
ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿದೆ. ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೇವಲ 2 ರನ್ ಗಳಿಸಿ ಔಟಾಗಿದ್ದರು. ಇದಾಗ್ಯೂ ಮತ್ತೊಂದೆಡೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಯಶಸ್ವಿ ಜೈಸ್ವಾಲ್ ಆಂಗ್ಲ ಬೌಲರ್ಗಳ ಬೆಂಡೆತ್ತಿದರು.
ಇತ್ತ ಜೈಸ್ವಾಲ್ ವಿಕೆಟ್ ಪಡೆಯಲು ಇಂಗ್ಲೆಂಡ್ ವೇಗಿಗಳು ಹರಸಾಹಸ ಪಟ್ಟಿದ್ದರು. ಇದರ ನಡುವೆ ದಾಳಿಗಿಳಿದ ಬೆನ್ ಸ್ಟೋಕ್ಸ್ ಟೀಮ್ ಇಂಡಿಯಾ ದಾಂಡಿಗನನ್ನು ಕೆಣಕುವ ಪ್ರಯತ್ನ ಮಾಡಿದ್ದಾರೆ. ಸ್ಟೋಕ್ಸ್ ಎಸೆತಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸುತ್ತಿದ್ದ ಯಶಸ್ವಿ ಜೈಸ್ವಾಲ್ ರನ್ ಓಡುವಾಗ ಇಂಗ್ಲೆಂಡ್ ನಾಯಕ ಅದೇನೋ ಗೊಣಗಿದ್ದಾರೆ. ತಕ್ಷಣವೇ ಜೈಸ್ವಾಲ್ ಸಹ ತಿರುಗೇಟು ನೀಡಿದ್ದಾರೆ.
ಆದರೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಮಾತಿನ ಚಕಮಕಿಗೆ ನಿಲ್ಲಲು ಸ್ಟೋಕ್ಸ್ ಮುಂದಾಗಲಿಲ್ಲ. ಈ ವೇಳೆ ನಾ ಹೇಳುವುದನ್ನ ಕೂಡ ಕೇಳಿ ಹೋಗಿ… ಎನ್ನುತ್ತಾ ಯಶಸ್ವಿ, ಬೆನ್ ಸ್ಟೋಕ್ಸ್ ರನ್ನು ಕೆಣಕುವ ಪ್ರಯತ್ನ ಮಾಡಿದ್ದಾರೆ. ಇದೀಗ ಈ ಸ್ಲೆಡ್ಜಿಂಗ್ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Some heated JAISBALL 🆚 BAZBALL on display! 👀#ENGvIND 👉 2nd Test, Day 1 | LIVE NOW on JioHotstar ➡ https://t.co/g6BryBoy3Y pic.twitter.com/ZJWy1ir2ih
— Star Sports (@StarSportsIndia) July 2, 2025
ಎಡ್ಜ್ ಬಾಸ್ಟನ್ ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 87 ರನ್ ಬಾರಿಸಿ ಔಟಾದರೆ, ಶುಭ್ಮನ್ ಗಿಲ್ ಅಜೇಯ ಶತಕ ಸಿಡಿಸಿದ್ದಾರೆ. ಈ ಮೂಲಕ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 310 ರನ್ ಕಲೆಹಾಕಿದೆ. ಸದ್ಯ ಕ್ರೀಸ್ ನಲ್ಲಿ ಶುಭ್ಮನ್ ಗಿಲ್ (114) ಹಾಗೂ ರವೀಂದ್ರ ಜಡೇಜಾ (41) ಬ್ಯಾಟಿಂಗ್ ಕಾಯ್ದುಕೊಂಡಿದ್ದು, ದ್ವಿತೀಯ ದಿನದಾಟದಲ್ಲಿ ಇನಿಂಗ್ಸ್ ಮುಂದುವರೆಸಲಿದ್ದಾರೆ.
ಭಾರತ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಶುಭ್ಮನ್ ಗಿಲ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಇದನ್ನೂ ಓದಿ: IPL 2026: ಚೆನ್ನೈ ಸೂಪರ್ ಕಿಂಗ್ಸ್ಗೆ ಸಂಜು ಸ್ಯಾಮ್ಸನ್?
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್.
Published On - 7:32 am, Thu, 3 July 25