AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾ ಹೇಳುವುದನ್ನ ಕೇಳು… ಕೆಣಕಲು ಬಂದ ಸ್ಟೋಕ್ಸ್​ಗೆ ಯಶಸ್ವಿ ತಿರುಗೇಟು

England vs India, 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಮ್ಯಾಚ್​ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಾಯಕ ಶುಭ್​ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಭಾರತ ತಂಡವು ಮೊದಲ ದಿನದಾಟದಲ್ಲಿ 310 ರನ್​ ಕಲೆಹಾಕಿದೆ.

ನಾ ಹೇಳುವುದನ್ನ ಕೇಳು... ಕೆಣಕಲು ಬಂದ ಸ್ಟೋಕ್ಸ್​ಗೆ ಯಶಸ್ವಿ ತಿರುಗೇಟು
Yashasvi Jaiswal - Ben Stokes
ಝಾಹಿರ್ ಯೂಸುಫ್
|

Updated on:Jul 03, 2025 | 7:33 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಬರ್ಮಿಂಗ್ಹ್ಯಾಮ್​ನಲ್ಲಿ ನಡೆಯುತ್ತಿದೆ. ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೇವಲ 2 ರನ್ ಗಳಿಸಿ ಔಟಾಗಿದ್ದರು. ಇದಾಗ್ಯೂ ಮತ್ತೊಂದೆಡೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಯಶಸ್ವಿ ಜೈಸ್ವಾಲ್ ಆಂಗ್ಲ ಬೌಲರ್​ಗಳ ಬೆಂಡೆತ್ತಿದರು.

ಇತ್ತ ಜೈಸ್ವಾಲ್ ವಿಕೆಟ್ ಪಡೆಯಲು ಇಂಗ್ಲೆಂಡ್ ವೇಗಿಗಳು ಹರಸಾಹಸ ಪಟ್ಟಿದ್ದರು. ಇದರ ನಡುವೆ ದಾಳಿಗಿಳಿದ ಬೆನ್ ಸ್ಟೋಕ್ಸ್ ಟೀಮ್ ಇಂಡಿಯಾ ದಾಂಡಿಗನನ್ನು ಕೆಣಕುವ ಪ್ರಯತ್ನ ಮಾಡಿದ್ದಾರೆ. ಸ್ಟೋಕ್ಸ್ ಎಸೆತಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸುತ್ತಿದ್ದ ಯಶಸ್ವಿ ಜೈಸ್ವಾಲ್ ರನ್ ಓಡುವಾಗ ಇಂಗ್ಲೆಂಡ್ ನಾಯಕ ಅದೇನೋ ಗೊಣಗಿದ್ದಾರೆ. ತಕ್ಷಣವೇ ಜೈಸ್ವಾಲ್ ಸಹ ತಿರುಗೇಟು ನೀಡಿದ್ದಾರೆ.

ಆದರೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಮಾತಿನ ಚಕಮಕಿಗೆ ನಿಲ್ಲಲು ಸ್ಟೋಕ್ಸ್ ಮುಂದಾಗಲಿಲ್ಲ. ಈ ವೇಳೆ ನಾ ಹೇಳುವುದನ್ನ ಕೂಡ ಕೇಳಿ ಹೋಗಿ… ಎನ್ನುತ್ತಾ ಯಶಸ್ವಿ, ಬೆನ್ ಸ್ಟೋಕ್ಸ್ ರನ್ನು ಕೆಣಕುವ ಪ್ರಯತ್ನ ಮಾಡಿದ್ದಾರೆ. ಇದೀಗ ಈ ಸ್ಲೆಡ್ಜಿಂಗ್ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Some heated JAISBALL 🆚 BAZBALL on display! 👀#ENGvIND 👉 2nd Test, Day 1 | LIVE NOW on JioHotstar ➡ https://t.co/g6BryBoy3Y pic.twitter.com/ZJWy1ir2ih

— Star Sports (@StarSportsIndia) July 2, 2025

ಇಂಗ್ಲೆಂಡ್-ಭಾರತ 2ನೇ ಟೆಸ್ಟ್:

ಎಡ್ಜ್ ಬಾಸ್ಟನ್ ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 87 ರನ್ ಬಾರಿಸಿ ಔಟಾದರೆ, ಶುಭ್​ಮನ್ ಗಿಲ್ ಅಜೇಯ ಶತಕ ಸಿಡಿಸಿದ್ದಾರೆ. ಈ ಮೂಲಕ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 310 ರನ್ ಕಲೆಹಾಕಿದೆ. ಸದ್ಯ ಕ್ರೀಸ್ ನಲ್ಲಿ ಶುಭ್​ಮನ್ ಗಿಲ್ (114) ಹಾಗೂ ರವೀಂದ್ರ ಜಡೇಜಾ (41) ಬ್ಯಾಟಿಂಗ್ ಕಾಯ್ದುಕೊಂಡಿದ್ದು, ದ್ವಿತೀಯ ದಿನದಾಟದಲ್ಲಿ ಇನಿಂಗ್ಸ್ ಮುಂದುವರೆಸಲಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಶುಭ್​ಮನ್ ಗಿಲ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: IPL 2026: ಚೆನ್ನೈ ಸೂಪರ್ ಕಿಂಗ್ಸ್​ಗೆ ಸಂಜು ಸ್ಯಾಮ್ಸನ್?

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್.

Published On - 7:32 am, Thu, 3 July 25

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?