ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ. ಈ ಪಂದ್ಯದೊಂದಿಗೆ ತಂಡದ ಮೂವರು ಪ್ರಮುಖ ಆಟಗಾರರಾದ ಕೆಎಲ್ ರಾಹುಲ್ (KL Rahul), ರವೀಂದ್ರ ಜಡೇಜಾ (Ravindra Jadeja) ಹಾಗೂ ವಿರಾಟ್ ಕೊಹ್ಲಿ (Virat Kohli) ತಂಡಕ್ಕೆ ಮರಳುತ್ತಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಎಲ್ ರಾಹುಲ್, ರವೀಂದ್ರ ಜಡೇಜಾ ಆಡುವ ಬಗ್ಗೆ ಖಚಿತತೆ ಸಿಕ್ಕಿದೆಯಾದರೂ, ಕೊಹ್ಲಿ ಬಗ್ಗೆ ಮಾತ್ರ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಇದೀಗ ವಿರಾಟ್ ಕೊಹ್ಲಿ ಉಪಸ್ಥಿತಿಯ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ಬಿಗ್ ಅಪ್ಡೇಟ್ ನೀಡಿದ್ದು, ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಆಡುವ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.
ಬುಧವಾರ, ಇಎಸ್‌ಪಿಎನ್ ಕ್ರಿಕ್‌ಇನ್ಫೋ ತನ್ನ ವರದಿಯಲ್ಲಿ ವಿರಾಟ್ ಕೊಹ್ಲಿ ಮೂರನೇ (ರಾಜ್‌ಕೋಟ್) ಮತ್ತು ನಾಲ್ಕನೇ (ರಾಂಚಿ) ಟೆಸ್ಟ್‌ಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿ ಮಾಡಿತ್ತು. ಇದೀಗ ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ಈ ಬಗ್ಗೆ ವರದಿ ಮಾಡಿದ್ದು, ಟೀಂ ಇಂಡಿಯಾದಲ್ಲಿ ಯಾವಾಗ ಪುನರಾಗಮನ ಮಾಡಬೇಕೆಂದು ವಿರಾಟ್ ಅವರೇ ನಿರ್ಧರಿಸುತ್ತಾರೆ. ಈ ಬಗ್ಗೆ ಅವರು ಇನ್ನೂ ಮಾಹಿತಿ ನೀಡಿಲ್ಲ. ಅವರು ಯಾವಾಗ ಆಡುತ್ತಾರೆ ಮತ್ತು ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬುದರ ಕುರಿತು ಅವರು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವರದಿ ಮಾಡಿದೆ.
IND vs ENG: ಮೂರನೇ ಟೆಸ್ಟ್‌ಗೆ ರಾಹುಲ್- ಜಡೇಜಾ ಲಭ್ಯ; ಇಡೀ ಸರಣಿಗೆ ಕೊಹ್ಲಿ ಡೌಟ್! ವರದಿ
ವಿರಾಟ್ ಏಕೆ ತಂಡದಿಂದ ಹೊರಗಿದ್ದಾರೆ ಎಂಬ ಬಗ್ಗೆ ವಿರಾಟ್ ಕೊಹ್ಲಿ ಅಥವಾ ಭಾರತೀಯ ಕ್ರಿಕೆಟ್ ಮಂಡಳಿಯಿಂದ ಯಾವುದೇ ಸ್ಪಷ್ಟನೇ ಹೊರಬಂದಿಲ್ಲ. ವೈಯಕ್ತಿಕ ಕಾರಣಗಳನ್ನು ಮಾತ್ರ ಉಲ್ಲೇಖಿಸಿ ಬಿಸಿಸಿಐ ಈ ಹಿಂದೆ ಕೊಹ್ಲಿ ಬಗ್ಗೆ ಮಾಹಿತಿ ನೀಡಿತ್ತು. ಇತ್ತೀಚೆಗೆ, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮತ್ತು ವಿರಾಟ್ ಕೊಹ್ಲಿಯ ಆತ್ಮೀಯ ಸ್ನೇಹಿತ ಎಬಿ ಡಿವಿಲಿಯರ್ಸ್, ವಿರಾಟ್ ಪ್ರಸ್ತುತ ತನ್ನ ಕುಟುಂಬದೊಂದಿಗೆ ಇದ್ದಾರೆ. ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿಕೊಂಡಿದ್ದರು. ಡಿವಿಲಿಯರ್ಸ್ ಅವರ ಈ ಹೇಳಿಕೆಯ ನಂತರ, ಅವರ ವೀಡಿಯೊ ವೈರಲ್ ಆಗಿದ್ದು, ಈ ಬಗ್ಗೆ ವಿರಾಟ್ ಅಥವಾ ಅವರ ಆಪ್ತರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Mohammed Siraj up for selection for the next Test in Rajkot #INDvENG
Jasprit Bumrah too is likely to play, but his workload will be a consideration https://t.co/nS0uXpTEsx pic.twitter.com/pYHeuJ0U6O
— ESPNcricinfo (@ESPNcricinfo) February 8, 2024
ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಆಡುವುದಿಲ್ಲ ಎಂದು ಕ್ರಿಕ್‌ಇನ್ಫೋ ಗುರುವಾರ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ತಿಳಿಸಿದೆ. ಮೊಹಮ್ಮದ್ ಸಿರಾಜ್ ಆಡುವುದು ಖಚಿತವಾದರೆ, ಜಸ್ಪ್ರೀತ್ ಬುಮ್ರಾ ಬಗ್ಗೆ ಸಸ್ಪೆನ್ಸ್ ಇದೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಬುಮ್ರಾ ಮೂರನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದಾರೆ ಎಂಬ ವರದಿಗಳಿವೆ.
The outlook for both KL Rahul and Ravindra Jadeja is positive, with India optimistic that at least one – if not both – will be available for the Rajkot Test #INDvENG
Read ▶️ https://t.co/rpZO7rKQO7 pic.twitter.com/YL8FiF0GAN
— ESPNcricinfo (@ESPNcricinfo) February 8, 2024
ಹೈದರಾಬಾದ್ ಟೆಸ್ಟ್‌ನಲ್ಲಿ ಕೊಹ್ಲಿ ಬದಲಿಗೆ ಕೆಎಲ್ ರಾಹುಲ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ವಿಶಾಖಪಟ್ಟಣಂ ಟೆಸ್ಟ್‌ಗೂ ಮುನ್ನ ಅವರು ಗಾಯಗೊಂಡಿದ್ದರು. ಈ ಕಾರಣಕ್ಕಾಗಿ ಅವರು ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿಲ್ಲ. ಅವರಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಇತ್ತೀಚಿನ ಮಾಹಿತಿ ಪ್ರಕಾರ, ರಾಹುಲ್ ಮೂರನೇ ಟೆಸ್ಟ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರೊಳಗೆ ಕಾಣಿಸಿಕೊಳ್ಳಲಿದ್ದು, ರವೀಂದ್ರ ಜಡೇಜಾ ಕೂಡ ಎರಡನೇ ಟೆಸ್ಟ್ ಪಂದ್ಯ ಆಡದ ಕಾರಣ ರಾಜ್ ಕೋಟ್ನಲ್ಲಿ ಆಡುವ ಭರವಸೆ ಇದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:56 pm, Thu, 8 February 24