
ಭಾರತ ಮತ್ತು ಇಂಗ್ಲೆಂಡ್ ನಡುವಣ ತೆಂಡೂಲ್ಕರ್-ಅ್ಯಂಡರ್ಸನ್ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿವೆ. ಮೊದಲ ಮ್ಯಾಚ್ನಲ್ಲಿ ಇಂಗ್ಲೆಂಡ್ ತಂಡ 5 ವಿಕೆಟ್ಗಳ ಜಯ ಸಾಧಿಸಿದರೆ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 336 ರನ್ಗಳ ಅಮೋಘ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ 22 ರನ್ಗಳ ವಿಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.
ಇನ್ನು ಈ ಸರಣಿಯಲ್ಲಿ ಎರಡು ಪಂದ್ಯಗಳು ಉಳಿದಿದ್ದು, ಈ ಮ್ಯಾಚ್ಗಳು ಸರಣಿ ನಿರ್ಣಾಯಕ. ಅಂದರೆ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ಮುಂದಿನ ಮ್ಯಾಚ್ನಲ್ಲಿ ಗೆಲ್ಲಲೇಬೇಕು. ಹಾಗಿದ್ರೆ ಉಭಯ ತಂಡಗಳ ನಡುವಣ ಮುಂದಿನ ಮುಖಾಮುಖಿಯಾಗಿ ಯಾವಾಗ ಎಂದು ನೋಡೋಣ…
ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಅಂದರೆ ಮೂರನೇ ಮತ್ತು ನಾಲ್ಕನೇ ಟೆಸ್ಟ್ ನಡುವಣ 8 ದಿನಗಳ ಅಂತರವಿದೆ. ಈ ಎಂಟು ದಿನಗಳ ಬ್ರೇಕ್ ಬಳಿಕ ಉಭಯ ತಂಡಗಳು ಜುಲೈ 23 ರಿಂದ ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಕಣಕ್ಕಿಳಿಯಲಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿಯನ್ನು ಸಮಬಲಗೊಳಿಸಬಹುದು. ಅಲ್ಲದೆ ಅಂತಿಮ ಟೆಸ್ಟ್ ಪಂದ್ಯವನ್ನು ಫೈನಲ್ ಫೈಟ್ ಆಗಿ ಮಾರ್ಪಡಿಸಬಹುದು. ಹೀಗಾಗಿ 4ನೇ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.
ಒಂದು ವೇಳೆ ಟೀಮ್ ಇಂಡಿಯಾ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಜಯಗಳಿಸಿದರೆ, ಜುಲೈ 31 ರಿಂದ ಶುರುವಾಗಲಿರುವ ಕೊನೆಯ ಟೆಸ್ಟ್ ಪಂದ್ವವು ಫೈನಲ್ ಮ್ಯಾಚ್ ಆಗಿ ಮಾರ್ಪಡಲಿದೆ. ಈ ಮೂಲಕ ಟೀಮ್ ಇಂಡಿಯಾ ಮ್ಯಾಚೆಂಸ್ಟರ್ ಹಾಗೂ ಕೆನ್ನಿಂಗ್ಟನ್ ಓವಲ್ ಮೈದಾನಗಳಲ್ಲಿ ಜಯ ಸಾಧಿಸಿ, ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.
ಇಂಗ್ಲೆಂಡ್ ಟೆಸ್ಟ್ ತಂಡ: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲೀ ಪೋಪ್ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜೇಮಿ ಸ್ಮಿತ್ (ವಿಕೆಟ್ ಕೀಪರ್) , ಕ್ರಿಸ್ ವೋಕ್ಸ್ , ಬ್ರೈಡನ್ ಕಾರ್ಸ್ , ಜೋಫ್ರಾ ಆರ್ಚರ್ , ಜೇಮಿ ಓವರ್ಟನ್ , ಜೋಶ್ ಟಂಗ್ , ಸ್ಯಾಮ್ ಜೇಮ್ಸ್ ಕುಕ್ , ಗಸ್ ಅಟ್ಕಿನ್ಸನ್ , ಜೇಕಬ್ ಬೆಥೆಲ್.
ಇದನ್ನೂ ಓದಿ: ಟೀಮ್ ಇಂಡಿಯಾ ಸೋಲಿಗೆ ರವೀಂದ್ರ ಜಡೇಜಾ ಕಾರಣ..!
ಭಾರತ ಟೆಸ್ಟ್ ತಂಡ: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಕರುಣ್ ನಾಯರ್ , ಶುಭಮನ್ ಗಿಲ್ (ನಾಯಕ) , ರಿಷಭ್ ಪಂತ್ (ವಿಕೆಟ್ ಕೀಪರ್) , ನಿತೀಶ್ ಕುಮಾರ್ ರೆಡ್ಡಿ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ಆಕಾಶ್ ದೀಪ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ , ಧ್ರುವ ಜುರೆಲ್ , ಸಾಯಿ ಸುದರ್ಶನ್ , ಅರ್ಷದೀಪ್ ಸಿಂಗ್ , ಅಭಿಮನ್ಯು ಈಶ್ವರನ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್.