IND vs IRE: 3 ಸರಣಿಯಲ್ಲಿ ಮೂವರು ನಾಯಕರುಗಳು..!

| Updated By: ಝಾಹಿರ್ ಯೂಸುಫ್

Updated on: Aug 16, 2023 | 5:07 PM

IND vs IRE: ಟೀಮ್ ಇಂಡಿಯಾ ಪರ ಹೊಸ ಭರವಸೆ ಮೂಡಿಸಿರುವ ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ಆತಿಥೇಯರ ವಿರುದ್ಧ ಟೀಮ್ ಇಂಡಿಯಾದ ಗೆಲುವನ್ನು ನಿರೀಕ್ಷಿಸಬಹುದು.  ಐರ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಟಿ20 ತಂಡ ಈ ಕೆಳಗಿನಂತಿದೆ.

IND vs IRE: 3 ಸರಣಿಯಲ್ಲಿ ಮೂವರು ನಾಯಕರುಗಳು..!
Jasprit Bumrah
Follow us on

IND vs IRE: ಭಾರತ-ಐರ್ಲೆಂಡ್ ನಡುವಣ ಟಿ20 ಸರಣಿ ಆಗಸ್ಟ್ 18 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡವು 3 ಟಿ20 ಪಂದ್ಯಗಳನ್ನಾಡಲಿದೆ. ಈ ಬಾರಿ ಭಾರತ ತಂಡವನ್ನು ಮುನ್ನಡೆಸುತ್ತಿರುವುದು ಜಸ್​ಪ್ರೀತ್ ಬುಮ್ರಾ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಇದುವರೆಗೆ ಕೇವಲ 3 ಬಾರಿ ಮಾತ್ರ ಐರ್ಲೆಂಡ್​ ಪ್ರವಾಸ ಮಾಡಿದೆ. ಈ ಮೂರು ಸರಣಿಯಲ್ಲೂ ಹೊಸ ನಾಯಕರುಗಳು ಕಾಣಿಸಿಕೊಂಡಿದ್ದಾರೆ.

  • 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಆಡಿತ್ತು.
  • 2022 ರಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು ಹಾರ್ದಿಕ್ ಪಾಂಡ್ಯ.
  • 2023 ರಲ್ಲಿ ಇದೀಗ ಜಸ್​ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸ ಕೈಗೊಂಡಿದೆ.

ಪ್ರಮುಖ ಆಟಗಾರರಿಗೆ ವಿಶ್ರಾಂತಿ:

ಐರ್ಲೆಂಡ್ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಏಷ್ಯಾಕಪ್.

ಆಗಸ್ಟ್ 30 ರಿಂದ ಏಷ್ಯಾಕಪ್ ಶುರುವಾಗಲಿದೆ. ಈ ಬಾರಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್ ಜರುಗಲಿದ್ದು, ಹೀಗಾಗಿ ಟಿ20 ಸರಣಿಯಿಂದ ಪ್ರಮುಖ ಆಟಗಾರರನ್ನು ಹೊರಗಿಡಲಾಗಿದೆ.

ಬೂಮ್ ಬೂಮ್ ಕಂಬ್ಯಾಕ್:

ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಜಸ್​ಪ್ರೀತ್ ಬುಮ್ರಾ ಮತ್ತೆ ಟೀಮ್ ಇಂಡಿಯಾ ಪರ ಕಾಣಿಸಿಕೊಳ್ಳಲಿದ್ದಾರೆ. ಅಂದರೆ 2022 ರಲ್ಲಿ ಗಾಯಗೊಂಡಿದ್ದ ಬುಮ್ರಾ ಆ ಬಳಿಕ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಡಿರಲಿಲ್ಲ. ಇದೀಗ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿರುವ ಬುಮ್ರಾ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಯುವ ಆಟಗಾರರಿಗೆ ಅವಕಾಶ:

ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಐರ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿರುವ ಕಾರಣ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಲಭಿಸಿದೆ. ಅದರಂತೆ ಇದೇ ಮೊದಲ ಬಾರಿಗೆ ರಿಂಕು ಸಿಂಗ್, ಜಿತೇಶ್ ಶರ್ಮಾ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ಈ ಹಿಂದೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿ ಮರೆಯಾಗಿದ್ದ ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಶಹಬಾಝ್ ಅಹ್ಮದ್, ಪ್ರಸಿದ್ಧ್ ಕೃಷ್ಣ ಕೂಡ ತಂಡಕ್ಕೆ ಮರಳಿದ್ದಾರೆ.

ಇವರಲ್ಲದೆ ಟೀಮ್ ಇಂಡಿಯಾ ಪರ ಹೊಸ ಭರವಸೆ ಮೂಡಿಸಿರುವ ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ಆತಿಥೇಯರ ವಿರುದ್ಧ ಟೀಮ್ ಇಂಡಿಯಾದ ಗೆಲುವನ್ನು ನಿರೀಕ್ಷಿಸಬಹುದು.  ಐರ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಟಿ20 ತಂಡ ಈ ಕೆಳಗಿನಂತಿದೆ.

ಭಾರತ ಟಿ20 ತಂಡ:

ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಶಹಬಾಝ್ ಅಹ್ಮದ್, ಸಂಜು ಸ್ಯಾಮ್ಸನ್, ಜಿತೇಶ್ ಶರ್ಮಾ, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಭಾರತ-ಐರ್ಲೆಂಡ್ ಟಿ20 ಸರಣಿ ವೇಳಾಪಟ್ಟಿ:

  1. ಆಗಸ್ಟ್ 18- ಮೊದಲ ಟಿ20 ಪಂದ್ಯ
  2. ಆಗಸ್ಟ್ 20- ಎರಡನೇ ಟಿ20 ಪಂದ್ಯ
  3. ಆಗಸ್ಟ್ 22- ಮೂರನೇ ಟಿ20 ಪಂದ್ಯ

ಇದನ್ನೂ ಓದಿ: ಭಾರತ ವಿಶ್ವಕಪ್ ತಂಡದಿಂದ 7 ಆಟಗಾರರು ಔಟ್..!

ಈ ಎಲ್ಲಾ ಪಂದ್ಯಗಳು ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ. ಹಾಗೆಯೇ ಈ ಪಂದ್ಯಗಳ ನೇರಪ್ರಸಾರವನ್ನು ಸ್ಪೋರ್ಟ್ಸ್​ 18 ಚಾನೆಲ್ ಹಾಗೂ ಜಿಯೋ ಸಿನಿಮಾ ಆ್ಯಪ್​ನಲ್ಲಿ ವೀಕ್ಷಿಸಬಹುದು.