IND vs ENG: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಂದ ಹಿಂದೆ ಸರಿದ ವಿರಾಟ್ ಕೊಹ್ಲಿ..!

|

Updated on: Jan 22, 2024 | 3:56 PM

IND vs ENG: ಈ ಸರಣಿಯ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿತ್ತು. ಏತನ್ಮಧ್ಯೆ, ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ ಎಂಬ ಶಾಕಿಂಗ್ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ.

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಂದ ಹಿಂದೆ ಸರಿದ ವಿರಾಟ್ ಕೊಹ್ಲಿ..!
ವಿರಾಟ್ ಕೊಹ್ಲಿ
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇದೇ ಜನವರಿ 25 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಹೈದರಾಬಾದ್​ಗೆ ಆಗಮಿಸಿದ್ದು, ಸಿದ್ದತೆಯಲ್ಲಿ ತೊಡಗಿಕೊಂಡಿವೆ. ಈ ಸರಣಿಯ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿತ್ತು. ಏತನ್ಮಧ್ಯೆ, ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ ಎಂಬ ಶಾಕಿಂಗ್ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ. ಬಿಸಿಸಿಐ (BCCI) ಕೂಡ ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ನೀಡಿದೆ.

ಮಾಹಿತಿ ನೀಡಿದ ಬಿಸಿಸಿಐ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುವುದಿಲ್ಲ. ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದಿರಲು ನಿರ್ಧರಿಸಿದ್ದಾರೆ ಎಂದು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದೆ.

ಅಫ್ಘಾನ್ ವಿರುದ್ಧವೂ ಕೊಹ್ಲಿ ಆಡಿರಲಿಲ್ಲ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯವನ್ನೂ ವಿರಾಟ್ ಕೊಹ್ಲಿ ಆಡಿರಲಿಲ್ಲ. ಮಗಳ ಜನ್ಮದಿನದ ಕಾರಣ ಕೊಹ್ಲಿ ಮೊದಲ ಟಿ20 ಪಂದ್ಯದಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಆ ಬಳಿಕ ಎರಡು ಮತ್ತು ಮೂರನೇ ಟಿ20 ಪಂದ್ಯದಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದರು. ಆದರೀಗ ಮಹತ್ವದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳನ್ನು ಕೊಹ್ಲಿ ಏಕೆ ಆಡುತ್ತಿಲ್ಲ ಎಂಬ ಮಾಹಿತಿ ಸದ್ಯಕ್ಕೆ ಹೊರಬಿದಿಲ್ಲ.

ಟೆಸ್ಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ದ್ವಿಶತಕ ಸಿಡಿಸಿದ ಭಾರತದ ಬ್ಯಾಟರ್ಸ್​ ಯಾರ್ಯಾರು ಗೊತ್ತಾ?

ಕೊನೆಯ 3 ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿಲ್ಲ

ವಿಶೇಷವೆಂದರೆ ಬಿಸಿಸಿಐ ಮೊದಲ ಎರಡು ಟೆಸ್ಟ್‌ಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ಕೊಹ್ಲಿ ಹೆಸರು ಸೇರಿತ್ತು. ಎರಡು ಮತ್ತು ಮೂರನೇ ಪಂದ್ಯಗಳ ನಡುವೆ ಸುಮಾರು ಒಂದು ವಾರದ ಅಂತರವಿರುವ ಕಾರಣ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ನಂತರ ಪ್ರಕಟಿಸಲಾಗುವುದು. ಒಟ್ಟು ಐದು ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ ಎಷ್ಟು ಪಂದ್ಯಗಳನ್ನು ಆಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Mon, 22 January 24