್‌ಇನ್ಫೋ ಗುರುವಾರ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ತಿಳಿಸಿದೆ. ಮೊಹಮ್ಮದ್ ಸಿರಾಜ್ ಆಡುವುದು ಖಚಿತವಾದರೆ, ಜಸ್ಪ್ರೀತ್ ಬುಮ್ರಾ ಬಗ್ಗೆ ಸಸ್ಪೆನ್ಸ್ ಇದೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಬುಮ್ರಾ ಮೂರನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದಾರೆ ಎಂಬ ವರದಿಗಳಿವೆ.

ಕೆಎಲ್ ರಾಹುಲ್ ಕಣಕ್ಕೆ

ಹೈದರಾಬಾದ್ ಟೆಸ್ಟ್‌ನಲ್ಲಿ ಕೊಹ್ಲಿ ಬದಲಿಗೆ ಕೆಎಲ್ ರಾಹುಲ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ವಿಶಾಖಪಟ್ಟಣಂ ಟೆಸ್ಟ್‌ಗೂ ಮುನ್ನ ಅವರು ಗಾಯಗೊಂಡಿದ್ದರು. ಈ ಕಾರಣಕ್ಕಾಗಿ ಅವರು ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿಲ್ಲ. ಅವರಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಇತ್ತೀಚಿನ ಮಾಹಿತಿ ಪ್ರಕಾರ, ರಾಹುಲ್ ಮೂರನೇ ಟೆಸ್ಟ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರೊಳಗೆ ಕಾಣಿಸಿಕೊಳ್ಳಲಿದ್ದು, ರವೀಂದ್ರ ಜಡೇಜಾ ಕೂಡ ಎರಡನೇ ಟೆಸ್ಟ್ ಪಂದ್ಯ ಆಡದ ಕಾರಣ ರಾಜ್ ಕೋಟ್​ನಲ್ಲಿ ಆಡುವ ಭರವಸೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Thu, 8 February 24

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?