IND vs IRE: ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಇಲ್ಲಿದೆ ಡಬ್ಲಿನ್ ಹವಾಮಾನ ವರದಿ
Dublin Weather Forecast: ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದೆ. ಮೂರನೇ ಹಾಗೂ ಅಂತಿಮ ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ. ಎಲ್ಲಾ ಮೂರು ಪಂದ್ಯಗಳು ಡಬ್ಲಿನ್‌ನ ದಿ ವಿಲೇಜ್ ಮೈದಾನದಲ್ಲಿ ನಡೆಯಲ್ಲಿವೆ. ಇನ್ನು ಪಂದ್ಯದ ದಿನ ಡಬ್ಲಿನ್‌ನ ಹವಾಮಾನ ಹೇಗಿರಲಿದೆ ಎಂಬುದರ ಸ್ಪಷ್ಟ ಚಿತ್ರಣ ಹೊರಬಿದ್ದಿದೆ.
ಟೀಂ ಇಂಡಿಯಾದ ಯುವ ಬ್ರಿಗೇಡ್ ಇದೀಗ ಐರ್ಲೆಂಡ್ (India vs Ireland) ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಸಜ್ಜಾಗಿದೆ. ಗಾಯದ ನಂತರ ಮರಳಿದ ಜಸ್ಪ್ರೀತ್ ಬುಮ್ರಾಗೆ (Jasprit Bumrah) ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಪುಣೆ ಮೂಲದ ರುತುರಾಜ್ ಗಾಯಕ್ವಾಡ್ (Ruturaj Gaikwad) ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಈ ಸರಣಿಯಲ್ಲಿ ಹಲವು ಯುವ ಆಟಗಾರರಿಗೆ ಟೀಂ ಇಂಡಿಯಾ ಅವಕಾಶ ನೀಡಿದೆ. ಇದರಲ್ಲಿ ರಿಂಕು ಸಿಂಗ್ (Rinku Singh) ಹೆಸರು ಪ್ರಮುಖವಾಗಿದೆ. ಇವರಲ್ಲದೆ ಶಿವಂ ದುಬೆ, ಅವೇಶ್ ಖಾನ್, ಶಹಬಾಜ್ ಅಹ್ಮದ್, ಪ್ರಸಿದ್ಧ್ ಕೃಷ್ಣ ಮತ್ತು ವಾಷಿಂಗ್ಟನ್ ಸುಂದರ್ ಕೂಡ ತಂಡಕ್ಕೆ ಪುನರಾಗಮನ ಮಾಡಿದ್ದಾರೆ.
ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದೆ. ಮೂರನೇ ಹಾಗೂ ಅಂತಿಮ ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ. ಎಲ್ಲಾ ಮೂರು ಪಂದ್ಯಗಳು ಡಬ್ಲಿನ್‌ನ ದಿ ವಿಲೇಜ್ ಮೈದಾನದಲ್ಲಿ ನಡೆಯಲ್ಲಿವೆ. ವೇಳಾಪಟ್ಟಿಯ ಪ್ರಕಾರ ಮೊದಲ ಟಿ20 ಪಂದ್ಯ ಇದೇ ಶುಕ್ರವಾರ ನಡೆಯಲ್ಲಿದ್ದು, ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪಂದ್ಯ ಆರಂಭವಾಗಲಿದೆ. ಇನ್ನು ಪಂದ್ಯದ ದಿನ ಡಬ್ಲಿನ್‌ನ ಹವಾಮಾನ ಹೇಗಿರಲಿದೆ ಎಂಬುದರ ಸ್ಪಷ್ಟ ಚಿತ್ರಣ ಹೊರಬಿದ್ದಿದೆ.
IND vs IRE 1st T20: ಸಂಜುಗೆ ಕೊನೆಯ ಅವಕಾಶ? ಐರ್ಲೆಂಡ್ ವಿರುದ್ಧ ಭಾರತ ಸಂಭಾವ್ಯ ತಂಡ ಹೀಗಿದೆ
ಡಬ್ಲಿನ್ ಹವಾಮಾನ ವರದಿ
ಡಬ್ಲಿನ್ ಹವಾಮಾನ ವರದಿಯ ಪ್ರಕಾರ, ಶುಕ್ರವಾರ, ಆಗಸ್ಟ್ 18 ರಂದು ಡಬ್ಲಿನ್‌ನ ದಿ ವಿಲೇಜ್‌ನಲ್ಲಿ ನಡೆಯುವ ಮೊದಲ ಟಿ20 ಪಂದ್ಯಕ್ಕೆ ಮಳೆ ವಿಲನ್ ಆಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಪಂದ್ಯದ ದಿನ 90 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಸುಮಾರು 6 ಮಿಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಉಭಯ ತಂಡಗಳು
ಟೀಂ ಇಂಡಿಯಾ: ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಲೋರ್ಕನ್ ಟಕರ್ (ವಿಕೆಟ್ ಕೀಫರ್), ಮಾರ್ಕ್ ಅಡೈರ್, ಜೋಶುವಾ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್‌ಕೋಮ್, ಬೆಂಜಮಿನ್ ವೈಟ್, ಕ್ರೇಗ್ ಯಂಗ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ